ಸಮಗ್ರ ನ್ಯೂಸ್: ಉಡುಪಿಯ ನೇತ್ರ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ವಾಶ್ ರೂಂ (ಶೌಚಾಲಯ)ನಲ್ಲಿ ಮೊಬೈಲಿಟ್ಟು ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮಾಡಿದ್ದಾರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಂತ್ರಸ್ತ ವಿದ್ಯಾರ್ಥಿನಿ ದೂರು ನೀಡಲು ಮುಂದೆ ಬಾರದ ಹಿನ್ನಲೆಯಲ್ಲಿ , ಸಾರ್ವಜನಿಕ ವಲಯದಲ್ಲಿ ಪ್ರಕರಣದ ತನಿಖೆ ನಡೆಸುವಂತೆ ಒತ್ತಡ ಹೆಚ್ಚಿದ ಬಳಿಕ ಗತ್ಯಂತರವಿಲ್ಲದೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೃತ್ಯ ಬಹಿರಂಗ ವಾರದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಜಿ.ಬಿ. ನೀಡಿದ ದೂರಿನಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಮೂವರು ವಿದ್ಯಾರ್ಥಿನಿಯರ ವಿರುದ್ಧ ಕಲಂ: 509,204,175,34 2,,, 66(E) IT ACT ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಧ್ಯಾರ್ಥಿನಿಯರ ಹಾಗೂ ಆಡಳಿತ ಮಂಡಳಿಯ ವಿರುದ್ಧ ಸತ್ಯಾಸತ್ಯತೆಯನ್ನು ಪತ್ತೆ ಹಚ್ಚುವ ಉದ್ದೇಶದಿಂದ ಈ ದೂರನ್ನು ನೀಡುತ್ತಿದ್ದು, ಇದನ್ನು ಸ್ವೀಕರಿಸಿ, ದೂರು ದಾಖಲಿಸಿ ಸೂಕ್ತ ತನಿಖೆ ನಡೆಸಬೇಕೆಂದು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಖಾಸಗಿತನಕ್ಕೆ ಧಕ್ಕೆ ಆಗುವ ವಿಡಿಯೋ ಕಾಲೇಜ್ ಕ್ಯಾಂಪಸ್ ನಲ್ಲಿ ಚಿತ್ರೀಕರಣವಾಗಿದೆ. ವಿಷಯ ಬಹಿರಂಗವಾಗುತ್ತಲೇ ವೀಡಿಯೋ ಡಿಲೀಟ್ ಮಾಡಿರುವುದಾಗಿ ಆಡಳಿತ ಮಂಡಳಿ ಹೇಳಿದೆ. ಅದ್ದರಿಂದ ಇದೊಂದು ಗಂಭೀರವಾದ ಅಪರಾಧ ಕೃತ್ಯವಾಗಿದೆ. ಅಲ್ಲದೇ ವಿಡಿಯೋ ಮಾಡಿದ ವಿದ್ಯಾರ್ಥಿನಿಯರು ಬಳಿಕ ತಪ್ಪೋಪ್ಪಿಕೊಂಡಿರುವುದಾಗಿ ಬಗ್ಗೆ ಆಡಳಿತ ಮಂಡಳಿ ತಿಳಿಸಿದೆ. ಹೀಗಾಗಿ ಪ್ರಕರಣದ ಸತ್ಯಾಸತ್ಯತೆ ಪತ್ತೆ ಹಚ್ಚುವ ಉದ್ದೇಶದಿಂದ ಪ್ರಕರಣ ದಾಖಲು ಮಾಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.