ಕಾಸರಗೋಡು: ಹತ್ತನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ – ತನಿಖೆ ಆರಂಭ

ಸಮಗ್ರ ನ್ಯೂಸ್: ಮನೆಯಿಂದ ಹೊರಗೆ ಹೋಗಿದ್ದ ಹತ್ತನೇ ತರಗತಿ ವಿದ್ಯಾರ್ಥಿನಿಯ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಜು. 23 ರಂದು ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

Ad Widget ... ..

ಕುತ್ತಿಗೆ ಬಿಗಿದು ಸಾವು ಸಂಭವಿಸಿದೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದ್ದರೂ ಯಾಕಾಗಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬುದಕ್ಕೆ ಕಾರಣ ತಿಳಿದು ಬಂದಿಲ್ಲ.

Ad Widget

ಕನ್ಯಪ್ಪಾಡಿ ಮಾಡತ್ತಡ್ಕ ಕೇರ ನಿವಾಸಿ ರಾಮಕೃಷ್ಣ ಅವರ ಪುತ್ರಿ ರಶ್ಮಿತಾ ಕೆ. ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಬೀಡಿ ಹಾಗೂ ಬೆಂಕಿ ಪೊಟ್ಟಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಇದಕ್ಕೆ ಸಂಭಂದಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *