ಸಮಗ್ರ ನ್ಯೂಸ್: ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲ ಹಾಗೂ ಯುವಮೋರ್ಚಾ ಸುಳ್ಯ ಮಂಡಲ ಇದರ ವತಿಯಿಂದ ಜಿಹಾದಿಗಳಿಂದ ಹತ್ಯೆಗೀಡಾದ ಬಿಜೆಪಿಯ ಯುವ ಮುಖಂಡ ಹುತಾತ್ಮ ಪ್ರವೀಣ್ ನೆಟ್ಟಾರು ಅವರ ಸ್ಮೃತಿ ದಿನ ಹಾಗೂ ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವು ಬೆಳ್ಳಾರೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪ್ರವೀಣ್ ನೆಟ್ಟಾರು ಮನೆಯ ಪರಿಸರದಲ್ಲಿರುವ ಅವರ ಪ್ರತಿಮೆಗೆ ಹೂವಿನ ಹಾರ ಅರ್ಪಣೆ ಮಾಡಲಾಯಿತು. ಬಳಿಕ ಜೆ.ಡಿ ಆಡಿಟೋರಿಯಂನಲ್ಲಿ ರಕ್ತದಾನ ಶಿಬಿರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ದೀಪವನ್ನು ಬೆಳಗಿಸುವುದರ ಮೂಲಕ ಚಾಲನೆಯನ್ನು ನೀಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಗುರುದತ್ ನಾಯಕ್,ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕೃಷ್ಣ ಎಂ ಆರ್, ಪ್ರವೀಣ್ ಅವರ ತಂದೆ ಶೇಖರ ಪೂಜಾರಿ ದಂಪತಿಗಳು ವೇದಿಕೆಯಲ್ಲಿದ್ದರು. ಕಾರ್ಯಕರ್ತರು, ರಕ್ತದಾನಿಗಳು, ಉಪಸ್ಥಿತಿದ್ದರು.