ಸಮಗ್ರ ನ್ಯೂಸ್: ನೈರುತ್ಯ ಮುಂಗಾರು ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 26ರಂದು ಕಲಬುರಗಿ, ಉಡುಪಿ, ಬೀದರ, ಚಿಕ್ಕಮಗಳೂರು, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಚ್’ ಹಾಗೂ ಹಾಸನ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ‘ಯಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಜುಲೈ 27ರಂದು ವಿಜಯಪುರ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು ಜಿಲ್ಲೆಗಳಿಗೆ ‘ಯಲ್ಲೋ ಅಲರ್ಚ್ ನೀಡಲಾಗಿದೆ. ಜುಲೈ 28ರಂದು ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಿಗೆ ‘ಯಲ್ಲೋ ಅಲರ್ಟ್’ ಘೋಷಿಸಲಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.