Ad Widget .

ಪುತ್ತೂರು: ಸವಣೂರು ಸೀತಾರಾಮ ರೈ ಸಾರಥ್ಯದಲ್ಲಿ ಆಟಿಡೊಂಜಿ ದಿನ| “ತುಳುವೆರ ಆಟಿ” ಲೇಖನ ಬಿಡುಗಡೆ

ಸಮಗ್ರ ನ್ಯೂಸ್: ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತರಾಮಯ್ಯ ರೈ ಅವರ ಅಧ್ಯಕ್ಷತೆಯಲ್ಲಿ ಆಟಿಡೊಂಜಿ ದಿನ ಜು. 29ರಂದು ಪುತ್ತೂರಿನ ಪ್ರಶಾಂತ್ ಮಹಲ್ ನ ಸನ್ನಿಧಿ ಸಭಾ ಭವನದಲ್ಲಿ ನಡೆಯಿತು.

Ad Widget . Ad Widget .

ತುಳು ಜಾನಪದ ಸಾಂಸ್ಕೃತಿಕ ಕಾರ್ಯಕ್ರಮ, ಆಟಿಯ ಆಟಗಳು ಮತ್ತು ಸಭಾ ಕಾರ್ಯಕ್ರಮದ ಅಧ್ಯಕ್ಷರಾದ ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತರಾಮಯ್ಯ ರೈ ಪ್ರಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

Ad Widget . Ad Widget .

ಕನ್ನಡ ಪ್ರಾಧ್ಯಾಪಕ ಹಾಗೂ ಅಂಕಣಕಾರ ನರೇಂದ್ರ ರೈ ದೇರ್ಲ ಅವರು “ತುಳುವೆರ ಆಟಿ” ಲೇಖನ ವಿಜಯಕುಮಾರ್ ಹೆಬ್ಬಾರ ಬೈಲ್ ಸಂಪಾದಕತ್ವದ ಪೂವರಿ ಪತ್ರಿಕೆ ಬಿಡುಗಡೆಗೊಳಿಸಿ ಕಾರ್ಯಕ್ರಮದ ಕುರಿತು ಉಪನ್ಯಾಸ ನೀಡಿದರು.

ವೇದಿಕೆಯಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ, ಪುತ್ತೂರು ರೋಟರಿ ಕ್ಲಬ್ ಅಧ್ಯಕ್ಷ ಜಯರಾಜ್ ಭಂಡಾರಿ ಮತ್ತು ನಮ್ಮ ಟಿವಿ ಚಾನೆಲ್ ನಿರೂಪಕ ನವೀನ್ ಶೆಟ್ಟಿ ಉಪಸ್ಥಿತರಿದ್ದರು. ಪ್ರಜ್ಞಾ ಒಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.

ಈ ಕಾರ್ಯಕ್ರಮದಲ್ಲಿ ಮಧ್ಯಾಹ್ನ 49 ಬಗೆಯ ತಿನಿಸುಗಳ ಭರ್ಜರಿ ಭೋಜನ ನಡೆಯಿತು. ನಂತರ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Leave a Comment

Your email address will not be published. Required fields are marked *