Ad Widget .

ಮಂಗಳೂರು: ನೀರಿನಲ್ಲಿ ಮುಳುಗಿ ಯುವಕರಿಬ್ಬರು ಮೃತ್ಯು

ಸಮಗ್ರ ನ್ಯೂಸ್: ಮಂಗಳೂರು ನಗರದ ಪಡೀಲ್ ಅಳಪೆ ಪಡ್ಪು ರೈಲ್ವೇ ಬ್ರಿಡ್ಜ್ ಸಮೀಪ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ಜು. 30 ರಂದು ನಡೆದಿದೆ.

Ad Widget . Ad Widget .

ಅಳಪೆ ಪಡ್ಪುರೆಂಜ ನಿವಾಸಿ ವರುಣ್ (27) ಮತ್ತು ಎಕ್ಕೂರು ಕೆಎಚ್‌ಬಿ ಕಾಲನಿ ನಿವಾಸಿ ವೀಕ್ಷಿತ್ (28) ಮೃತಪಟ್ಟ ಯುವಕರು. ಜು.30 ರಂದು ಸಂಜೆ ವೇಳೆ 6 ಮಂದಿ ಗೆಳೆಯರು ಒಟ್ಟಾಗಿ ಕ್ರಿಕೆಟ್ ಆಡಲು ತೆರಳಿದ್ದರು. ಈ ಸಂದರ್ಭ ವರುಣ್ ಮತ್ತು ವೀಕ್ಷಿತ್ ರೈಲ್ವೆಯ ಟ್ರಾಕ್ ಪಕ್ಕದ ಹಳ್ಳದ ದಡದಲ್ಲೇ ಕುಳಿತಿದ್ದರು. ಉಳಿದವರು ಕ್ರಿಕೆಟ್ ಮೈದಾನಕ್ಕೆ ತೆರಳಿದ್ದರು. ಇವರಿಬ್ಬರನ್ನೂ ಆಟಕ್ಕೆ ಬರುವಂತೆ ಒತ್ತಾಯಿಸಿದರೂ ಅವರು ಹೋಗಲಿಲ್ಲ ಎಂದು ತಿಳಿದುಬಂದಿದೆ.

Ad Widget . Ad Widget .

ಇನ್ನು ಹಳ್ಳದ ದಡದಲ್ಲಿ ಕುಳಿತಿದ್ದ ಸಂದರ್ಭ ವರುಣ್ ನೀರಿಗೆ ಬಿದ್ದಿದ್ದು, ಅದನ್ನು ನೋಡಿದ ವೀಕ್ಷಿತ್ ಕೂಡಲೇ ಹಳ್ಳಕ್ಕೆ ಹಾರಿ ರಕ್ಷಿಸಲು ಪ್ರಯತ್ನಿಸಿದರು. ಆದರೆ ಹಳ್ಳದಲ್ಲಿ ಹೂಳು ತುಂಬಿದ್ದ ಕಾರಣ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ.

ಸ್ಥಳೀಯರು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಬಳಿಕ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ.

Leave a Comment

Your email address will not be published. Required fields are marked *