Ad Widget .

ರಾಜ್ಯದಲ್ಲಿ ಹೆಚ್ಚಿದ ʻಮದ್ರಾಸ್ ಐʼ ಪ್ರಕರಣ|ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಆತಂಕ ಸೃಷ್ಟಿಸಿರುವ ʻಮದ್ರಾಸ್‌ ಐʼ (Madras Eye) ವೈರಾಣುವಿನಿಂದ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

Ad Widget . Ad Widget .

ಕಂಜಕ್ಟಿವೈಟಿಸ್ (Conjunctivitis) ಎಂದು ಕರೆಯಲಾಗುವ ಮದ್ರಾಸ್ ಐ ಅಥವಾ `ಕಣ್ಣು’ ವೈರಾಣುಗಳಿಂದ ಹರಡುವ ಕಣ್ಣಿನ ಸಮಸ್ಯೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದಾಗ ಅಥವಾ ಚಳಿ ವಾತಾವರಣದಲ್ಲಿ ಹುಟ್ಟಿಕೊಳ್ಳುವ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮ ಉಂಟುಮಾಡುತ್ತದೆ. ಈ ಬಾರಿ ರಾಜ್ಯದಲ್ಲಿ ಮಳೆಗಾಲಕ್ಕೂ ಮುನ್ನವೇ ʻಮದ್ರಾಸ್‌ ಐʼ ಪ್ರಕರಣ ಕಾಲಿಟ್ಟಿತ್ತು. ಈ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

Ad Widget . Ad Widget .

ಈ ರೋಗದ ಲಕ್ಷಣಗಳು:
1.ಕಣ್ಣು ಕೆಂಪಾಗುವುದು, ನೀರು ಸೋರುವಿಕೆ
2.ಅತಿಯಾದ ಕಣ್ಣೀರು
3.ಕಣ್ಣಿನಲ್ಲಿ ತುರಿಕೆ
4.ಸತತ ಕಣ್ಣು ನೋವು ಮತ್ತು ಚುಚ್ಚುವಿಕೆ
5.ಬೆಳಕನ್ನು ನೋಡಲು ಸಾಧ್ಯವಾಗದೇ ಇರುವುದು
6.ದೃಷ್ಟಿ ಮಂಜಾಗುವುದು
7.ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತದಿಂದ ಕೂಡಿರುವುದು

ಹೇಗೆ ಮುಜಾಗ್ರತೆ ವಹಿಸುವುದು ?
1.ವೈಯಕ್ತಿಕವಾಗಿ ಸ್ವಚ್ಛತೆಗೆ ಆದ್ಯತೆ ಕೊಡಿ
2.ಆರೋಗ್ಯವಂತ ವ್ಯಕ್ತಿಯು ಸೊಂಕು ಇರುವ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರ ಇರುವುದು
3.ಸೋಂಕಿತ ವ್ಯಕ್ತಿ ಬಳಸಿದ ಕರವಸ್ತ್ರ ಮತ್ತು ಇತರ ವಸ್ತುಗಳನ್ನ‌ ಬಳಸಬಾರದು
4.ಆಗಾಗ್ಗೆ ಸೋಪು ನೀರಿನಿಂದ ಕೈಗಳನ್ನ ತೊಳೆಯಬೇಕು
5.ಸೋಂಕಿತ ವ್ಯಕ್ತಿಗಳಿಗೆ ಶೀತ, ಜ್ವರ, ಕೆಮ್ಮು ಇದ್ದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು
6.ತೀವ್ರ ಸೋಂಕು ಉಂಟಾದರೆ ತಕ್ಷಣವೇ ನೇತ್ರ ತಜ್ಞರನ್ನ ಭೇಟಿ ಮಾಡಬೇಕು.

ಏನು ಮಾಡಬೇಕು ?
1.ಸ್ಪಚ್ಫವಾದ ನೀರಿನಿಂದ ಕಣ್ಣುಗಳನ್ನ ಶುಚಿಗೊಳಿಸಿ
2.ಸೋಂಕು ಕಂಡು ಬಂದ ತಕ್ಷಣವೇ ವೈದ್ಯರಿಂದ ಚಿಕಿತ್ಸೆ ಪಡೆಯಿರಿ
3.ಸೋಂಕಿತ ವ್ಯಕ್ತಿಗಳಿಗೆ ಪೌಷ್ಟಿಕ ಆಹಾರ ಕೊಡಬೇಕು
4.ಸೋಂಕಿತ ವ್ಯಕ್ತಿಗಳು ಬಳಸಿದ ಕರವಸ್ತ್ರ, ಇತರ ವಸ್ತುಗಳನ್ನ ಸಂಸ್ಕರಿಸಿ ಬಳಸಿರಿ

ಏನು ಮಾಡಬಾರದು ?
1.ಕೈಗಳಿಂದ ಪದೇ ಪದೇ ಕಣ್ಣುಗಳನ್ನ ಮುಟ್ಟಬೇಡಿ
2.ಸ್ವಯಂ ಚಿಕಿತ್ಸಾ ವಿಧಾನಗಳನ್ನ ಮಾಡಬಾರದು
3.ಸೋಂಕಿತ ವ್ಯಕ್ತಿಯ ಸನಿಹದಿಂದ ದೂರವಿರಿ
4.ಸೋಂಕಿತ ವ್ಯಕ್ತಿಗಳು ಬಳಸಿದ ವಸ್ತುಗಳನ್ನು ಮುಟ್ಟಬೇಡಿ

Leave a Comment

Your email address will not be published. Required fields are marked *