July 2023

ಬಿಸ್ಲೆ ಘಾಟ್ ನಲ್ಲಿ ಭೂಕುಸಿತ| ಬಿಸಿಲೆ- ಸುಬ್ರಹ್ಮಣ್ಯ ಸಂಚಾರ ಸ್ಥಗಿತ

ಸಮಗ್ರ ನ್ಯೂಸ್: ಬಿಸಿಲೆ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 87 ಬಿಸ್ಲೆ ಸಮೀಪದ ಹಡ್ಲುಗದ್ದೆ ಸಮೀಪ ಭೂಕುಸಿತದಿಂದ ಬಂದ್ ಆಗಿದ್ದು ಇದರಿಂದ ಬಿಸಿಲೆ ಭಾಗದಿಂದ ಸುಬ್ರಹ್ಮಣ್ಯ ನಡುವಿನ ರಸ್ತೆ ಸಂಪೂರ್ಣವಾಗಿ ಸಂಪರ್ಕ ಕಡಿತವಾಗಿದೆ. ಪ್ರಯಾಣಿಕರು ಶಿರಾಡಿ ಘಾಟ್ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳಬೇಕಾಗಿದೆ. ಈಗಾಗಲೇ ಈ ಮಾರ್ಗದಲ್ಲಿ ತೆರಳಿದ ಪ್ರಯಾಣಿಕರು ಸಂಕಷ್ಟ ಅನುಭವಿಸುವಂತಾಗಿದೆ. ತೆರವು‌ ಕಾರ್ಯಾಚರಣೆ ನಡೆಯುತ್ತಿರುವುದಾಗಿ ವರದಿಗಳು ತಿಳಿಸಿವೆ.

ಬಿಸ್ಲೆ ಘಾಟ್ ನಲ್ಲಿ ಭೂಕುಸಿತ| ಬಿಸಿಲೆ- ಸುಬ್ರಹ್ಮಣ್ಯ ಸಂಚಾರ ಸ್ಥಗಿತ Read More »

ರೆಡ್ ಅಲರ್ಟ್ ಹಿನ್ನೆಲೆ; ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ (ಜು.25) ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲಾ, ಪಿಯು ಕಾಲೇಜುಗಳಿಗೆ ಮಂಗಳವಾರ (ಜು.25) ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ. ಸದ್ಯ ಕರಾವಳಿ ಸೇರಿದಂತೆ ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು, ನೆರೆ ನೀರು ಆವರಿಸಿ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ. ಉಡುಪಿ ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆ ಬೀಸುತ್ತಿದ್ದು. ವಿದ್ಯಾರ್ಥಿಗಳ ಮುಂಜಾಗ್ರತಾ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿ ಉಡುಪಿ ಜಿಲ್ಲಾದ್ಯಾಂತ ನಾಳೆ

ರೆಡ್ ಅಲರ್ಟ್ ಹಿನ್ನೆಲೆ; ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ (ಜು.25) ರಜೆ ಘೋಷಣೆ Read More »

ಸುಳ್ಯ: ಭಾರೀ ಮಳೆ ಹಿನ್ನೆಲೆ| ನಾಳೆ (ಜು.25) ತಾಲೂಕಿನ ಎಲ್ಲಾ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್:: ಸುಳ್ಯ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಮಳೆಯ ತೀವ್ರತೆ ಹೆಚ್ಚಿರುವ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು. 25ರಂದು ರಜೆ ಘೋಷಿಸಿ ಸುಳ್ಯ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ತಹಶೀಲ್ದಾರ್ ಆದೇಶ ನೀಡಿದ್ದಾರೆ.

ಸುಳ್ಯ: ಭಾರೀ ಮಳೆ ಹಿನ್ನೆಲೆ| ನಾಳೆ (ಜು.25) ತಾಲೂಕಿನ ಎಲ್ಲಾ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಭಾರೀ ಮಳೆ ಹಿನ್ನೆಲೆ| ಕೊಡಗು ಜಿಲ್ಲೆಯಲ್ಲಿ ಜು.25 ರಂದು ಶಾಲಾ ಕಾಲೇಜಿಗೆ ರಜೆ ವಿಸ್ತರಣೆ

ಸಮಗ್ರ ನ್ಯೂಸ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ಮಂಗಳವಾರ (ಜು.25) ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವೆಂಕಟ್‌ ರಾಜಾ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಸದ್ಯ ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವೆಡೆ ಪ್ರವಾಹ ಭೀತಿ ಎದುರಾಗಿದೆ. ಹಲವೆಡೆ ನದಿ ಪ್ರವಾಹ ನುಗ್ಗಿದ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ನಾಪೋಕ್ಲು – ಮೂರ್ನಾಡು ರಸ್ತೆ ಸಂಚಾರ ಬಂದ್ ಆಗಿದೆ. ಭಾಗಮಂಡಲದ ತ್ರಿವೇಣಿ

ಭಾರೀ ಮಳೆ ಹಿನ್ನೆಲೆ| ಕೊಡಗು ಜಿಲ್ಲೆಯಲ್ಲಿ ಜು.25 ರಂದು ಶಾಲಾ ಕಾಲೇಜಿಗೆ ರಜೆ ವಿಸ್ತರಣೆ Read More »

ಘಟ್ಟ ಪ್ರದೇಶದಲ್ಲಿ ಭಾರೀ ಮಳೆ| ಚಾರ್ಮಾಡಿ ಘಾಟಿಯಲ್ಲಿ ಮಣ್ಣು ಕುಸಿತ

ಸಮಗ್ರ ನ್ಯೂಸ್: ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕರಾವಳಿಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ರಸ್ತೆ ಸಂಪರ್ಕ‌ ಕಡಿತಗೊಳ್ಳುವ ಭೀತಿ‌ ಎದುರಾಗಿದೆ. ಮಳೆ ಅಬ್ಬರಕ್ಕೆ ಚಾರ್ಮಾಡಿ ಘಾಟಿಯಲ್ಲಿ ಮಣ್ಣು ಕುಸಿತ ಆರಂಭಗೊಂಡಿದ್ದು, ಟ್ರಾಫಿಕ್ ಜಾಮ್ ಉಂಟಾಗಿದೆ. ಹಲವು ಗಂಟೆಗಳ ವಾಹನ ಸಂಚಾರ ಬಂದ್ ಆಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಘಾಟ್ ರಸ್ತೆಯ ಆಲೆಕಾನ್- ಬಿದ್ರುತಳ ಮಧ್ಯದಲ್ಲಿ ರಸ್ತೆಗೆ ಮಣ್ಣು ಕುಸಿದ ಪರಿಣಾಮ ಸಂಚಾರ ವ್ಯತ್ಯಯ ಉಂಟಾಗಿದೆ. ಆತಂಕದಲ್ಲೇ ವಾಹನ ಸವಾರರು ಚಾಲನೆ ಮಾಡುತ್ತಿದ್ದು, ಸ್ಥಳದಲ್ಲಿ ತೆರವು ಕಾರ್ಯಾಚರಣೆ

ಘಟ್ಟ ಪ್ರದೇಶದಲ್ಲಿ ಭಾರೀ ಮಳೆ| ಚಾರ್ಮಾಡಿ ಘಾಟಿಯಲ್ಲಿ ಮಣ್ಣು ಕುಸಿತ Read More »

ಕುಕ್ಕೆಸುಬ್ರಹ್ಮಣ್ಯ: ನೆರೆನೀರು ದಾಟಿ ಪರೀಕ್ಷೆ ಬರೆದ ಪದವಿ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಸುಬ್ರಹ್ಮಣ್ಯ ಸಮೀಪದ ಕುಮಾರಧಾರ ಬಳಿ ಹೆದ್ದಾರಿ ಜಲಾವೃತಗೊಂಡಿದೆ. ಆದರೆ ಮಂಗಳೂರು ವಿ.ವಿ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದ್ದು, ಅಪಾಯಕಾರಿ ಸ್ಥಿತಿಯಲ್ಲಿ ಉಕ್ಕಿ ಹರಿದ ಪ್ರವಾಹ ನೀರಿನಲ್ಲಿ ಸಂಚರಿಸಿ ಪರೀಕ್ಷೆಗೆ ಬರೆದ ಘಟನೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಮಳೆ ಇದ್ದರೂ ಜಿಲ್ಲೆಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿರಲಿಲ್ಲ. ಮಾತ್ರವಲ್ಲದೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆ ನಡೆಯುತ್ತಿದೆ. ಪಂಜ ಭಾಗದಿಂದ ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿಗೆ ಪರೀಕ್ಷೆ ಹಾಜರಾಗಲು

ಕುಕ್ಕೆಸುಬ್ರಹ್ಮಣ್ಯ: ನೆರೆನೀರು ದಾಟಿ ಪರೀಕ್ಷೆ ಬರೆದ ಪದವಿ ವಿದ್ಯಾರ್ಥಿಗಳು Read More »

ಕರಾವಳಿಯಲ್ಲಿ ಕುಂಭದ್ರೋಣ ಮಳೆ| ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ

ಸಮಗ್ರ ವಾರ್ತೆ: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ‌ ಭಾರೀ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ 204.4 ಮಿ.ಮೀ. ಗಿಂತಲೂ ಅಧಿಕ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಲಾವೃತಗೊಳ್ಳುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಪ್ರಕಟನೆ ತಿಳಿಸಿದೆ.

ಕರಾವಳಿಯಲ್ಲಿ ಕುಂಭದ್ರೋಣ ಮಳೆ| ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ Read More »

ಗೂಡ್ಸ್ ವಾಹನದಲ್ಲಿ ಜಾನುವಾರು ಸಾಗಾಟ | ಇಬ್ಬರು ಬಂಧನ

ಸಮಗ್ರ ನ್ಯೂಸ್: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ 15 ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿರುವ ಘಟನೆ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿ-275ರ ಬಿಳಿಕೆರೆ ಬೈಪಾಸ್‌ನಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಹಲಗನಹಳ್ಳಿ ನಿವಾಸಿ ಅಲೀಮ್, ಮನ್ಸೂರ್ ಬಂಧಿತ ಆರೋಪಿಗಳಾಗಿದ್ದು, ಚಾಲಕ ಪರಾರಿಯಾಗಿದ್ದಾನೆ. ಬಿಳಿಕೆರೆ ಠಾಣೆ ಸಬ್ ಇನ್ಸ್ಪೆಕ್ಟರ್ ಚಲುವಯ್ಯ ಸಿಬ್ಬಂದಿಗಳೊಂದಿಗೆ ಶನಿವಾರ ರಾತ್ರಿ 10 ಗಂಟೆಯ ಸಮಯ ರಾತ್ರಿ ಗಸ್ತಿನಲ್ಲಿದ್ದ ವೇಳೆ ಹೆದ್ದಾರಿಯಲ್ಲಿ ಹುಣಸೂರು ಕಡೆಯಿಂದ ಬರುತ್ತಿದ್ದ ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನವನ್ನು ಬಿಳಿಕೆರೆ ಬೈಪಾಸ್

ಗೂಡ್ಸ್ ವಾಹನದಲ್ಲಿ ಜಾನುವಾರು ಸಾಗಾಟ | ಇಬ್ಬರು ಬಂಧನ Read More »

ಕಾರ್ಕಳ:ಬಸ್ಸು, ಟಿಪ್ಪರ್ ನಡುವೆ ಅಪಘಾತ|ಬಸ್ಸು ಚಾಲಕ ಗಂಭೀರ

ಸಮಗ್ರ ನ್ಯೂಸ್: ಕಾರ್ಕಳದ ಬೈಲೂರು ಸಮೀಪದ ಜಾರ್ಕಳ ಬಸ್ರಿಶಾಲೆಯ ರಾಜ್ಯ ಹೆದ್ದಾರಿ ಯಲ್ಲಿ ಬಸ್ಸು ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಬಸ್ಸು ಚಾಲಕ ಗಂಭೀರ ಗಾಯಗೊಂಡ ಘಟನೆ ಸೋಮವಾರ ಸಂಭವಿಸಿದೆ. ಉಡುಪಿ ಯಿಂದ ಕಾರ್ಕಳ ಕಡೆ ಬರುತ್ತಿದ್ದ ಖಾಸಗಿ ಬಸ್ಸೊಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ( ಕೆ ಎಸ್ ಆರ್ ಟಿ ಸಿ) ಬಸ್ಸನ್ನು ಹಿಂತಿಕುವ ಭರದಲ್ಲಿ ಅತೀ ವೇಗ ಹಾಗೂ ನಿರ್ಲಕ್ಷ್ಯ ರೀತಿಯಲ್ಲಿ ಚಲಾಯಿಸಿ ಬಂದು ಬಸ್ರಿಶಾಲಾ ತಿರುವಿನಲ್ಲಿ ಟಿಪ್ಪರ್ ಗೆ

ಕಾರ್ಕಳ:ಬಸ್ಸು, ಟಿಪ್ಪರ್ ನಡುವೆ ಅಪಘಾತ|ಬಸ್ಸು ಚಾಲಕ ಗಂಭೀರ Read More »

ಚಿಕ್ಕಮಗಳೂರು: ಒಂದೇ ಸ್ಥಳದಲ್ಲಿ ಎರಡು ಕಾರುಗಳು ಅಪಘಾತ

ಸಮಗ್ರ ನ್ಯೂಸ್: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಈ ನಡುವೆ ಒಂದೇ ಸ್ಥಳದಲ್ಲಿ ಎರಡು ಕಾರುಗಳು ಉರುಳಿಬಿದ್ದ ಪರಿಣಾಮ ಒಂದು ಕಾರಿನ ಪ್ರಯಾಣಿಕರು ಗಾಯಗೊಂಡ ಘಟನೆ ಬಣಕಲ್ ಸಮೀಪ ನಡೆದಿದೆ. ಬಣಕಲ್ ಹೇಮಾವತಿ ನದಿಯ ಸಮೀಪ ಈ ಘಟನೆ ನಡೆದಿದೆ. ಪ್ರತ್ಯೇಕ ಘಟನೆಗಳಲ್ಲಿ ಎರಡು ಕಾರುಗಳು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿವೆ. ಈ ವೇಳೆ ಇನೋವಾ ಕಾರಿನಲಿದ್ದವರಿಗೆ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕ್ಕಮಗಳೂರು: ಒಂದೇ ಸ್ಥಳದಲ್ಲಿ ಎರಡು ಕಾರುಗಳು ಅಪಘಾತ Read More »