July 2023

ಭಾರೀ ಮಳೆ ಹಿನ್ನಲೆ| ಜು.24ರಂದು ಉ.ಕನ್ನಡ ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಅಗತ್ಯ ಮುಂಜಾಗ್ರತೆ ದೃಷ್ಟಿಯಿಂದ ಜಿಲ್ಲಾಡಳಿತವು ಸೋಮವಾರ ಜುಲೈ 24ರಂದು ಜಿಲ್ಲಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ , ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಸೋಮವಾರ ಸರ್ಕಾರಿ , ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಇರಲಿದೆ. ಕಾಳಿ ನದಿಗೆ ಕದ್ರಾ ಅಣೆಕಟ್ಟಿನಿಂದ ಹೆಚ್ಚಿನ ಪ್ರಮಾಣದ ನೀರು ಬಿಡುವ ಸಾಧ್ಯತೆ ಇದೆ. ಮೇಘಸ್ಪೋಟದ ಕಾರಣ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮುಂಜಾಗ್ರತೆಯಿಂದ ಶಾಲೆ ಕಾಲೇಜುಗಳಿಗೆ […]

ಭಾರೀ ಮಳೆ ಹಿನ್ನಲೆ| ಜು.24ರಂದು ಉ.ಕನ್ನಡ ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಧಾರಾಕಾರ ಮಳೆ ಹಿನ್ನೆಲೆ| ಬೆಳಗಾವಿಯ ಕೆಲ ತಾಲೂಕಿನಲ್ಲಿ ಶಾಲೆಗಳಿಗೆ ಜು.24ರಂದು ರಜೆ ಘೋಷಣೆ

ಸಮಗ್ರ ವಾರ್ತೆ: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ಕಿತ್ತೂರು, ಬೆಳಗಾವಿ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಶಾಲೆಗಳಿಗೆ ಸೋಮವಾರ (ಜು.24) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಧಾರಾಕಾರ ಮಳೆ ಹಿನ್ನೆಲೆ| ಬೆಳಗಾವಿಯ ಕೆಲ ತಾಲೂಕಿನಲ್ಲಿ ಶಾಲೆಗಳಿಗೆ ಜು.24ರಂದು ರಜೆ ಘೋಷಣೆ Read More »

ಭಾರೀ ಮಳೆ ಹಿನ್ನೆಲೆ| ಕೊಡಗು ಜಿಲ್ಲೆಯಲ್ಲಿ ಜು.24 ರಂದು ಕೊಡಗು ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರಿ ಮಳೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ಸೋಮವಾರ (ಜು.24) ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ವೆಂಕಟ್‌ ರಾಜಾ ರಜೆ ಘೋಷಿಸಿ ಪ್ರಕಟಣೆ ಹೊರಡಿಸಿದ್ದಾರೆ. ಸದ್ಯ ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಯಲ್ಲಿನ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವೆಡೆ ಪ್ರವಾಹ ಭೀತಿ ಎದುರಾಗಿದೆ.

ಭಾರೀ ಮಳೆ ಹಿನ್ನೆಲೆ| ಕೊಡಗು ಜಿಲ್ಲೆಯಲ್ಲಿ ಜು.24 ರಂದು ಕೊಡಗು ಜಿಲ್ಲೆಯಲ್ಲಿ ಶಾಲಾ ಕಾಲೇಜಿಗೆ ರಜೆ ಘೋಷಣೆ Read More »

ಕಲ್ಲುಗುಂಡಿ: ಭಾರತೀಯರ ಮಜ್ಜೂರ್ ಸಂಘದ ಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್: ಭಾರತೀಯರ ಮಜ್ಜೂರ್ ಸಂಘದ ಸ್ಥಾಪನಾ ದಿನಾಚರಣೆಯ ಪ್ರಯುಕ್ತ ಕಲ್ಲುಗುಂಡಿ ಬಿ.ಯಂ.ಯಸ್ ಆಟೋಚಾಲಕರ ಸಂಘದ ವತಿಯಿಂದ ಜು 23 ರಂದು ತಾಯಿ ಭಾರತಮಾತೆಗೆ ದೀಪ ಬೆಳಗಿ ಪುಷ್ಪಾರ್ಚನೆ ಮಾಡಲಾಯಿತು. ಸಂಘದ ಅಧ್ಯಕ್ಷ ಕೇಶವ ಬಂಗ್ಲೆಗುಡ್ಡೆ ಮತ್ತು ರವಿಕಿರಣ್ ನಿಡಿಂಜಿಯವರು ಪ್ರಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ಕಲ್ಲುಗುಂಡಿ: ಭಾರತೀಯರ ಮಜ್ಜೂರ್ ಸಂಘದ ಸ್ಥಾಪನಾ ದಿನಾಚರಣೆ Read More »

ಮಂಗಳೂರು: ರಾಜ್ಯಮಟ್ಟದ ಭಾವೈಕ್ಯತಾ ಸಮ್ಮಿಲನ -ಕವಿಗೋಷ್ಠಿ | ವಿಧಾನ ಸಭಾಧ್ಯಕ್ಷರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಟಕ ಭಾವೈಕ್ಯತಾ ಪರಿಷತ್ ಆಯೋಜಿಸಿದ ಭಾವೈಕ್ಯತಾ ಸಮ್ಮಿಲನ ಸಮಾರಂಭವು ಜು.30 ರಂದು ಭಾನುವಾರ ಮಂಗಳೂರಿನ ಕಂಕನಾಡಿ ಜೆಪ್ಪು ಮರಿಯಾ ಸಭಾಂಗಣದಲ್ಲಿ ನಡೆಯಲಿದೆ. ಚಿತ್ರ ನಿರ್ದೇಶಕ, ಗಾಯಕ ಮತ್ತು ಸಂಘಟಕರಾದ ಎಚ್. ಭೀಮರಾವ್ ವಾಷ್ಠರ್ ಕೋಡಿಹಾಳರವರು ಈ ಸಮಾರಂಭವನ್ನು ನೆರವೇರಿಸಲಿದ್ದಾರೆ. ಕರ್ನಾಟಕ ಭಾವೈಕ್ಯತಾ ಪರಿಷತ್ ಅಧ್ಯಕ್ಷರಾದ ಕೆ.ಎಂ.ಇಕ್ಬಾಲ್ ಬಾಳಿಲ ಅವರ ಅಧ್ಯಕ್ಷತೆಯಲ್ಲಿ ನಾಡಿನ ನೂರು ಕವಿಗಳ ಕವನ ವಾಚನ, ಸೌಹಾರ್ದ ಗೀತೆ ಬಿಡುಗಡೆ, ಚರ್ಚಾ ಗೋಷ್ಠಿ, ಸಾಧಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಮಂಗಳೂರು: ರಾಜ್ಯಮಟ್ಟದ ಭಾವೈಕ್ಯತಾ ಸಮ್ಮಿಲನ -ಕವಿಗೋಷ್ಠಿ | ವಿಧಾನ ಸಭಾಧ್ಯಕ್ಷರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ Read More »

ಕುಮಾರಧಾರ ಸ್ನಾನಘಟ್ಟ ಬಳಿ ತೆರಳದಂತೆ ಕಡಬ ತಹಶೀಲ್ದಾರ್ ಸೂಚನೆ

ಸಮಗ್ರ ನ್ಯೂಸ್: ಅಪಾಯ ಮಟ್ಟದಲ್ಲಿ ತುಂಬಿ ಹರಿಯುತ್ತಿರುವ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಬಳಿ ತೆರಳದಂತೆ ಕಡಬ ತಹಶೀಲ್ದಾರ್ ರಮೇಶ್ ಬಾಬು ಸೂಚನೆ ನೀಡಿದ್ದಾರೆ. ಕಡಬ ತಾಲೂಕಿನಾದ್ಯಂತ ಕಳೆದ 2 ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಸುಬ್ರಹ್ಮಣ್ಯ ಗ್ರಾಮದ ಸುಬ್ರಹ್ಮಣ್ಯ ಸ್ನಾನಘಟ್ಟದಲ್ಲಿ ಕುಮಾರಧಾರ ನದಿಯು ಅಪಾಯ ಮಟ್ಟದಲ್ಲಿ ಹರಿಯುತ್ತಿದ್ದು ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತಾದಿಗಳು ಹಾಗೂ ಪ್ರವಾಸಿಗಳು ಬಂದು ಸ್ನಾನಘಟ್ಟದಲ್ಲಿ ಸ್ನಾನ ಮಾಡುವ ಉದ್ದೇಶಕ್ಕೆ ಇಳಿಯುತ್ತಿದ್ದು ಮುಂದೆ ಸಂಭವಿಸಬಹುದಾದಂತಹ ಅನಾಹುತಗಳನ್ನು ತಪ್ಪಿಸುವ ಹಿತದೃಷ್ಟಿಯಿಂದ ಸ್ನಾನಘಟ್ಟದ ಬಳಿ ತೆರಳದಂತೆ

ಕುಮಾರಧಾರ ಸ್ನಾನಘಟ್ಟ ಬಳಿ ತೆರಳದಂತೆ ಕಡಬ ತಹಶೀಲ್ದಾರ್ ಸೂಚನೆ Read More »

ಸುಬ್ರಹ್ಮಣ್ಯ ಸ್ನಾನ ಘಟ್ಟಕ್ಕೆ ಗೃಹ ರಕ್ಷಕ ದಳದ ಸಮಾದೇಷ್ಟರ ಭೇಟಿ

ಸಮಗ್ರ ನ್ಯೂಸ್: ಘಟ್ಟದ ಮೇಲ್ಬಾಗದಲ್ಲಿ ಮತ್ತು ಕರಾವಳಿಯಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ನದಿಗಳು ತುಂಬಿಹರಿಯುತ್ತಿದ್ದು, ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಮುಳುಗಡೆ ಯಾಗಿದೆ. ರವಿವಾರ ಗೃಹ ರಕ್ಷಕ ದಳದ ದ.ಕ. ಜಿಲ್ಲಾ ಸಮಾದೇಷ್ಟ ಡಾ.ಮುರಲಿ ಮೋಹನ್ ಚೂಂತಾರು ಅವರು ಸುಬ್ರಹ್ಮಣ್ಯದ ಕುಮಾರಧಾರ ಸ್ನಾನ ಘಟ್ಟ ಸ್ಥಳಕ್ಕೆ ಭೇಟಿ ನೀಡಿ ಪ್ರವಾಹ ರಕ್ಷಣಾ ತಂಡದ ಸದಸ್ಯರಿಗೆ ಸಲಹೆ ಮತ್ತು ಮಾರ್ಗದರ್ಶನ ನೀಡಿದರು. ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು ಯಾವುದೇ ಕಾರಣಕ್ಕೂ ಪ್ರವಾಸಿಗರು ಮತ್ತು ಭಕ್ತರು ನೀರಿಗೆ ಇಳಿಯದಂತೆ

ಸುಬ್ರಹ್ಮಣ್ಯ ಸ್ನಾನ ಘಟ್ಟಕ್ಕೆ ಗೃಹ ರಕ್ಷಕ ದಳದ ಸಮಾದೇಷ್ಟರ ಭೇಟಿ Read More »

ಭಾರೀ ಮಳೆಗೆ ಕುಸಿದ ಸುಳ್ಯ – ಪಾಣತ್ತೂರು ಅಂತರಾಜ್ಯ ಸಂಪರ್ಕ ರಸ್ತೆ| ಸಂಚಾರ ಸಂಪೂರ್ಣ ನಿಷೇಧಿಸಿ ಕಾಸರಗೋಡು ಡಿಸಿ ಆದೇಶ

ಸಮಗ್ರ ನ್ಯೂಸ್: ಭಾರೀ ಮಳೆ ಹಿನ್ನಲೆಯಲ್ಲಿ ಪನತ್ತಡಿ ಬಾಟೋಳಿಯಲ್ಲಿ ಭೂಕುಸಿತ ಉಂಟಾದ ಹಿನ್ನೆಯಲ್ಲಿ ಪಾಣತ್ತೂರು – ಕಲ್ಲಪಳ್ಳಿ – ಸುಳ್ಯ ಅಂತಾರಾಜ್ಯ ರಸ್ತೆಯಲ್ಲಿ ರಾತ್ರಿ ಸಂಚಾರ ನಿಷೇಧಿಸಿ ಕಾಸರಗೋಡು ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ಆದೇಶ ಹೊರಡಿಸಿದ್ದಾರೆ. ಈ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಬಿರುಕು ಬಿಟ್ಟ ಗುಡ್ಡ, ಅವಘಡಕ್ಕೆ ಕಾರಣವಾಗಿರುವ ಮಣ್ಣು ಮೊದಲಾದವುಗಳನ್ನು ಪೂರ್ಣವಾಗಿ ತೆರವುಗೊಳಿಸಿದ ಬಳಿಕ ಸಂಚಾರಕ್ಕೆ ಪೂರ್ಣ ವಾಗಿ ಮುಕ್ತಗೊಳಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿವಾರಣಾ ಪ್ರಾಧಿಕಾರ ಅಧ್ಯಕ್ಷರಾಗಿರುವ . ಜಿಲ್ಲಾಧಿಕಾರಿ ಕೆ. ಇಂಪಾಶೇಖರ್

ಭಾರೀ ಮಳೆಗೆ ಕುಸಿದ ಸುಳ್ಯ – ಪಾಣತ್ತೂರು ಅಂತರಾಜ್ಯ ಸಂಪರ್ಕ ರಸ್ತೆ| ಸಂಚಾರ ಸಂಪೂರ್ಣ ನಿಷೇಧಿಸಿ ಕಾಸರಗೋಡು ಡಿಸಿ ಆದೇಶ Read More »

ಕಡಬ: ಉಕ್ಕೇರಿದ ಕುಮಾರಧಾರ; ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಜಲಾವೃತ| ಹೆದ್ದಾರಿಗೂ ನುಗ್ಗಿದ ನೆರೆನೀರು

ಸಮಗ್ರ ವಾರ್ತೆ: ಪುಷ್ಪಗಿರಿ ಪರಿಸರ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಪ್ರವಾಹದ ನೀರು ಹೆದ್ದಾರಿಗೆ ನುಗ್ಗಿ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕುಮಾರಧಾರ ನದಿಯಲ್ಲಿ ನೀರು ಹೆಚ್ಚಳದಿಂದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಇಲ್ಲಿನ ಲಗೇಜ್ ಕೊಠಡಿ, ಶೌಚಾಲಯ ಎಲ್ಲವೂ ಮುಳುಗಡೆಯಾಗಿದೆ. ಮಂಜೇಶ್ವರ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ ನದಿಯ ನೀರು ನುಗ್ಗಿ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಮುಂಜಾಗ್ರತಾ ಹಿನ್ನೆಲೆಯಲ್ಲಿ ಸಂಚಾರ ನಿಷೇಧಿಸಲಾಗಿದೆ. ನದಿ ಸಮೀಪದ ತೋಟಗಳಿಗೂ

ಕಡಬ: ಉಕ್ಕೇರಿದ ಕುಮಾರಧಾರ; ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸಂಪೂರ್ಣ ಜಲಾವೃತ| ಹೆದ್ದಾರಿಗೂ ನುಗ್ಗಿದ ನೆರೆನೀರು Read More »

ಹವಾಮಾನ ವರದಿ| ಇನ್ನೆರಡು ದಿನ ಭಾರೀ ಮಳೆ‌ ಸಾಧ್ಯತೆ

ಸಮಗ್ರ ನ್ಯೂಸ್: ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಹಲವೆಡೆ ಭಾನುವಾರ (ಜುಲೈ 23) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಬಹುತೇಕ ಕಡೆ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ತಿಳಿದು ಬಂದಿದೆ. ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಇತರೆಡೆಗಳಲ್ಲೂ ವ್ಯಾಪಿಸಿದೆ. ಆದರೆ, ಕರಾವಳಿಯಲ್ಲಿ ಮಳೆ ಪ್ರಮಾಣ ಸಾಮಾನ್ಯವಾಗಿದೆ ಎಂದು ಹೇಳಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯ ಒಂದೆರಡು ಕಡೆಗಳಲ್ಲಿ

ಹವಾಮಾನ ವರದಿ| ಇನ್ನೆರಡು ದಿನ ಭಾರೀ ಮಳೆ‌ ಸಾಧ್ಯತೆ Read More »