July 2023

ಗೃಹಜ್ಯೋತಿ ಕರೆಂಟ್ ಬಿಲ್ ಮಾದರಿ ಹೇಗಿದೆ ಗೊತ್ತಾ?|ಇಲ್ಲಿದೆ ಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆಯ ಲಾಭ ಫಲಾನುಭವಿಗಳಿಗೆ ಸಿಗಲಿದೆ ಶೂನ್ಯ ದರದ ಕರೆಂಟ್ ಬಿಲ್. ಮೀಟರ್ ರೀಡಿಂಗ್ ಕಾರ್ಯ ನಾಳೆಯಿಂದ ಆರಂಭವಾಗಲಿದ್ದು, ನೋಂದಣಿ ಮಾಡಿಕೊಂಡ ಅರ್ಹ ಫಲಾನುಭವಿಗ ಳು ಈ ಯೋಜನೆಗೆ ಅರ್ಹರಾಗಿರುತ್ತಾರೆ. ಬಿಲ್ ಮುಂಭಾಗ ಹಾಗೂ ಹಿಂಭಾಗ ಮುದ್ರಣದಲ್ಲಿ ಬದಲಾವಣೆ ಮಾಡಲಾಗಿದ್ದು ಗೃಹಜ್ಯೋತಿಯ ಕರೆಂಟ್ ಬಿಲ್ ಮಾದರಿ ನ್ಯೂಸ್ 18ಗೆ ದೊರೆತಿದೆ. ಈ ಬಿಲ್ ನ ಮುಂಭಾಗ ಹಾಗೂ ಹಿಂಭಾಗ ಮುದ್ರಣದಲ್ಲಿ ಬದಲಾವಣೆ ಮಾಡಲಾಗಿದೆ. ವಿದ್ಯುತ್ ಬಿಲ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು […]

ಗೃಹಜ್ಯೋತಿ ಕರೆಂಟ್ ಬಿಲ್ ಮಾದರಿ ಹೇಗಿದೆ ಗೊತ್ತಾ?|ಇಲ್ಲಿದೆ ಪೂರ್ಣ ಮಾಹಿತಿ Read More »

ಸುಳ್ಯ: ನೂತನ ಉಪತಹಶೀಲ್ದಾರ್ ಆಗಿ ಮಂಜುನಾಥ್‌ ಆಯ್ಕೆ

ಸಮಗ್ರ ನ್ಯೂಸ್:ಮಂಜುನಾಥ್ ಕೆ.ಎಂ ಇವರು ತಾಲೂಕು ಕಚೇರಿಯಲ್ಲಿ ದ್ವಿ ದ ಸಹಾಯಕರಾಗಿದ್ದ ಅವರು 2015 ರಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ವರ್ಗಾವಣೆಗೊಂಡಿದ್ದರು.ಅಲ್ಲಿ ಪ್ರಮೋಷನ್ ಆಗಿ ಕಚೇರಿ ಅಧೀಕ್ಷಕರಾಗಿದ್ದರು. ಸುಳ್ಯ ತಾಲೂಕು ಕಚೇರಿಗೆ ನೂತನ ಉಪತಹಶೀಲ್ದಾರ್ ಆಗಿ ವರ್ಗಾವಣೆಯಾಗಿದ್ದು ಇಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಸುಳ್ಯ: ನೂತನ ಉಪತಹಶೀಲ್ದಾರ್ ಆಗಿ ಮಂಜುನಾಥ್‌ ಆಯ್ಕೆ Read More »

ಮಂಗಳೂರು: ಮಾಜಿ ಉಪಕುಲಪತಿ ಕೆ.ಬೈರಪ್ಪ ನಿಧನ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ.ಕೆ.ಬೈರಪ್ಪ(69) ಅವರು ಜು .31 ರಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು 2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಉಪ ಕುಲಪತಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಬಳಿಕ ನಿವೃತ್ತಿ ಹೊಂದಿ ಆದಿ ಚುಂಚನ ಗಿರಿಯಲ್ಲಿ ಸಹಕುಲಪತಿಗಳಾಗಿ ಕಾರ್ಯ ನಿರ್ವಹಿಸುತಿದ್ದರು. ಬೆಳಗಾವಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತಗೊಂಡು ಕೊನೆಯುಸಿರೆಳೆದಿದ್ದಾರೆ.

ಮಂಗಳೂರು: ಮಾಜಿ ಉಪಕುಲಪತಿ ಕೆ.ಬೈರಪ್ಪ ನಿಧನ Read More »

ಉಡುಪಿ: ಟಾಯ್ಲೆಟ್ ವಿಡಿಯೋ ಚಿತ್ರೀಕರಣ ಪ್ರಕರಣ| ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್‌, ಬೆದರಿಕೆ

ಸಮಗ್ರ ನ್ಯೂಸ್: ಉಡುಪಿ ಟಾಯ್ಲೆಟ್ ವಿಡಿಯೋ ಚಿತ್ರೀಕರಣ ಘಟನೆಯನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಹೇಳಿಕೆ ನೀಡಿದ್ದ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶಗಳು ಮತ್ತು ಬೆದರಿಕೆ ಬಂದಿರುವ ಬಗ್ಗೆ ವರದಿಯಾಗಿದೆ. ಪ್ರತಿಭಟನೆಯ ವೇಳೆ ವಿದ್ಯಾರ್ಥಿನಿ ನೇತ್ರಜ್ಯೋತಿ ಕಾಲೇಜಿನ ಅವ್ಯವಸ್ಥೆ ವಿರುದ್ಧ ಮಾತನಾಡಿದ್ದರು. ಪ್ರತಿಭಟನೆಯಲ್ಲಿ ಭಾಗಿಯಾದ ನಂತರ ಜುಲೈ 28 ರಂದು ಜಿಗರ್ ಕೋಬ್ರಾ ಹೆಸರಿನ ಖಾತೆಯಿಂದ ವಿದ್ಯಾರ್ಥಿನಿಯ ಇನ್‌ಸ್ಟಾ ಖಾತೆಗೆ ಭಯಪಡಿಸುವ ರೀತಿಯ ಮೆಸೇಜ್‌ ಬರಲು ಆರಂಭವಾಗಿದೆ.ಮಾನಸಿಕ ನೆಮ್ಮದಿಗೆ ಭಂಗ ಉಂಟು ಮಾಡಲಾಗಿದೆ ಎಂದು ವಿದ್ಯಾರ್ಥಿನಿ ಹೇಳಿದ ಹಿನ್ನೆಲೆಯಲ್ಲಿ

ಉಡುಪಿ: ಟಾಯ್ಲೆಟ್ ವಿಡಿಯೋ ಚಿತ್ರೀಕರಣ ಪ್ರಕರಣ| ಪ್ರತಿಭಟನೆಯಲ್ಲಿ ಭಾಗಿಯಾದ ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್‌, ಬೆದರಿಕೆ Read More »

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ‌ ಆಗಸ್ಟ್ 1ರಿಂದ ದ್ವಿಚಕ್ರ, ತ್ರಿಚಕ್ರ ವಾಹನಗಳ ನಿಷೇಧ

ಸಮಗ್ರ ನ್ಯೂಸ್: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತ ಪ್ರಕರಣ ಹೆಚ್ಚಳ ಹಿನ್ನೆಲೆ ಅಪಘಾತಗಳಿಗೆ ಕಡಿವಾಣ ಹಾಕಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆಗಸ್ಟ್ 1ರಿಂದ ಎಕ್ಸ್‌ಪ್ರೆಸ್ ವೇಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಸೇರಿ ಕೆಲ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಬೈಕ್, ಆಟೋ, ಟ್ರ್ಯಾಕ್ಟರ್‌ಗಳು ಮಂಗಳವಾರದಿಂದ ಸರ್ವಿಸ್ ರಸ್ತೆಯಲ್ಲೇ ಸಂಚಾರ ಮಾಡಬೇಕಾಗಿದೆ. ಮೋಟಾರು ವಾಹನ ಕಾಯ್ದೆ 2002ರ ಅನ್ವಯ ಹೆದ್ದಾರಿ ಪ್ರಾಧಿಕಾರವು ಜುಲೈ 12ರಂದೇ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 1ರಿಂದ ಎಕ್ಸ್‌ಪ್ರೆಸ್ ವೇಗೆ ಹೊಸ ನಿಯಮ

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ‌ ಆಗಸ್ಟ್ 1ರಿಂದ ದ್ವಿಚಕ್ರ, ತ್ರಿಚಕ್ರ ವಾಹನಗಳ ನಿಷೇಧ Read More »

ಉಗ್ರ ಅಫ್ಸರ್ ಪಾಷಾ ಮಂಗಳೂರು ಸ್ಫೋಟದ ಮಾಸ್ಟರ್ ಮೈಂಡ್ – ಶಾರೀಕ್‌ಗೆ ಜೈಲಿನಲ್ಲೇ ತರಬೇತಿ

ಸಮಗ್ರ ನ್ಯೂಸ್: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಮಾಸ್ಟರ್ ಮೈಂಡ್ ಸದ್ಯ ಬಂಧನದಲ್ಲಿರುವ ಲಷ್ಕರ್ ಎ ತೋಯ್ಬದ ಸದಸ್ಯ ಅಫ್ಸರ್ ಪಾಷಾ ಎಂಬ ಶಾಕಿಂಗ್ ವಿಚಾರ ಬೆಳಕಿಗೆ ಬಂದಿದೆ. ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಶಾರಿಖ್ ಹಾಗೂ ಪಾಷಾನಿಗೆ ಸಂಬಂಧ ಇರುವುದು ತನಿಖೆ ವೇಳೆ ಬಯಲಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಳಗಾವಿಯಿಂದ ಬಂದಿದ್ದ ಜೀವ ಬೆದರಿಕೆ ಕರೆ ಪ್ರಕರಣದಲ್ಲಿ ಪಾಷನ್ನು ಜುಲೈ ೧೪ ರಂದು ಮಹಾರಾಷ್ಟ್ರ ಪೊಲೀಸರು ವಶಕ್ಕೆ ಪಡೆದಿದ್ದರು. ಈ ತನಿಖೆ ವೇಳೆ

ಉಗ್ರ ಅಫ್ಸರ್ ಪಾಷಾ ಮಂಗಳೂರು ಸ್ಫೋಟದ ಮಾಸ್ಟರ್ ಮೈಂಡ್ – ಶಾರೀಕ್‌ಗೆ ಜೈಲಿನಲ್ಲೇ ತರಬೇತಿ Read More »

ಪುತ್ತೂರು: ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಪೋಷಕರ ಸಭೆ , ಕೃತಜ್ಞತಾ ಸಭೆ

ಸಮಗ್ರ ನ್ಯೂಸ್: ಜು.29 ರಂದು ಬನ್ನೂರು ಕೃಷ್ಣನಗರ ಸಮೀಪದಲ್ಲಿರುವ ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ “ಪೋಷಕರ ಸಭೆ ಮತ್ತು ಕೃತಜ್ಞತಾ ಸಭೆ” ನಡೆಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲರಾದ ಸೀತಾರಾಮ ಕೇವಳ ಇವರು ಶೈಕ್ಷಣಿಕ ಚಿಂತನೆಯ ಕುರಿತು ಶಾಲೆಯ ಪೋಷಕರಿಗೆ ಹಾಗೂ ಶಿಕ್ಷಕರಿಗೆ ಸಲಹೆ ಸೂಚನೆಯನ್ನು ನೀಡಿದರು. ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕರಾದ ಗುಡ್ಡಪ್ಪ ಗೌಡ ಬಲ್ಯ ಇವರು ಕೃತಜ್ಞತಾ ನುಡಿಯನ್ನಾಡುತ್ತ ಎವಿಜಿ ವಿದ್ಯಾಸಂಸ್ಥೆಯು ಆರಂಭವಾಗಲು ಶ್ರಮಿಸಿದ ಎಲ್ಲರಿಗೂ

ಪುತ್ತೂರು: ಎವಿಜಿ ಇಂಗ್ಲಿಷ್ ಮೀಡಿಯಂ ಸ್ಕೂಲಿನಲ್ಲಿ ಪೋಷಕರ ಸಭೆ , ಕೃತಜ್ಞತಾ ಸಭೆ Read More »

ಮಂಗಳೂರು: ನೀರಿನಲ್ಲಿ ಮುಳುಗಿ ಯುವಕರಿಬ್ಬರು ಮೃತ್ಯು

ಸಮಗ್ರ ನ್ಯೂಸ್: ಮಂಗಳೂರು ನಗರದ ಪಡೀಲ್ ಅಳಪೆ ಪಡ್ಪು ರೈಲ್ವೇ ಬ್ರಿಡ್ಜ್ ಸಮೀಪ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ಜು. 30 ರಂದು ನಡೆದಿದೆ. ಅಳಪೆ ಪಡ್ಪುರೆಂಜ ನಿವಾಸಿ ವರುಣ್ (27) ಮತ್ತು ಎಕ್ಕೂರು ಕೆಎಚ್‌ಬಿ ಕಾಲನಿ ನಿವಾಸಿ ವೀಕ್ಷಿತ್ (28) ಮೃತಪಟ್ಟ ಯುವಕರು. ಜು.30 ರಂದು ಸಂಜೆ ವೇಳೆ 6 ಮಂದಿ ಗೆಳೆಯರು ಒಟ್ಟಾಗಿ ಕ್ರಿಕೆಟ್ ಆಡಲು ತೆರಳಿದ್ದರು. ಈ ಸಂದರ್ಭ ವರುಣ್ ಮತ್ತು ವೀಕ್ಷಿತ್ ರೈಲ್ವೆಯ ಟ್ರಾಕ್ ಪಕ್ಕದ ಹಳ್ಳದ ದಡದಲ್ಲೇ

ಮಂಗಳೂರು: ನೀರಿನಲ್ಲಿ ಮುಳುಗಿ ಯುವಕರಿಬ್ಬರು ಮೃತ್ಯು Read More »

ಕೊಲ್ಲಮೊಗ್ರು:ಹಣ ದುಪ್ಪಟ್ಟುಗೊಳಿಸುವ ವಂಚನಾ ಜಾಲಕ್ಕೆ ಸಿಲುಕಿ 34 ಸಾವಿರ ಕಳೆದುಕೊಂಡ ಯುವಕ

ಸಮಗ್ರ ನ್ಯೂಸ್: ಹಣ ದುಪ್ಪಟ್ಟುಗೊಳಿಸುವ ವಂಚನಾ ಜಾಲಕ್ಕೆ ಸಿಲುಕಿ ಯುವಕನೋರ್ವ 34 ಸಾವಿರ ಕಳೆದುಕೊಂಡ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಪೂಜಾರಿ ಮನೆ ಲಿಖಿನ್ ಪಿ.ಟಿ. ಎಂಬ ಯುವಕ ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜು. 17ರಂದು ಲಿಖಿನ್ ಅವರ ವಾಟ್ಸ್ ಪ್ ಗೆ ಹಣ ದ್ವಿಗುಣಗೊಳಿಸಿ ಕೊಡುತ್ತೇನೆಂದು ಮೆಸೇಜ್ ಬಂದಿದ್ದು, ಅದೇ ದಿನ ಅವರು ತಮ್ಮ ನಂಬರ್ ನಿಂದ ಆರೋಪಿ ಮೊಬೈಲ್ ನಂಬರ್ ಗೆ

ಕೊಲ್ಲಮೊಗ್ರು:ಹಣ ದುಪ್ಪಟ್ಟುಗೊಳಿಸುವ ವಂಚನಾ ಜಾಲಕ್ಕೆ ಸಿಲುಕಿ 34 ಸಾವಿರ ಕಳೆದುಕೊಂಡ ಯುವಕ Read More »

ಸುಳ್ಯ:ದುಗ್ಗಲಡ್ಕ ಬೂತ್ ಕಾಂಗ್ರೇಸ್ ಸಭೆ|ಗೃಹಲಕ್ಷ್ಮಿ ಯೋಜನೆಯ ಶೀಘ್ರ ನೋಂದಾವಣೆಗೆ ಮನೆ ಮನೆ ಭೇಟಿ ಅಭಿಯಾನಕ್ಕೆ ನಿರ್ಧಾರ

ಸಮಗ್ರ ನ್ಯೂಸ್: ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ 1ನೇ ವಾರ್ಡ್ ದುಗ್ಗಲಡ್ಕ ಬೂತ್ ಕಾಂಗ್ರೇಸ್ ಸಮಿತಿ ಸಭೆ ಜು. 30 ರಂದು ಅಬೂಬಕ್ಕರ್ ಕೊಳಂಜಿಕೋಡಿಯವರ ಮನೆಯಲ್ಲಿ ನಡೆಯಿತು. ಬೂತ್ ಸಮಿತಿ ಅಧ್ಯಕ್ಷ ಚಂದ್ರಶೇಖರ ನಾಯ್ಕ ಕಂದಡ್ಕ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಜಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ, ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ಮಾತನಾಡಿ ಸರಕಾರದ ಗ್ಯಾರಂಟಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸಲು ಮುಖ್ಯವಾಗಿ ಗೃಹ ಲಕ್ಷ್ಮಿ ಯೋಜನೆಯ ಪಲಾನುಭವಿಗಳನ್ನು ಶೀಘ್ರ ನೋಂದಾವಣೆಗೆ ಪ್ರೆರೇಪಿಸಲು ಮನೆ

ಸುಳ್ಯ:ದುಗ್ಗಲಡ್ಕ ಬೂತ್ ಕಾಂಗ್ರೇಸ್ ಸಭೆ|ಗೃಹಲಕ್ಷ್ಮಿ ಯೋಜನೆಯ ಶೀಘ್ರ ನೋಂದಾವಣೆಗೆ ಮನೆ ಮನೆ ಭೇಟಿ ಅಭಿಯಾನಕ್ಕೆ ನಿರ್ಧಾರ Read More »