July 2023

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷ್ಯಶಾಸ್ತ್ರ ಪ್ರಕಾರ ಜುಲೈ 16-22ರವರೆಗಿನ ವಾರ ಭವಿಷ್ಯ ನೋಡುವುದಾದರೆ ಕೆಲವು ರಾಶಿಯವರು ಎಚ್ಚರವಹಿಸಬೇಕು. ಹಲವರ ಜೀವನದಲ್ಲಿ ಗಮನಾರ್ಹ ಬದಲಾವಣೆ ಆಗಲಿದೆ. ಈ ವಾರ ಯಾವ ರಾಶಿಗೆ ಶುಭ, ಯಾವ ರಾಶಿಯವರಿಗೆ ಲಾಭ ನೋಡೋಣ ಬನ್ನಿ… ಮೇಷರಾಶಿ:ವಾರದ ಆರಂಭದಲ್ಲಿ, ಗೆಳೆಯರೊಂದಿಗೆ ಮೋಜು ಅನುಭವಿಸಲು ನಿಮಗೆ ಅವಕಾಶ ಸಿಗಬಹುದು. ಅವರೊಂದಿಗೆ ಎಲ್ಲಾದರೂ ವಾಕ್​​ಗೆ ಹೋಗಲಿದ್ದೀರಿ. ನಿಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕುವಿರಿ. ನಿಮ್ಮ ಮನಸ್ಸಿನಲ್ಲಿ ಸಂತಸ ನೆಲೆಸಲಿದೆ. ವಿವಾಹಿತ ವ್ಯಕ್ತಿಗಳು ತಮ್ಮ ಕೌಟುಂಬಿಕ ಬದುಕಿನ ಸಮಸ್ಯೆಗಳನ್ನು ಮರೆತು […]

ದ್ವಾದಶ ರಾಶಿಗಳ ವಾರಭವಿಷ್ಯ Read More »

ಜುಲೈ 19 ರಂದು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಆಚರಣೆ| ಪದಾಧಿಕಾರಿಗಳಿಂದ ಸುದ್ದಿಗೋಷ್ಠಿ

ಸಮಗ್ರ ನ್ಯೂಸ್:‌ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬ ಆಚರಣೆ ಜುಲೈ19 ರಂದು ಸುಳ್ಯ ಕೇರ್ಪಳದ ಭಂಟರ ಭವನದಲ್ಲಿ ನಡೆಯಲಿದೆ. ಉದ್ಘಾಟನಾ ಸಮಾರಂಭ, ಮಾಧ್ಯಮ ವಿಚಾರ ಸಂಕಿರಣ, ಪತ್ರಕರ್ತರ ಸಮ್ಮಿಲನ, ಸಮಾರೋಪ ಸಮಾರಂಭ ಹಾಗೂ ಸನ್ಮಾನ, ಸಾಂಸ್ಕೃತಿಕ ಸಂಭ್ರಮ‌ ನಡೆಯಲಿದೆ ಎಂದು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ‌ ಕೊರತ್ತೋಡಿ ತಿಳಿಸಿದ್ದಾರೆ‌. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಉದ್ಘಾಟಿಸುವರು. ಕನ್ನಡ ಪ್ರಭ ಹಾಗೂ

ಜುಲೈ 19 ರಂದು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಆಚರಣೆ| ಪದಾಧಿಕಾರಿಗಳಿಂದ ಸುದ್ದಿಗೋಷ್ಠಿ Read More »

ವಿರಾಜಪೇಟೆ: ಮಾನವೀಯ ನೆಲೆಯಲ್ಲಿ ಆಸ್ಪತ್ರೆಗೆ ಹೊದಿಕೆ ದಾನ ನೀಡಿದ ಸಮಾಜ ಸೇವಕ ಕೆ.ಎ ಕುಶಲಪ್ಪ

ಸಮಗ್ರ ನ್ಯೂಸ್:‌ ಮಾನವೀಯ ಗುಣಗಳನ್ನು ಹೊಂದಿರುವವರು ಹಣದ ಮೌಲ್ಯ ನಿರ್ಣಯ ಮಾಡುವುದಿಲ್ಲ. ಪರರಿಗೆ ಉಪಯುಕ್ತವಾಗುವ ಕಾರ್ಯವನ್ನು ತೆರೆಯ ಹಿಂದೆ ಮಾಡುತ್ತಾರೆ. ಇದಕ್ಕೆ ಸಾಕ್ಷಿಯಂತೆ ವ್ಯಕ್ತಿಯೊಬ್ಬರು ಖಾಸಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಉಚಿತವಾಗಿ ಹೊದಿಕೆಗಳನ್ನು ನೀಡಿದ್ದಾರೆ. ವಿರಾಜಪೇಟೆ ತಾಲ್ಲೂಕಿನ ಅಮ್ಮತ್ತಿ ಪಟ್ಟಣದ ಆರ್.ಐ.ಹೆಚ್.ಪಿ. ಆಸ್ಪತ್ರೆಗೆ ರಿ ಬಿಲ್ಡ್ ಕೊಡಗು ಸಂಸ್ಥಾಪಕರಾದ ಕೆ.ಎ. ಕುಶಾಲಪ್ಪ ಅವರು ತನ್ನ ತಂದೆಯಾದ ದಿವಂಗತ ಕೆ.ಪಿ. ಅಯ್ಯಪ್ಪ ಹೆಸರಿನಲ್ಲಿ ತಂದೆಯ ಹುಟ್ಟು ಹಬ್ಬದ ಪ್ರಯುಕ್ತ ಅರವತ್ತು ಹೊದಿಕೆಗಳನ್ನು ಉಚಿತವಾಗಿ ನೀಡಿ ಮಾನವೀಯತೆಯನ್ನು ಮೆರೆದಿದ್ದಾರೆ. ಕೊಡಗು

ವಿರಾಜಪೇಟೆ: ಮಾನವೀಯ ನೆಲೆಯಲ್ಲಿ ಆಸ್ಪತ್ರೆಗೆ ಹೊದಿಕೆ ದಾನ ನೀಡಿದ ಸಮಾಜ ಸೇವಕ ಕೆ.ಎ ಕುಶಲಪ್ಪ Read More »

KAR TET-2023: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: 2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023)ಗೆ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯು, ಟಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ, ಪರೀಕ್ಷಾ ದಿನಾಂಕ ಮತ್ತು ಇನ್ನಿತರ ಮಾಹಿತಿಯನ್ನು ನೀಡಿದೆ.‌ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಶುಲ್ಕದೊಂದಿಗೆ ಶಾಲಾ ಶಿಕ್ಷಣ ಇಲಾಖೆ ಅಧಿಕೃತ ವೆಬ್‌ಸೈಟ್ https://www.schooleducation.kar.nic.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ

KAR TET-2023: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ Read More »

ಸುಳ್ಯ: ಪದೋನ್ನತಿಗೊಂಡು ವರ್ಗಾವಣೆಯಾದ ಸಿಡಿಪಿಒ ರಶ್ಮಿಗೆ ಬೀಳ್ಕೊಡುಗೆ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಸಿಡಿಪಿಒ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಹಿರಿಯ ಸಹಾಯಕ ನಿರ್ದೇಶಕರಾಗಿ ಪದೋನ್ನತಿಗೊಂಡ ರಶ್ಮಿ ಅಶೋಕ್ ‌ನೆಕ್ರಾಜೆಯವರಿಗೆ ಬೀಳ್ಕೊಡುಗೆ ಸಮಾರಂಭ ಜು.15 ರಂದು ಸುಳ್ಯದ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ಸಿಡಿಪಿಒ ಶೈಲಜಾ ದಿನೇಶ್ ವಹಿಸಿದ್ದರು. ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್. ರವರು ರಶ್ಮಿ ಅಶೋಕ್ ‌ನೆಕ್ರಾಜೆಯವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಿಡಿಪಿಒ ‌ಕಚೇರಿ‌ ವತಿಯಿಂದ ಸಹೋದ್ಯೋಗಿಗಳು ಮಡಿಲು ತುಂಬಿಸಿ ಬೀಳ್ಕೊಟ್ಟರು. ರಶ್ಮಿಯವರ‌ ಪತಿ ಅಶೋಕ್‌ ನೆಕ್ರಾಜೆಯವರ ಹುಟ್ಟುಹಬ್ಬವನ್ನು‌ ಕೂಡಾ

ಸುಳ್ಯ: ಪದೋನ್ನತಿಗೊಂಡು ವರ್ಗಾವಣೆಯಾದ ಸಿಡಿಪಿಒ ರಶ್ಮಿಗೆ ಬೀಳ್ಕೊಡುಗೆ Read More »

ಕೆವಿಜಿ ಐಪಿಎಸ್ ನಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ

ಸಮಗ್ರ ನ್ಯೂಸ್: ಸುಳ್ಯದ ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಜು.15ರಂದು ‘ಅಬಾಕಸ್ ‘ ಗಣಿತ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾ ಆಡಿಟೋರಿಯಮ್ ನಲ್ಲಿ ದೀಪವನ್ನು ಬೆಳಗಿಸುವುದರ ಮೂಲಕ ‘ಅಬಾಕಸ್ ‘ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ‘ಅಬಾಕಸ್ ‘ ತರಗತಿಯನ್ನು ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳು ಗಣಿತದಲ್ಲಿ ಬರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಾರೆ ಜೊತೆಗೆ ಅವರ ಬೌದ್ಧಿಕ ಸಾಮರ್ಥ್ಯ ವೃದ್ಧಿಗೊಳ್ಳುತ್ತದೆ ಎಂದು ತಿಳಿಸಿದರು. ‘ಅಬಾಕಸ್ ‘ ತರಗತಿಯ ಬಗ್ಗೆ

ಕೆವಿಜಿ ಐಪಿಎಸ್ ನಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ Read More »

ಚಿಕ್ಕಮಗಳೂರು: ರಸ್ತೆಯಲ್ಲಿ ಸಿಕ್ಕ 12900 ಹಣವನ್ನು ವಾರಸುದಾರರಿಗೆ ತಲುಪಿಸಿದ ವಿದ್ಯಾರ್ಥಿಗಳು

ಸಮಗ್ರ ನ್ಯೂಸ್:‌ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ರಸ್ತೆಯಲ್ಲಿ ಹೋಗುವಾಗ ದಾರಿಯಲ್ಲಿ ಸಿಕ್ಕ 12 ಸಾವಿರ ಹಣವನ್ನ ವಿದ್ಯಾರ್ಥಿಗಳು ಪೊಲೀಸರಿಗೆ ಕೊಟ್ಟು ಪ್ರಾಮಾಣಿಕತೆ ಮೆರೆದಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಎಸ್.ವಿ.ಟಿ.ರಸ್ತೆಯ ಚಂದು ಆಟ್ರ್ಸ್ ಬಳಿ ಕಲ್ಕೆರೆ ಗ್ರಾಮದ ಜಯಂತ್ ಎಂಬುವರು 12900 ರೂಪಾಯಿ ಹಣವನ್ನ ಕಳೆದುಕೊಂಡಿದ್ದರು. ಕೊಪ್ಪಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಕಾಲೇಜು ಮುಗಿಸಿ ಮನೆಗೆ ಹೋಗುವಾಗ ರಸ್ತೆಯಲ್ಲಿ 12900 ರೂಪಾಯಿ ಹಣ ಸಿಕ್ಕಿತ್ತು. ಆ ಹಣವನ್ನ ವಿದ್ಯಾರ್ಥಿಗಳು ಶುಕ್ರವಾರ ಪೊಲೀಸರಿಗೆ ನೀಡಿ,

ಚಿಕ್ಕಮಗಳೂರು: ರಸ್ತೆಯಲ್ಲಿ ಸಿಕ್ಕ 12900 ಹಣವನ್ನು ವಾರಸುದಾರರಿಗೆ ತಲುಪಿಸಿದ ವಿದ್ಯಾರ್ಥಿಗಳು Read More »

ಕೊಟ್ಟಿಗೆಹಾರ: ಕಾಡಾನೆ ದಾಳಿ, ಮೇಯಲು ಕಟ್ಟಿ ಹಾಕಿದ್ದ ಹಸು ಸಾವು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಕಾಡಾನೆ ದಾಳಿಗೆ ತೋಟದಲ್ಲಿ ಮೇಯಲು ಕಟ್ಟಿದ್ದ ಹಸು ಸ್ಥಳದಲ್ಲೇ ಸಾವನ್ನಪ್ಪಿದೆ. ಮೂಡಿಗೆರೆ ತಾಲೂಕಿನ ಕೂವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಕೂಡಿಗೆ ಗ್ರಾಮದ ಬೋಬೇಗೌಡ ಅವರ ತೋಟದಲ್ಲಿ ಹಾಡುಹಗಲೇ ಕಾಡಾನೆ ದಾಳಿ ಮಾಡಿದೆ. ತೋಟದಲ್ಲಿದ್ದ ಬಾಳೆಗಿಡವನ್ನ ಸಂಪೂರ್ಣ ನಾಶ ಮಾಡಿದ್ದು ಇನ್ನು ಅಡಿಕೆ ಹಾಗೂ ತೆಂಗಿನ ಮರಗಳನ್ನ ಬುಡಸಮೇತ ಕಿತ್ತು ಹಾಕಿದೆ. ತೋಟದಲ್ಲಿ ಮೇಯಲು ಕಟ್ಟಿಹಾಕಿದ್ದ ಹಸುವಿನ ಮೇಲೂ ಕಾಡಾನೆ ದಾಳಿ ಮಾಡಿದ್ದು ಹಸು ಕೂಡ

ಕೊಟ್ಟಿಗೆಹಾರ: ಕಾಡಾನೆ ದಾಳಿ, ಮೇಯಲು ಕಟ್ಟಿ ಹಾಕಿದ್ದ ಹಸು ಸಾವು Read More »

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ| ಮಾಜಿ ಸಚಿವ ಈಶ್ವರಪ್ಪಗೆ ಬಿಗ್ ರಿಲೀಪ್

ಸಮಗ್ರ ನ್ಯೂಸ್: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳ ಇಲ್ಲವೆಂದು ಬಿ ರಿಪೋರ್ಟ್​​ ಸಲ್ಲಿಸಿದ್ದರು. ಉಡುಪಿ ಪೊಲೀಸರು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್‌ ಸಲ್ಲಿಕೆ ಮಾಡಿದ್ದರು. ಈ ಬಿ ರಿಪೋರ್ಟ್ ಸಲ್ಲಿಕೆಯನ್ನು ಪ್ರಶ್ನಿಸಿ ಮೃತ

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ| ಮಾಜಿ ಸಚಿವ ಈಶ್ವರಪ್ಪಗೆ ಬಿಗ್ ರಿಲೀಪ್ Read More »

ಪತ್ರಕರ್ತ‌ ನಿಶಾಂತ್ ಬಿಲ್ಲಂಪದವು ಮೇಲಿನ ದೌರ್ಜನ್ಯಕ್ಕೆ ಜರ್ನಲಿಸ್ಟ್ ಯೂನಿಯನ್ ಖಂಡನೆ| ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ: ಪ್ರತಿಭಟನೆಯ ಎಚ್ಚರಿಕೆ

ಸಮಗ್ರ ನ್ಯೂಸ್: ವಿಜಯವಾಣಿ ಮತ್ತು ದಿಗ್ವಿಜಯ ವಾಹಿನಿಯ ಪುತ್ತೂರು ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ನಿಶಾಂತ್ ಬಿಲ್ಲಂಪದವು ಅವರ ಮೇಲೆ ಜುಲೈ 15ರಂದು ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದಿರುವ ದೌರ್ಜನ್ಯವನ್ನು ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು‌ ಘಟಕ ಖಂಡಿಸುತ್ತದೆ. ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ ನಿಶಾಂತ್ ಬಿಲ್ಲಂಪದವು ಅವರು ಕಾರ್ಯ ನಿರತರಾಗಿದ್ದ ವೇಳೆ ಅಮಾನವೀಯವಾಗಿ ವರ್ತಿಸಿ ಅವರಿಗೆ ಹಲ್ಲೆ ನಡೆಸಿ ಮೊಬೈಲ್ ಫೋನ್‌ ಹುಡಿ ಮಾಡಿ ಜೀವ ಬೆದರಿಕೆ‌ ಒಡ್ಡಿರುವ ಘಟನೆಯನ್ನು‌ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕ ಗಂಭೀರವಾಗಿ

ಪತ್ರಕರ್ತ‌ ನಿಶಾಂತ್ ಬಿಲ್ಲಂಪದವು ಮೇಲಿನ ದೌರ್ಜನ್ಯಕ್ಕೆ ಜರ್ನಲಿಸ್ಟ್ ಯೂನಿಯನ್ ಖಂಡನೆ| ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ: ಪ್ರತಿಭಟನೆಯ ಎಚ್ಚರಿಕೆ Read More »