July 2023

ಬಣಕಲ್: ಕೃಷಿ ಪಂಡಿತ,ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಪ್ರಸ್ತುತ 2023-24 ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ ಮತ್ತು ಆತ್ಮ ಯೋಜನೆಯಡಿ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಪಂಡಿತ ಪ್ರಶಸ್ತಿ ಭಾಗವಹಿಸುವವರು ಸಮಗ್ರ ಕೃಷಿ ಪದ್ದತಿ, ಬೆಳೆ ಪದ್ದತಿಗಳು ಮತ್ತು ಬೆಳೆ ವೈವಿಧ್ಯೀಕರಣ, ಸಾವಯವ ಕೃಷಿ, ಕೃಷಿ ಯಂತ್ರೋಪಕರಣಗಳ ಬಳಕೆ, ನೀರಿನ ಸಮರ್ಥ ಸದ್ಬಳಕೆ,ಇನ್ನಿತರ ಯಾವುದಾದರೂ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದವರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ ಎಂದು ಸಹಾಯಕ ಕೃಷಿ ನಿರ್ದೇಶಕರಾದ ಸುಮ.ಹೆಚ್.ಎನ್.ತಿಳಿಸಿದ್ದಾರೆ. ರೈತ ಮಹಿಳೆಯರನ್ನು […]

ಬಣಕಲ್: ಕೃಷಿ ಪಂಡಿತ,ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಚಿಕ್ಕಮಗಳೂರು: ಕಾರು ಬೈಕ್‌ ಡಿಕ್ಕಿ ಇಬ್ಬರು ಸಾವು| ಹೊತ್ತಿ ಉರಿದ ಬೈಕ್

ಸಮಗ್ರ ನ್ಯೂಸ್:‌ ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನಪ್ಪಿದ ಘಟನೆ ಕಡೂರು ತಾಲೂಕಿನ ಕಂಸಾಗರ ಗ್ರಾಮದ ಸಮೀಪ ಸಂಭವಿಸಿದೆ. ಹೊಸದುರ್ಗ ಮೂಲದ ಲೋಹಿತ್ (33) ನಾಗರಾಜ್ (35) ಮೃತ ದುರ್ದೈವಿಗಳು, ಬೈಕ್ ಸವಾರರು ಚಿಕ್ಕಮಗಳೂರಿನಿಂದ ಕಡೂರು‌ ಕಡೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದ್ದು, ಅಫಘಾತದ ರಭಸಕ್ಕೆ ಬೈಕ್‌ ಹೊತ್ತಿ ಉರಿದಿದೆ.

ಚಿಕ್ಕಮಗಳೂರು: ಕಾರು ಬೈಕ್‌ ಡಿಕ್ಕಿ ಇಬ್ಬರು ಸಾವು| ಹೊತ್ತಿ ಉರಿದ ಬೈಕ್ Read More »

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ| ಸೇವೆಯಿಂದ ಸಂತೃಪ್ತಿ ಸಿಗುತ್ತದೆ : ಡಾ| ಚೂಂತಾರು

ಸಮಗ್ರ ನ್ಯೂಸ್: ಜು.13 ರಂದು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ಸಹಾಯಕ ಆಡಳಿತ ಅಧಿಕಾರಿಯಾಗಿ ಮುಂಬಡ್ತಿ ಹೊಂದಿ ಜಿಲ್ಲಾ ಗೃಹರಕ್ಷಕದಳ ಕಛೇರಿ ಬೆಂಗಳೂರು ದಕ್ಷಿಣ ಇಲ್ಲಿ ವರ್ಗಾವಣೆಯಾದ ಕವಿತಾ ಕೆ.ಸಿ ಹಾಗೂ ಪ್ರಥಮ ದರ್ಜೆ ಸಹಾಯಕಿಯಾಗಿ ಉಡುಪಿ ಜಿಲ್ಲೆಗೆ ವರ್ಗಾವಣೆಯಾದ ಅನಿತಾ ಟಿ.ಎಸ್ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ, ಕವಿತಾ ಅವರು ಫೆಬ್ರವರಿ ತಿಂಗಳಿನಲ್ಲಿ ಉಡುಪಿ ಜಿಲ್ಲೆಯಿಂದ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ| ಸೇವೆಯಿಂದ ಸಂತೃಪ್ತಿ ಸಿಗುತ್ತದೆ : ಡಾ| ಚೂಂತಾರು Read More »

ಬೆಳ್ತಂಗಡಿ: ಬಿಜೆಪಿ ಕಾರ್ಯಕರ್ತರಿಂದಲೇ ಅಕ್ರಮ ಜಾನುವಾರು ಸಾಗಾಟ| ನಾಲ್ಕು ಮಂದಿಯ ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಹಿಂಸಾತ್ಮಕವಾಗಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಬಿಜೆಪಿಯ ಸಕ್ರಿಯ ಕಾರ್ಯಕರ್ತರೆನ್ನಲಾಗಿದೆ. ಇವರಿಂದ ಸಾಗಾಟಕ್ಕೆ ಬಳಸಿದ ಮೂರು ವಾಹನಗಳು, 6 ದನ ಮತ್ತು 2 ಗಂಡು

ಬೆಳ್ತಂಗಡಿ: ಬಿಜೆಪಿ ಕಾರ್ಯಕರ್ತರಿಂದಲೇ ಅಕ್ರಮ ಜಾನುವಾರು ಸಾಗಾಟ| ನಾಲ್ಕು ಮಂದಿಯ ಬಂಧಿಸಿದ ಪೊಲೀಸರು Read More »

ಕುಶಾಲನಗರ:ಅಕ್ರಮವಾಗಿ ಮಾದಕ ವಸ್ತುಗಳ ಮಾರಾಟಕ್ಕೆ ಯತ್ನ | ನಾಲ್ವರ ಬಂಧನ

ಸಮಗ್ರ ನ್ಯೂಸ್: ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತಿದ್ದ ನಾಲ್ವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿ ಒಂದು ಕೆಜಿ 160 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಹೊಸ ತೋಟ ನಿವಾಸಿಗಳಾದ ಕೆ.ಎಚ್ ಫೈಸಲ್, ಶರೀಫ್, ಗೋಂದಿ, ಬಸವನಹಳ್ಳಿ ನಿವಾಸಿ ಜೆ.ಎ.ಶಶಿಕುಮಾರ್, ಗುಡ್ಡೆ ಹೊಸೂರು ನಿವಾಸಿ ವಿನೀತ್, ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ 6.5 ಗ್ರಾಂ ಎಂಡಿಎಂಎ ಮಾರಕ ಟ್ಯಾಬ್ಲೆಟ್ಸ್ ಅನ್ನು ಕೂಡ ವಶಪಡಿಸಿಕೊಂಡಿದ್ದಾರೆ. ಜಿಲ್ಲಾಧ್ಯಂತ ಇಂತಹ ಮಾರಕ ವಸ್ತುಗಳನ್ನು ಸೇವಿಸುವರು ಮಾರಾಟ ಮಾಡುವವರು

ಕುಶಾಲನಗರ:ಅಕ್ರಮವಾಗಿ ಮಾದಕ ವಸ್ತುಗಳ ಮಾರಾಟಕ್ಕೆ ಯತ್ನ | ನಾಲ್ವರ ಬಂಧನ Read More »

ಬೆಳ್ತಂಗಡಿ ಕಾಂಗ್ರೆಸ್ ನಲ್ಲೂ ಭುಗಿಲೆದ್ದ ಭಿನ್ನಮತ| ರಕ್ಷಿತ್ ಶಿವರಾಂ ಟೀಮ್ ಗೆ ಗೇಟ್ ಪಾಸ್ ನೀಡಿದ ಬ್ಲಾಕ್ ಕಾಂಗ್ರೆಸ್

ಸಮಗ್ರ ನ್ಯೂಸ್: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಸೋಲು-ಗೆಲುವಿನ ಕುರಿತು ಪರಾಮರ್ಶೆ ನಡೆಸುವ ವೇಳೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ ನಡೆದ ಘಟನೆ ಜು.14 ರಂದು ಸಂಜೆ ನಡೆದಿದೆ. ಬೆಳ್ತಂಗಡಿ ಮೂರು ಮಾರ್ಗದ ಬಳಿ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಜಿ.ಪಂ. ಮಾಜಿ ಅಧ್ಯಕ್ಷೆ ಮಮತಾ ಗಟ್ಟಿ, ರಾಜ್ಯಸಭಾ ಮಾಜಿ ಸದಸ್ಯ ಇಬ್ರಾಹಿಂ, ಸಹಿತ ಅಶ್ವಿನ್ ರೈ ಬಂಟ್ವಾಳ್ ವೀಕ್ಷಕರಾಗಿ ಸೇರಿದ್ದರು. ಸಭೆ ಆರಂಭವಾಗುತ್ತಲೆ ರಕ್ಷಿತ್ ಶಿವರಾಂ ಆಪ್ತ ಬಳಗದಲ್ಲಿ ಗುರುತಿಸಿಕೊಂಡ

ಬೆಳ್ತಂಗಡಿ ಕಾಂಗ್ರೆಸ್ ನಲ್ಲೂ ಭುಗಿಲೆದ್ದ ಭಿನ್ನಮತ| ರಕ್ಷಿತ್ ಶಿವರಾಂ ಟೀಮ್ ಗೆ ಗೇಟ್ ಪಾಸ್ ನೀಡಿದ ಬ್ಲಾಕ್ ಕಾಂಗ್ರೆಸ್ Read More »

ಕಡಬ: ನಂದಕುಮಾರ್ v/s ಜಿ.ಕೃಷ್ಣಪ್ಪ| ಎರಡು ಬಣದ ನಡುವೆ ಮಾರಾಮಾರಿ..!

ಸಮಗ್ರ ನ್ಯೂಸ್: ಕಡಬ ಬ್ಲಾಕ್‌ನ ನಡೆದ ಕಾಂಗ್ರೆಸ್‌ನ ಪರಾಮರ್ಶೆ ಸಭೆಯಲ್ಲಿ ಜಿ.ಕೃಷ್ಣಪ್ಪ ಹಾಗೂ ನಂದಕುಮಾರ್ ಬಣದ ನಡುವೆ ಮಾರಾಮಾರಿಯಾದ ಘಟನೆ ಕಡಬ ಅಂಬೇಡ್ಕರ್ ಭವನದಲ್ಲಿ ಜು.14ರಂದು ಸಭೆ ನಡೆದಿದೆ. ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸೋಲಿನ ಪರಾಮರ್ಶೆ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್ ಸಮಿತಿಯ ಮುಖಂಡರು ಆಗಮಿಸಿದ್ದರೆನ್ನಲಾಗಿದೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ. ಎಂಬ ಆರೋಪದಲ್ಲಿ ಇತ್ತೀಚೆಗಷ್ಟೆ ಕಾಂಗ್ರೆಸ್ ಶಿಸ್ತು ಸಮಿತಿಯಿಂದ ಉಚ್ಛಾಟನೆಗೊಳಗಾದ ನಾಯಕರು ಈ ಸಭೆಗೆ ಆಗಮಿಸಿದ್ದ ವೇಳೆ ಜಿ.ಕೃಷ್ಣಪ್ಪ ಬೆಂಬಲಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರೆನ್ನಲಾಗಿದೆ.

ಕಡಬ: ನಂದಕುಮಾರ್ v/s ಜಿ.ಕೃಷ್ಣಪ್ಪ| ಎರಡು ಬಣದ ನಡುವೆ ಮಾರಾಮಾರಿ..! Read More »

ಮತ್ತೊಂದು ಚೀತಾ ಸಾವು| ಕುನೋ ಉದ್ಯಾನದಲ್ಲಿ ಸಾವನ್ನಪ್ಪಿದ ಸೂರಜ್| ನಾಲ್ಕೇ ತಿಂಗಳಲ್ಲಿ ಅಸುನೀಗಿದ 8ನೇ ಚೀತಾ

ಸಮಗ್ರ ನ್ಯೂಸ್: ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನದಲ್ಲಿ ಶುಕ್ರವಾರ ಗಂಡು ಚೀತಾ ಸೂರಜ್ ಸಾವನ್ನಪ್ಪಿದೆ. ಈ ಉದ್ಯಾನದಲ್ಲಿ ಸುಮಾರು 4 ತಿಂಗಳುಗಳಲ್ಲಿ ಸಾವನ್ನಪ್ಪಿರುವ 8ನೇ ಚೀತಾ ಇದಾಗಿದೆ. ಇಂದು ಮುಂಜಾನೆ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಆಫ್ರಿಕಾದಿಂದ ತರಲಾಗಿದ್ದ ಚೀತಾ ಸೂರಜ್ ಶವವಾಗಿ ಪತ್ತೆಯಾಗಿದೆ. ಸೂರಜ್ ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರವಷ್ಟೇ ಮತ್ತೊಂದು ಗಂಡು ಚೀತಾ ತೇಜಸ್ ಶವವಾಗಿ ಪತ್ತೆಯಾಗಿತ್ತು. ಕೆಲ ದಿನಗಳ ಹಿಂದೆ ಹೆಣ್ಣು ಚೀತಾದೊಂದಿಗೆ ಕಾದಾಟ ನಡೆಸಿದ್ದು, ಬಳಿಕ ಅದು

ಮತ್ತೊಂದು ಚೀತಾ ಸಾವು| ಕುನೋ ಉದ್ಯಾನದಲ್ಲಿ ಸಾವನ್ನಪ್ಪಿದ ಸೂರಜ್| ನಾಲ್ಕೇ ತಿಂಗಳಲ್ಲಿ ಅಸುನೀಗಿದ 8ನೇ ಚೀತಾ Read More »

ಎರಡೆರಡು ಆಟಿ ಅಮಾವಾಸ್ಯೆ| ಆಟಿ ಕಷಾಯ ಕುಡಿಯೋದು ಯಾವಾಗ ಮರ್ರೆ!?

ಸಮಗ್ರ ನ್ಯೂಸ್: ಕರಾವಳಿಗರಿಗೆ ಆಟಿ ಅಂದರೆ ಅದು ವಿಶೇಷವಾದ ತಿಂಗಳು. ಇನ್ನು ಆಟಿ ತಿಂಗಳಿನಲ್ಲಿ ಅಮಾವ್ಯಾಸೆಯಂದು ವಿಶೇಷವಾದ ಹಾಲೆ ಮರದ ಕಷಾಯವನ್ನು ತುಳುನಾಡಿನಾದ್ಯಂತ ಕುಡಿಯುವುದು ರೂಢಿ. ಆದರೆ ಈ ಬಾರಿ ಆಟಿ ತಿಂಗಳಿನಲ್ಲಿ ಎರಡೆರಡು ಅಮಾವ್ಯಾಸೆ ಬಂದು ಯಾವ ದಿನ ಮದ್ದು ಕುಡಿಬೇಕು ಅನ್ನೋ ಕನ್ಫ್ಯೂಷನ್ ನಲ್ಲಿದ್ದಾರೆ ಜನ. ಈಗ ಆ ಸಂಶಯಕ್ಕೆ ಉತ್ತರ ನಾವು ಹೇಳ್ತೇವೆ . ಈ ವರ್ಷ ಆಟಿಯಲ್ಲಿ ಎರಡು ಅಮಾವಾಸ್ಯೆ ಬರಲಿದೆ. ಒಂದು ಜುಲೈ 17 ಮತ್ತೊಂದು ಆಗಸ್ಟ್ 16. ಮೊದಲನೆಯದ್ದು

ಎರಡೆರಡು ಆಟಿ ಅಮಾವಾಸ್ಯೆ| ಆಟಿ ಕಷಾಯ ಕುಡಿಯೋದು ಯಾವಾಗ ಮರ್ರೆ!? Read More »

ನಿಗದಿತ ಕಕ್ಷೆ ಸೇರಿದ ಚಂದ್ರಯಾನ-3 ನೌಕೆ

ಸಮಗ್ರ ನ್ಯೂಸ್: ರಾಕೆಟ್‌ ಎಲ್‌ವಿಎಂ3- ಎಂ4(Rocket LVM3-M4) ಮೂಲಕ ಚಂದ್ರಯಾನ-3 (Chandrayana -3)ರ ಉಡಾವಣೆ ಯಶಸ್ವಿಯಾಯಿತು. ಆ ಮೂಲಕ ಇಸ್ರೋಗೆ ಮತ್ತೊಂದು ಗರಿ ಸಿಕ್ಕಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದ ಉಡ್ಡಯನ ಕೇಂದ್ರದಿಂದ ಲ್ಯಾಂಡರ್‌ (ವಿಕ್ರಮ್‌), ರೋವರ್‌ (ಪ್ರಜ್ಞಾನ) ಹೊತ್ತ ರಾಕೆಟ್‌ ನಭಕ್ಕೆ ಚಿಮ್ಮಿತು. ಮಧ್ಯಾಹ್ನ 2:35 ನಿಮಿಷಕ್ಕೆ ರಾಕೆಟ್‌ ಯಶಸ್ವಿಯಾಗಿ ಉಡಾವಣೆಗೊಂಡಿತು. ಚಂದ್ರಯಾನ-3 ಯಶಸ್ವಿ ಉಡಾವಣೆ ಆಗಿದ್ದು, ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರಿದೆ. ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಸಂಭ್ರಮ ಮುಗಿಲುಮುಟ್ಟಿದೆ. ಸಹೋದ್ಯೋಗಿಗಳ ಜೊತೆ ಇಸ್ರೋ ಅಧ್ಯಕ್ಷ

ನಿಗದಿತ ಕಕ್ಷೆ ಸೇರಿದ ಚಂದ್ರಯಾನ-3 ನೌಕೆ Read More »