ಇಸ್ರೋ ಮಾಜಿ ಅಧ್ಯಕ್ಷ ಡಾ. ಕೆ. ಕಸ್ತೂರಿರಂಗನ್ ಗೆ ಲಘು ಹೃದಯಾಘಾತ| ಶ್ರೀಲಂಕಾದಿಂದ ಬೆಂಗಳೂರಿಗೆ ಏರ್ ಲಿಪ್ಟ್
ಸಮಗ್ರ ವಾರ್ತೆ: ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿರಂಗನ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಕರೆ ತರಲಾಗುತ್ತಿದೆ. ಅವರು ಶ್ರೀಲಂಕಾದ ಕೊಲಂಬೊಗೆ ತೆರಳಿದ್ದ ವೇಳೆ ಈ ಲಘು ಹೃದಯಾಘಾತವಾಗಿದ್ದು, ವಿಮಾನದ ಮೂಲಕ ಅವರನ್ನು ಬೆಂಗಳೂರಿಗೆ ಕರೆತಂದು ನಾರಾಯಣ ಹೃದಯಾಲಯದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಸಂಜೆ 5.30ರ ಸುಮಾರಿಗೆ ಅವರನ್ನು ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಕರೆ ತರಲಿದ್ದು, ಅಲ್ಲಿಂದ ಜೀರೋ ಟ್ರಾಫಿಕ್ ಮೂಲಕ ನಾರಾಯಣ ಹೃದಯಾಲಯಕ್ಕೆ ಕರೆದೊಯ್ಯಲಾಗುವುದು. ನಾರಾಯಣ ಹೃದಯಾಲಯದ ಮುಖ್ಯಸ್ಥ ಡಾ.ದೇವಿ ಶೆಟ್ಟಿ […]