July 2023

ಜು.16ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ – ಸಿಎಂ

ಸಮಗ್ರ ನ್ಯೂಸ್: ಮಹಿಳೆಯರು ಬಹು ನಿರೀಕ್ಷೆಯಿಂದ ನೋಡುತ್ತಿರುವ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ.16ರಂದು ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದ್ದು, ಆಗಸ್ಟ್ ನಲ್ಲಿ 2000 ರೂ ಕುಟುಂಬದ ಯಜಮಾನಿ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ರಾಜ್ಯ ಬಜೆಟ್ ಮಂಡನೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದು ಮಂಡಿಸಿದ ಬಜೆಟ್ ಪೂರ್ಣಪ್ರಮಾಣದ ಬಜೆಟ್ ಆಗಿದೆ. ಬೊಮ್ಮಾಯಿ ನಾಲ್ಕು ತಿಂಗಳು ಲೇಖಾನುಧಾನ ತೆಗೆದುಕೊಂಡಿದ್ದರು ಎಂದರು. ಜೂನ್ 18ರಿಂದ ಗೃಹ […]

ಜು.16ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ – ಸಿಎಂ Read More »

ಕೊಂಚ ಬಿಡುವು ಕೊಟ್ಟ ಮಳೆ| ದ.ಕ ಜಿಲ್ಲೆಯಲ್ಲಿ ಜು.8ರಂದು ಶಾಲಾ ಕಾಲೇಜು ಎಂದಿನಂತೆ ಆರಂಭ – ಡಿಸಿ

ಸಮಗ್ರ ನ್ಯೂಸ್: ದ.ಕ. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಕಾರಣ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸುವ ಅನಿವಾರ್ಯತೆ ಕಂಡುಬರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಸೂಕ್ತವಾದ ರೀತಿಯಲ್ಲಿ ಎಚ್ಚರಿಕೆ ಮತ್ತು ವಿದ್ಯಾರ್ಥಿಗಳ ಸುರಕ್ಷತೆಯನ್ನು ಪರಿಶೀಲಿಸಿಕೊಂಡು ಶಾಲೆ, ಕಾಲೇಜು ನಡೆಸಲು ಜಿಲ್ಲಾಧಿಕಾರಿ ಸೂಚಿಸಿರುತ್ತಾರೆ.

ಕೊಂಚ ಬಿಡುವು ಕೊಟ್ಟ ಮಳೆ| ದ.ಕ ಜಿಲ್ಲೆಯಲ್ಲಿ ಜು.8ರಂದು ಶಾಲಾ ಕಾಲೇಜು ಎಂದಿನಂತೆ ಆರಂಭ – ಡಿಸಿ Read More »

ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಮಹಿಳೆಗೆ ಹೆರಿಗೆ ನೋವು| ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಚಾರ್ಮಾಡಿ ಘಾಟಿಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಅದರಲ್ಲಿ ಖಾಸಗಿ ವಾಹನದಲ್ಲಿ ಬಂದಿದ್ದ ಧರ್ಮಸ್ಥಳದಿಂದ ಬೆಂಗಳೂರಿಗೆ ಸಾಗುತ್ತಿದ್ದ ಗರ್ಭಿಣಿ ಮಹಿಳೆ ಚೈತ್ರಾ ಎಂಬವರು ಹೆರಿಗೆ ನೋವು ಕಾಣಿಸಿಕೊಂಡು ಅಸ್ವಸ್ಥಗೊಂಡರು. ಶುಕ್ರವಾರ ಚಾರ್ಮಾಡಿ ಘಾಟ್ ನಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಅಸ್ವಸ್ಥತೆಗೊಂಡಿದ್ದರಿಂದ ಸ್ಥಳದಲ್ಲಿದ್ದ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಆರೀಪ್ ಅವರು ಅವರ ಅಂಬುಲೆನ್ಸ್ ನಲ್ಲಿ ವಾಹನ ದಟ್ಟಣೆಯಲ್ಲೂ ಸೈರನ್ ಹಾಕಿ ಮೂಡಿಗೆರೆ ಆಸ್ಪತ್ರೆಗೆ ತಂದು

ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಮಹಿಳೆಗೆ ಹೆರಿಗೆ ನೋವು| ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲು Read More »

ಬಜೆಟ್ ಮಂಡನೆಯ ವೇಳೆ ಶಾಸಕರ ಸೀಟ್‍ನಲ್ಲಿ ಕುಳಿತಿದ್ದ ಕರಿಯಪ್ಪ ಬಂಧನ.!

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಜೆಟ್ ಮಂಡನೆಯ ವೇಳೆ ಸದನದ ಒಳಗಡೆ ಕುಳಿತಿದ್ದ ವ್ಯಕ್ತಿಯನ್ನು ಕರಿಯಪ್ಪ ಯಾನೇ ತಿಪ್ಪೇರುದ್ರ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಶರಣಪ್ಪ ಅವರು ಕರಿಯಪ್ಪ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. 70 ವರ್ಷದ ಈ ವ್ಯಕ್ತಿಯನ್ನು ಪೊಲೀಸ್ ಕಮಿಷನರ್ ಗಂಭೀರವಾಗಿ ಪರಿಗಣಿಸಿದ್ದಾರೆ. ಯಾವ ಶಾಸಕರ ಹೆಸರನ್ನು ಬಳಸಿ ಒಳಹೋಗಿದ್ದ?, ಆಸನದಲ್ಲಿ ಕುಳಿತುಕೊಂಡಿದ್ದು ಯಾಕೆ? ಹಾಗೂ ಯಾವ ದಾಖಲೆಗಳು ತನ್ನ ಬಳಿಯಿದ್ದವು ಅನ್ನೋದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸದನದೊಳಗೆ

ಬಜೆಟ್ ಮಂಡನೆಯ ವೇಳೆ ಶಾಸಕರ ಸೀಟ್‍ನಲ್ಲಿ ಕುಳಿತಿದ್ದ ಕರಿಯಪ್ಪ ಬಂಧನ.! Read More »

ಒಡಿಶಾ ರೈಲು ದುರಂತ| ಮೂವರು ಅಧಿಕಾರಿಗಳು ಅರೆಸ್ಟ್

ಸಮಗ್ರ ನ್ಯೂಸ್: ಒಡಿಶಾದಲ್ಲಿ 290 ಮಂದಿಯನ್ನು ಬಲಿಪಡೆದ ಸರಣಿ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ರೈಲ್ವೆ ಉದ್ಯೋಗಿಗಳಾಗಿರುವ ಮೂವರನ್ನು ಸಿಬಿಐ ಬಂಧಿಸಿದೆ. ಈಗಾಗಲೇ ಪ್ರಕರಣಕ್ಕೆ ಸಂಭಧಿಸಿದಂತೆ ರೈಲ್ವೆ ಸುರಕ್ಷತಾ ಆಯುಕ್ತರು ರೈಲ್ವೆ ಮಂಡಳಿಗೆ ಸಲ್ಲಿಸಿದ್ದ ವರದಿಯಲ್ಲಿ, ಮಾನವ ಪ್ರಮಾದ ಮತ್ತು ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಹೇಳಿತ್ತು. ಬಂಧಿತ ವ್ಯಕ್ತಿಗಳಾದ ಅರುಣ್ ಕುಮಾರ್ ಮಹಂತ, ಮುಹಮ್ಮದ್ ಅಮೀರ್ ಖಾನ್ ಮತ್ತು ಪಪ್ಪು ಕುಮಾರ್ ವಿರುದ್ಧ ಕೊಲೆಗೆ ಸಮನಾಗದ ನರಹತ್ಯೆ

ಒಡಿಶಾ ರೈಲು ದುರಂತ| ಮೂವರು ಅಧಿಕಾರಿಗಳು ಅರೆಸ್ಟ್ Read More »

ಚಾರ್ಮಾಡಿ ಘಾಟ್ ನಲ್ಲಿ ಬಸ್ ಗಳ ಮುಖಾಮುಖಿ ಡಿಕ್ಕಿ| ಚಾಲಕರು ಗಂಭೀರ; ನಡೆದೇ ಸಾಗಿದ ಪ್ರಯಾಣಿಕರು

ಸಮಗ್ರ ನ್ಯೂಸ್: ದಟ್ಟವಾದ ಮಂಜು ಆವರಿಸಿದ ಪರಿಣಾಮ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಎರಡು ಸರ್ಕಾರಿ ಬಸ್ಸುಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಚಾಲಕರ ಕಾಲುಗಳಿಗೆ ತೀವ್ರ ಗಾಯಗಳಾಗಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಸಾಗುತ್ತಿದ್ದ ಬಸ್ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಬಸ್ ಗಳು ಇಕ್ಕಟ್ಟಾದ ರಸ್ತೆಯಲ್ಲಿ ಶುಕ್ರವಾರ ಸಂಜೆ ಮುಖಾಮುಖಿ ಢಿಕ್ಕಿಯಾಗಿ ಅವಘಡ ಸಂಭವಿಸಿದೆ. ಅಪಘಾತಕ್ಕೀಡಾದ ಬಸ್ಸುಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರವಾಸಿಗರು ಇದ್ದರು. ಅಪಘಾತಕ್ಕೆ ರಸ್ತೆ ಕಾಮಗಾರಿ ಕಾರಣ

ಚಾರ್ಮಾಡಿ ಘಾಟ್ ನಲ್ಲಿ ಬಸ್ ಗಳ ಮುಖಾಮುಖಿ ಡಿಕ್ಕಿ| ಚಾಲಕರು ಗಂಭೀರ; ನಡೆದೇ ಸಾಗಿದ ಪ್ರಯಾಣಿಕರು Read More »

ಬೆಳ್ಳಾರೆ: ನೂತನ ಶ್ರೀಮಾತಾ ಸ್ವಸಹಾಯ ಸಂಘ ಉದ್ಘಾಟನೆ

ಸಮಗ್ರ ನ್ಯೂಸ್: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ತಾಲೂಕು, ಬೆಳ್ಳಾರೆ ವಲಯದ ದೇವರಕಾನ ಒಕ್ಕೂಟದಲ್ಲಿ ನೂತನವಾಗಿ ಶ್ರೀಮಾತಾ ಸ್ವಸಹಾಯ ಸಂಘವು ಜು.7ರಂದು ಉದ್ಘಾಟನೆಗೊಂಡಿತು. ಪ್ರಬಂಧಕರಾಗಿ ಅಜೇಯಕೃಷ್ಣ. ಕೆ, ಸಂಯೋಜಕರಾಗಿ ದೀಕ್ಷಿತ್. ಎಂ, ಕೋಶಾಧಿಕಾರಿಯಾಗಿ ವಿನೋದ್.ಕೆ ಯವರು ಆಯ್ಕೆಗೊಂಡರು.ವಲಯ ಮೇಲ್ವಿಚಾರಕರಾದ ಗೋಪಾಲಕೃಷ್ಣರವರು ಯೋಜನೆಯ, ಹಾಗೂ ಸಂಘದ ನಿರ್ವಹಣೆ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು. ಸಂಘದ ದಾಖಲಾತಿಯನ್ನು ಪ್ರಗತಿಪರ ಕೃಷಿಕರಾದ ಬಾಲಕೃಷ್ಣರವರು ಸಂಘದ ದಾಖಲಾತಿಯನ್ನು ಸಂಘಕ್ಕೆ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಸೇವಾಪ್ರತಿನಿಧಿಯಾದ ಶ್ರೀಮತಿ ಯಶೋಧ, ಹಾಗೂ ಸಂಘದ

ಬೆಳ್ಳಾರೆ: ನೂತನ ಶ್ರೀಮಾತಾ ಸ್ವಸಹಾಯ ಸಂಘ ಉದ್ಘಾಟನೆ Read More »

ಬೆಳ್ತಂಗಡಿ- ಗಡಾಯಿಕಲ್ಲು ಚಾರಣಕ್ಕೆ ಬ್ರೇಕ್

ಸಮಗ್ರ ನ್ಯೂಸ್: ಐತಿಹಾಸಿಕ ಪ್ರವಾಸಿ ತಾಣವಾಗಿರುವ ಬೆಳ್ತಂಗಡಿಯ ನಡ ಗ್ರಾಮದಲ್ಲಿರುವ ಸಾವಿರ ಅಡಿ ಎತ್ತರದ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಧಾರಾಕಾರ ಸುರಿಯುತ್ತಿರುವ ಮಳೆಯಿಂದ ಬಂಡೆಯಲ್ಲಿ ನೀರು ಹರಿಯುತ್ತಿದ್ದು, ಮೆಟ್ಟಿಲುಗಳಲ್ಲಿ ಪಾಚಿ ಬೆಳೆದು ಜಾರುವ ಸಾಧ್ಯತೆಗಳು ಇರುವುದರಿಂದ ಜು.7ರಿಂದ ಮುಂದಿನ ಆದೇಶದ ತನಕ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಬೆಳ್ತಂಗಡಿ ವನ್ಯಜೀವಿ ಇಲಾಖೆಯ ವಲಯಾರಣ್ಯಧಿಕಾರಿ ಸ್ವಾತಿ ಅವರು ತಿಳಿಸಿದ್ದಾರೆ. ಧರ್ಮಸ್ಥಳಕ್ಕೆ ತುಂಬ ಹತ್ತಿರದಲ್ಲಿಯೇ ಗಡಾಯಿಕಲ್ಲು ಕೋಟೆಯಿದ್ದು ಇದು ಕುದುರೇಮುಖ ಪರ್ವತ ಶ್ರೇಣಿಯ ಭಾಗವಾಗಿದೆ. ಚಾರಣಪ್ರಿಯರು ತುಂಬಾ ಇಷ್ಟಪಡುವ

ಬೆಳ್ತಂಗಡಿ- ಗಡಾಯಿಕಲ್ಲು ಚಾರಣಕ್ಕೆ ಬ್ರೇಕ್ Read More »

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ಪ್ರಶಸ್ತಿ

ಸಮಗ್ರ ನ್ಯೂಸ್: ಸ್ನೇಹಮಯಿ ವಿವೇಕಾನಂದ ಯೋಗ ಕೇಂದ್ರ ಕಡೂರು ಇವರು ನಡೆಸಿದ ಮುಕ್ತ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಸುಳ್ಯದ ಯೋಗೇನ ಚಿತ್ತಸ್ಯ ಯೋಗ ಕೇಂದ್ರದ ಯೋಗಪಟುಗಳಿಗೆ ಹಲವು ಪ್ರಶಸ್ತಿ ಲಭಿಸಿದೆ. 8 ರಿಂದ 12ನೇ ವಯೋಮಾನದ ಬಾಲಕರ ವಿಭಾಗದಲ್ಲಿ ತನುಷ್ ಕೆ ಆರ್ ದ್ವಿತೀಯ ಸ್ಥಾನ, ತನುಷ್ ಮೋಂಟಡ್ಕ ತೃತೀಯ ಸ್ಥಾನ, 5 ರಿಂದ 7ನೇ ವಯೋಮಾನದ ಬಾಲಕರ ವಿಭಾಗದಲ್ಲಿ ಆಶ್ರಿತ್ ಎ.ಸಿ ಚತುರ್ಥ ಸ್ಥಾನ, 8 ರಿಂದ 12ನೇ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಸೋನಾ ಅಡ್ಕಾರ್

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಯೋಗೇನ ಚಿತ್ತಸ್ಯ ಯೋಗ ಕೇಂದ್ರಕ್ಕೆ ಪ್ರಶಸ್ತಿ Read More »

ಜು.09: ಬೆಳ್ತಂಗಡಿಯ ಸೋಮಂತಡ್ಕದಲ್ಲಿ ವೆಂಕಟರಮಣ ಕ್ರೆಡಿಟ್ ಕೋ.ಆ. ಸೊಸೈಟಿಯ 22ನೇ ಶಾಖೆ ಲೋಕಾರ್ಪಣೆ| ಶಾಸಕ ಹರೀಶ್ ಪೂಂಜಾ ಸೇರಿ ಹಲವು ಗಣ್ಯರು ಭಾಗಿ

ಸಮಗ್ರ ನ್ಯೂಸ್: ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ, ಸುಳ್ಯ ಇದರ ನೂತನ 22 ನೇ ಶಾಖೆಯ ಉದ್ಘಾಟನೆ ಜು.9 ರಂದು ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದ ಡಿ’ಸೋಜಾ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಹೇಳಿದರು. ಅವರು ಜು.5 ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಂಘವು 1997ರಲ್ಲಿ ಗೌಡರ ಯುವ ಸೇವಾ ಸಂಘ ಇವರಿಂದ ಪ್ರವರ್ತಿಸಲ್ಪಟ್ಟಿದ್ದು ಪ್ರಾರಂಭದಲ್ಲಿ 435 ಜನರಿಂದ ಪ್ರಾರಂಭವಾದ ಈ ಸಂಘದಲ್ಲಿ ಪ್ರಸ್ತುತ 17,596

ಜು.09: ಬೆಳ್ತಂಗಡಿಯ ಸೋಮಂತಡ್ಕದಲ್ಲಿ ವೆಂಕಟರಮಣ ಕ್ರೆಡಿಟ್ ಕೋ.ಆ. ಸೊಸೈಟಿಯ 22ನೇ ಶಾಖೆ ಲೋಕಾರ್ಪಣೆ| ಶಾಸಕ ಹರೀಶ್ ಪೂಂಜಾ ಸೇರಿ ಹಲವು ಗಣ್ಯರು ಭಾಗಿ Read More »