ಅಬ್ಬರಿಸಿದ ಪುನರ್ವಸು ಮಳೆ| ಕರಾವಳಿ, ಮಲೆನಾಡಿಗೆ ಜಲ ಕಂಟಕ| ಇಂದೂ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ
ಸಮಗ್ರ ವಾರ್ತೆ: ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯ ರುದ್ರ ನರ್ತನದಿಂದ ಬದುಕು ಮೂರಾಬಟ್ಟೆಯಾಗಿದೆ. ಇಡೀ ಕರಾವಳಿಯನ್ನು ಮಳೆ ಆಪೋಷನ ಪಡೆದಿದ್ದು ಎಲ್ಲೆಂದರಲ್ಲಿ ಜಲರಾಶಿಯೇ ಕಂಡುಬರುತ್ತಿದೆ.ಈ ನಡುವೆ ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಮತ್ತು ರಸ್ತೆ ಕುಸಿತವೂ ಆರಂಭವಾಗಿದ್ದು, ಅಪಾಯ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಕಲ್ಲಪ್ಪಳ್ಳಿಯಲ್ಲಿ ರಸ್ತೆ ಮೇಲೆ ಗುಡ್ಡ ಕುಸಿತದ ಪರಿಣಾಮ ಸಂಚಾರ ಬಂದ್ ಆಗಿದೆ. […]