July 2023

ಸುಳ್ಯ: ಕುಮ್ ಕುಮ್ ಫ್ಯಾಷನ್ ನಲ್ಲಿ ಮಾನ್ಸೂನ್ ಆಫರ್| ಶೇ.30%ರಷ್ಟು ದರ ಕಡಿತ ಮಾರಾಟ

ಸಮಗ್ರ ನ್ಯೂಸ್: ಸುಳ್ಯದ ಶ್ರೀರಾಮ್ ಪೇಟೆಯ ಶುಭಲಕ್ಷ್ಮೀ ಬಿಲ್ಡ್ಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಸುಳ್ಯದ ಹೆಸರಾಂತ ವಸ್ತ್ರ ಮಳಿಗೆ ಕುಮ್ ಕುಮ್ ಫ್ಯಾಷನ್ ನಲ್ಲಿ ಮಾನ್ಸೂನ್ ಆಫರ್ ಆರಂಭಗೊಂಡಿದೆ. ಸುಳ್ಯದ ಕುಮ್ ಕುಮ್… ಫ್ಯಾಶನ್ ನಲ್ಲಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿವಿಧ ಕಂಪೆನಿಗಳ ರೈಟ್ ಕೋಟ್ ಇದೆ.‌ ಝೀಲ್, ಬಾಸ್, ರಿಯಲ್ ಸಹಿತ ವಿವಿಧ ಕಂಪೆನಿಗಳ ರೈನ್ ಕೋಟ್ ಗಳು ಶೇ.30 ರ ವರೆಗೆ ರಿಯಾಯಿತಿ ದರದಲ್ಲಿ ಗ್ರಾಹಕರಿಗೆ ನೀಡಲಾಗುತ್ತದೆ. ಕೆಲಸಕ್ಕೆ ಬಳಸಲು ರೈನ್ ಕೋಟ್ ಅತೀ ಕಡಿಮೆ […]

ಸುಳ್ಯ: ಕುಮ್ ಕುಮ್ ಫ್ಯಾಷನ್ ನಲ್ಲಿ ಮಾನ್ಸೂನ್ ಆಫರ್| ಶೇ.30%ರಷ್ಟು ದರ ಕಡಿತ ಮಾರಾಟ Read More »

ಭಾರೀ ಮಳೆಗೆ ಮಂಗಳೂರಿನಲ್ಲಿ ಗುಡ್ಡ ಕುಸಿತ| ಆತಂಕದಲ್ಲಿ ಜನತೆ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನಗರದ ಹೊರವಲಯದಲ್ಲಿ ಮಳೆಯಿಂದಾಗಿ ಗುಡ್ಡ ಕುಸಿದಿರುವ ಘಟನೆ ನಡೆದಿದೆ. ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಗುಡ್ಡ ಭಾರೀ ಮಳೆಯಿಂದಾಗಿ ಕುಸಿದಿದ್ದು, ಮತ್ತಷ್ಟು ಕುಸಿಯುವ ಭೀತಿ ಎದುರಾಗಿದ್ದು, ಸ್ಥಳೀಯ ಜನರಲ್ಲಿ ಆತಂಕ ಶುರುವಾಗಿದೆ. ಸದ್ಯ ಗುಡ್ಡ ಕುಸಿದ ಸ್ಥಳದಲ್ಲಿ ಜಿಲ್ಲಾಡಳಿತ ಟಾರ್ಪಲ್ ಹೊದಿಸಲಾಗಿದೆ. ಸದ್ಯ ಪಿವಿಎಸ್-ಕೆ.ಎಸ್. ರಾವ್ ರಸ್ತೆಯಲ್ಲಿ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಇನ್ನು ಮಂಗಳೂರು ನಗರದ ಹೊರವಲಯ‌ ಮಂಜನಾಡಿ ಗ್ರಾಮದ ನಾಟೆಕಲ್ ಸಮೀಪದ ಜೊಹರಾ ಎಂಬವರ ಮನೆಗೆ

ಭಾರೀ ಮಳೆಗೆ ಮಂಗಳೂರಿನಲ್ಲಿ ಗುಡ್ಡ ಕುಸಿತ| ಆತಂಕದಲ್ಲಿ ಜನತೆ Read More »

ಮೂಡಬಿದ್ರೆ: ಪರಸ್ತ್ರೀ ಜೊತೆ ಸರಸವಾಡಿದ ವಿಡಿಯೋ ವೈರಲ್ ಬೆನ್ನಲ್ಲೇ ಪುತ್ರ ಆತ್ಮಹತ್ಯೆ| ರಾಸಕ್ರೀಡೆಯ ವಿಡಿಯೋ ವೈರಲ್ ಮಾಡಿದಾತ ಅರೆಸ್ಟ್

ಸಮಗ್ರ ನ್ಯೂಸ್ : ಮಧ್ಯವಯಸ್ಸಿನ ಜೋಡಿಯ ರಾಸಕ್ರೀಡೆಯ ವಿಡಿಯೋ ವೈರಲ್ ಬಳಿಕ ವಿಡಿಯೋದಲ್ಲಿದ್ದ ವ್ಯಕ್ತಿಯ ಪುತ್ರ ಆತ್ಮಹತ್ಯೆಗೆ ಶರಣಾಗಿರುವ ಬೆನ್ನಲ್ಲೇ ವಿಡಿಯೋ ಮಾಡಿ ಬಳಿಕ ವಿಡಿಯೋ ವೈರಲ್ ಮಾಡಿದ್ದ ಆರೋಪಿಯನ್ನು ಮೂಡಬಿದ್ರಿ ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಯಕುಮಾರ್ ಎಂದು ಗುರುತಿಸಲಾಗಿದೆ. ಕೆಲ ಸಮಯದ ಹಿಂದೆಯೇ ಘಟನೆಯ ವಿಡಿಯೋ ಚಿತ್ರೀಕರಣವಾಗಿದೆ ಎನ್ನಲಾಗುತ್ತಿದ್ದು, ವಿಡಿಯೋ ಚಿತ್ರೀಕರಿಸಿದ ಆರೋಪಿ ವಿಡಿಯೋದಲ್ಲಿ ಸಿಕ್ಕಿಬಿದ್ದ ವ್ಯಕ್ತಿಯನ್ನು ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣ ಕೂಡ ಸುಲಿಗೆ ಮಾಡಿದ್ದ ಎಂಬ ಆರೋಪ ಸಾಮಾಜಿಕ

ಮೂಡಬಿದ್ರೆ: ಪರಸ್ತ್ರೀ ಜೊತೆ ಸರಸವಾಡಿದ ವಿಡಿಯೋ ವೈರಲ್ ಬೆನ್ನಲ್ಲೇ ಪುತ್ರ ಆತ್ಮಹತ್ಯೆ| ರಾಸಕ್ರೀಡೆಯ ವಿಡಿಯೋ ವೈರಲ್ ಮಾಡಿದಾತ ಅರೆಸ್ಟ್ Read More »

ಥಲಸ್ಸೇಮಿಯಾ ಮಾರಣಾಂತಿಕ ಕಾಯಿಲೆ ಗೊತ್ತಾಗಿ 2 ವರ್ಷದ ಮಗು, ಪತ್ನಿಯನ್ನು ಹೊರಹಾಕಿದ ಪತಿ| ಖಾಯಿಲೆ ಪೀಡಿತ ಮಗುವಿನ ಚಿಕಿತ್ಸೆಗೆ ಪರದಾಡುತ್ತಿರುವ ತಾಯಿ| ಈ ತಾಯಿಯ ಕಣ್ಣೀರು ಒರೆಸುವವರಾರು?

ಸಮಗ್ರ ವಿಶೇಷ: ದಿನನಿತ್ಯದ ಬದುಕಿನ ಬಂಡಿ ಸಾಗಿಸಲು ಕಷ್ಟ ಪಡುತ್ತಿರುವ ಕುಟುಂಬಕ್ಕೆ ಶ್ರೀಮಂತರ ಕಾಯಿಲೆ ಬಂದರೆ ಹೇಗಿರಬೇಡ? ಹುಬ್ಬಳ್ಳಿಯ ಕುಟುಂಬವೊಂದು ಇಂತಹ ಸಂಕಷ್ಟದ ಪರಿಸ್ಥಿತಿ ಅನುಭವಿಸುತ್ತಿದೆ. ಮಗುವಿನ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಬೇಕು. ಹೇಗಾದರೂ ಮಾಡಿ ನನ್ನ ಮಗುವನ್ನು ಬದುಕಿಸಿಕೊಡಿ ಎಂದು ತಾಯಿ ಅಂಗಲಾಚುತ್ತಿದ್ದಾರೆ. ಹುಬ್ಬಳ್ಳಿ ತಾಲೂಕಿನ ಸೈದಾಪುರ ಗ್ರಾಮದ ಶಾಹೀನಬೇಗಂ ಎನ್ನುವವರನ್ನು 4 ವರ್ಷಗಳ ಹಿಂದೆ ಭದ್ರಾಪುರದ ಖಾಜೇಸಾಬ ಅಬ್ಬಿಗೇರಿ ಎಂಬುವರಿಗೆ ವಿವಾಹ ಮಾಡಿಕೊಡಲಾಗಿತ್ತು. ಒಂದು ವರ್ಷ ಉರುಳಿದ ನಂತರ ಶಾಹೀನ ಬೇಗಂ ಅವಳಿ ಜವಳಿ

ಥಲಸ್ಸೇಮಿಯಾ ಮಾರಣಾಂತಿಕ ಕಾಯಿಲೆ ಗೊತ್ತಾಗಿ 2 ವರ್ಷದ ಮಗು, ಪತ್ನಿಯನ್ನು ಹೊರಹಾಕಿದ ಪತಿ| ಖಾಯಿಲೆ ಪೀಡಿತ ಮಗುವಿನ ಚಿಕಿತ್ಸೆಗೆ ಪರದಾಡುತ್ತಿರುವ ತಾಯಿ| ಈ ತಾಯಿಯ ಕಣ್ಣೀರು ಒರೆಸುವವರಾರು? Read More »

ಕೇರಳದಲ್ಲಿ ಮಳೆ ಅವಾಂತರ| ರಾಜ್ಯದಾದ್ಯಂತ ರೆಡ್ ಅಲರ್ಟ್| ಐದು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮುಂದಿನ ಕೆಲ ದಿನಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕೇರಳದಾದ್ಯಂತ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಇದೇ ರೀತಿ ಕರ್ನಾಟಕದ ಕರಾವಳಿಯಲ್ಲಿಯೂ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಭಾರೀ ಮಳೆ ಸುರಿಯುವ ಮನ್ಸೂಚನೆ ಇರುವ ಹಿನ್ನೆಲೆಯಲ್ಲಿ ಕಾಸರಗೋಡು, ಕಣ್ಣೂರು, ಇಡುಕ್ಕಿ, ತ್ರಿಶೂರ್ ಮತ್ತು ಎರ್ನಾಕುಲಂ ಜಿಲ್ಲಾಧಿಕಾರಿಗಳು ಬುಧವಾರ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ಗಳನ್ನು ಹೊರಡಿಸಿದ್ದು, ಬುಧವಾರ ಈ

ಕೇರಳದಲ್ಲಿ ಮಳೆ ಅವಾಂತರ| ರಾಜ್ಯದಾದ್ಯಂತ ರೆಡ್ ಅಲರ್ಟ್| ಐದು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿಯಲ್ಲಿ ವರುಣಾರ್ಭಟ| ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್

ಸಮಗ್ರ ನ್ಯೂಸ್: ಕರಾವಳಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಜುಲೈ 4 ರಿಂದ ಜುಲೈ 8 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45-55 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮಳೆಯಿಂದಾಗಿ ಕಾರವಾರದ ಹಬ್ಬುವಾಡದಲ್ಲಿರುವ ಸರಕಾರಿ ಬಸ್ ನಿಲ್ದಾಣ ಡಿಪೋ ಕಚೇರಿಯೊಳಗೆ ಮಳೆ‌ ನೀರು ನುಗ್ಗಿತ್ತು. ಡಿಪೋ ಕಚೇರಿಯ ಎಲೆಕ್ಟ್ರಾನಿಕ್

ಕರಾವಳಿಯಲ್ಲಿ ವರುಣಾರ್ಭಟ| ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ Read More »

9ನೇ ಬಾರಿಗೆ ಪ್ರಶಸ್ತಿ ಗೆದ್ದು ದಾಖಲೆ ನಿರ್ಮಿಸಿದ ಭಾರತ| ಸ್ಯಾಪ್ ಪುಟ್ಬಾಲ್ ಚಾಂಪಿಯನ್ ಆದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಜಿದ್ದಾಜಿದ್ದಿಯ ಕಾದಾಟದಲ್ಲಿ ಬ್ಲ್ಯೂ ಟೈಗರ್ಸ್‌ ಖ್ಯಾತಿಯ ಭಾರತ ಫುಟ್‌ಬಾಲ್‌ ತಂಡ 2023ರ ಸಾಲಿನ ಸ್ಯಾಫ್‌ ಫುಟ್‌ಬಾಲ್‌ ಚಾಂಪಿಯನ್‌ ಷಿಪ್‌ನಲ್ಲಿ ಪ್ರಶಸ್ತಿ ಜಯಿಸಿದೆ. ಮಂಗಳವಾರ ಶ್ರೀಕಂಠೀರವ ಮೈದಾನದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಪೆನಾಲ್ಟಿ ಶೂಟೌಟ್‌ನಲ್ಲಿ ಕುವೈತ್‌ ತಂಡವನ್ನು ಸೋಲಿಸಿ 9ನೇ ಬಾರಿಗೆ ಚಾಂಪಿಯನ್‌ ಆಯಿತು. ನಿಗದಿತ ಅವಧಿಯಲ್ಲಿ ಪಂದ್ಯ 1-1 ಗೋಲುಗಳಿಂದ ಡ್ರಾ ಕಂಡಿದ್ದರೆ, ಫಲಿತಾಂಶ ನಿರ್ಣಯಕ್ಕಾಗಿ ನಡೆದ ಪೆನಾಲ್ಟಿ ಶೂಟೌಟ್‌ನಲ್ಲಿ ಭಾರತ 5-4 ಗೋಲುಗಳಿಂದ ಕುವೈತ್‌ ತಂಡವನ್ನು ಮಣಿಸಿತು. ಪೆನಾಲ್ಟಿ ಶೂಟೌಟ್‌ನ

9ನೇ ಬಾರಿಗೆ ಪ್ರಶಸ್ತಿ ಗೆದ್ದು ದಾಖಲೆ ನಿರ್ಮಿಸಿದ ಭಾರತ| ಸ್ಯಾಪ್ ಪುಟ್ಬಾಲ್ ಚಾಂಪಿಯನ್ ಆದ ಟೀಂ ಇಂಡಿಯಾ Read More »

ಭಾರೀ ಮಳೆ ಮುನ್ಸೂಚನೆ| ಕರಾವಳಿಯ ಮೂರು ಜಿಲ್ಲೆಗಳ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಸಮಗ್ರ ವಾರ್ತೆ: ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ದಕ್ಷಿಣ ಕನ್ನಡದಲ್ಲಿ ಇಂದು ಕೂಡ ರಜೆ ವಿಸ್ತರಿಸಲಾಗಿದೆ. ತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ದಕ್ಷಣ ಕನ್ನಡದಲ್ಲಿ ಇಂದು ಕೂಡ ರಜೆ ವಿಸ್ತರಿಸಲಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು, ಪಿಯು ಕಾಲೇಜಿಗೆ ಇಂದು ರಜೆ ನೀಡಿ ಉಡುಪಿ ಡಿಸಿ

ಭಾರೀ ಮಳೆ ಮುನ್ಸೂಚನೆ| ಕರಾವಳಿಯ ಮೂರು ಜಿಲ್ಲೆಗಳ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ Read More »

ಭಾರೀ ಮಳೆ ಹಿನ್ನೆಲೆ| ಉಡುಪಿ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಜಿಲ್ಲೆಯಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಹಿನ್ನೆಲೆಯಲ್ಲಿ ಜು.5 ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ. ಈ ಕುರಿತು ಆದೇಶ ಹೊರಡಿಸಿರುವ ಅವರು ಜಿಲ್ಲೆಯ ಪಿಯುಸಿವರೆಗಿನ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ರಜೆ ನೀಡಿ ಆದೇಶಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ಉಡುಪಿ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜಿಗೆ ರಜೆ ಘೋಷಣೆ Read More »

ಭಾರೀ ವರ್ಷಧಾರೆ ಹಿನ್ನೆಲೆ| ಚಿಕ್ಕಮಗಳೂರು ಜಿಲ್ಲೆಗೆ ಹೈ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲಾಡಳಿತ ಮುಂದಿನ 3 ದಿನ ಭಾರೀ ಮಳೆ ಸುರಿಯುವ ಎಚ್ಚರಿಕೆ ನೀಡಿದೆ. ಜು. 5, 6 ಹಾಗೂ 7 ರಂದು ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 3 ದಿನ 115 ರಿಂದ 204 ಮಿ.ಮೀ. ಮಳೆ ಸಾಧ್ಯತೆಯಿದ್ದು ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನಲೆಯಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ಸಾರ್ವಜನಿಕರು, ವಾಹನ ಸವಾರರು ವಿದ್ಯುತ್ ಕಂಬ, ಮರಗಳ ಬಳಿ ನಿಲ್ಲದಂತೆ ಸೂಚನೆ ನೀಡಲಾಗಿದೆ. ಮಕ್ಕಳು

ಭಾರೀ ವರ್ಷಧಾರೆ ಹಿನ್ನೆಲೆ| ಚಿಕ್ಕಮಗಳೂರು ಜಿಲ್ಲೆಗೆ ಹೈ ಅಲರ್ಟ್ ಘೋಷಣೆ Read More »