Ad Widget .

ಚಾರ್ಜರ್ ಪಿನ್‌ಗೆ ಬಾಯಿ ಹಾಕಿದ 8 ತಿಂಗಳ ಕಂದಮ್ಮ ಸಾವು

ಸಮಗ್ರ ನ್ಯೂಸ್: ಮೊಬೈಲ್ ಚಾರ್ಜರ್ ಪಿನ್‌ಗೆ ಬಾಯಿ ಹಾಕಿ 8 ತಿಂಗಳ ಕಂದಮ್ಮ ಸಾವನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಿದ್ದರದಲ್ಲಿ ನಡೆದಿದೆ.

Ad Widget . Ad Widget .

ಸಂತೋಷ್ ಕಲ್ಗುಟ್ಕರ್ ಹಾಗೂ ಸಂಜನಾ ಎಂಬವರ 8 ತಿಂಗಳ ಮಗು ಸಾನಿಧ್ಯ ಸಾವನಪ್ಪಿದ ಮಗು, ಮೊಬೈಲ್ ಚಾರ್ಜ್ ಮಾಡಿದ ಬಳಿಕ ಪೋಷಕರು ಪ್ಲಗ್‌ಅನ್ನು ಆಫ್ ಮಾಡದೇ ನಿರ್ಲಕ್ಷ್ಯವಹಿಸಿದ್ದರು. ಈ ವೇಳೆ ಮಗು ಆಟವಾಡುತ್ತಾ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿಕೊಂಡಿತ್ತು. ಇದರಿಂದಾಗಿ ಶಾಕ್ ಹೊಡೆದು ಮಗು ಸಾವನ್ನಪ್ಪಿದೆ. ಘಟನೆ ಸಂಬಂಧ ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *