ಸಮಗ್ರ ನ್ಯೂಸ್: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರದ ಆರೋಪಗಳಿಂದ ಆತಂಕಕ್ಕೊಳಗಾಗಿದ್ದ ಕಾಂಗ್ರೆಸ್ ಹೈಕಮಾಂಡ್ ಬುಧವಾರ ಈ ಸಂಬಂಧ ರಾಜ್ಯ ಸಚಿವರಿಗೆ ಖಡಕ್ ಎಚ್ಚರಿಕೆ ನೀಡಿದೆ.
ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರ ಜತೆ ನಡೆದ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಕಪ್ಪುಚುಕ್ಕೆ ಬಾರದಂತೆ ನೋಡಿಕೊಳ್ಳಿ ಎಂದು ಸಚಿವರಿಗೆ ಸೂಚಿಸಿದ್ದಾರೆ.
ಭ್ರಷ್ಟಾಚಾರ ವಿಚಾರದಲ್ಲಿ ಬಿಜೆಪಿ ವಿರುದ್ಧ ಹೋರಾಟ ಮಾಡಿದ್ದೇವೆ. ಹೀಗಾಗಿ ಭ್ರಷ್ಟಾಚಾರ ಆರೋಪ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾವುದೇ ಆರೋಪ ಬರಬಾರದು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.