Ad Widget .

ರಾಜ್ಯದ ಗ್ರಾ.ಪಂ ಗ್ರಂಥಾಲಯಗಳಲ್ಲಿ ತಿಂಗಳಿಡೀ ಸ್ವಾತಂತ್ರ್ಯ ಆಚರಣೆಗೆ ಸೂಚನೆ

ಸಮಗ್ರ ನ್ಯೂಸ್: ರಾಜ್ಯದ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳಲ್ಲಿ ಆಗಸ್ಟ್ ತಿಂಗಳಿಡೀ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಕೈಗೊಳ್ಳಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.

Ad Widget . Ad Widget .

ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಗ್ರಾಮ ಪಂಚಾಯಿತಿ ಗ್ರಂಥಾಲಯಗಳಲ್ಲಿ ಹಲವಾರು ಅಭಿಯಾನಗಳ ಮೂಲಕ ಪ್ರತಿ ತಿಂಗಳು ಮಕ್ಕಳಿಗೆ ಉಪಯುಕ್ತ ಚಟುವಟಿಕೆಯನ್ನು ಆಯೋಜಿಸಿ, ಗ್ರಂಥಾಲಯಗಳನ್ನು ಸದುಪಯೋಗಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಅದರಂತೆ, ಆಗಸ್ಟ್-2023ರ ಮಾಹೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪುಯುಕ್ತ ಗ್ರಂಥಾಲಯಕ್ಕೆ ಬರುವ ಮಕ್ಕಳಿಗೆ ಚಟುವಟಿಕೆಗಳನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಆಗಸ್ಟ್-2023 ಮಾಹೆಯ ಪೂರ್ಣ “ಭಾರತ ಸ್ವಾತಂತ್ರ್ಯ ದಿನಾಚರಣೆ” ಸಂಭ್ರಮೋತ್ಸವವನ್ನು ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಆಚರಿಸಲು ಈ ಕೆಳಗಿನಂತೆ ಚಟುವಟಿಕೆಗಳನ್ನು ಆಯೋಜಿಸಲು ನಿರ್ಧರಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *