Samagra news: ಕರ್ನಾಟಕ ಸೇರಿದಂತೆ ದೇಶದ 20 ನಕಲಿ ವಿವಿಗಳ ಪಟ್ಟಿಯನ್ನು ವಿಶ್ವವಿದ್ಯಾನಿಲಯ ಧನಸಹಾಯ ಆಯೋಗವು(ಯುಜಿಸಿ)ರಿಲೀಸ್ ಮಾಡಿದೆ.
ವಿಶ್ವವಿದ್ಯಾಲಯಗಳು ನೀಡುವ ಪದವಿಗಳು ಉನ್ನತ ಶಿಕ್ಷಣ ಅಥವಾ ಉದ್ಯೋಗದ ಉದ್ದೇಶಕ್ಕಾಗಿ ಮಾನ್ಯತೆ ಹೊಂದಿರುವುದಿಲ್ಲ. ಈ ವಿಶ್ವವಿದ್ಯಾಲಯಗಳು ಯಾವುದೇ ಪದವಿಯನ್ನು ನೀಡುವ ಅಧಿಕಾರ ಹೊಂದಿರುವುದಿಲ್ಲ’ ಎಂದು ಯುಜಿಸಿ ಕಾರ್ಯದರ್ಶಿ ಮನೀಶ್ ಜೋಶಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದೆಹಲಿಯಲ್ಲಿ ಗರಿಷ್ಠ 8 ನಕಲಿ ವಿವಿಗಳಿದ್ದರೆ, ಉತ್ತರ ಪ್ರದೇಶದಲ್ಲಿ ನಾಲ್ಕು ವಿವಿಗಳಿವೆ. ಇನ್ನೂ ಕರ್ನಾಟಕದ ಮಟ್ಟಿಗೆ ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿರುವ ಬಡಗಾಂವಿ ಸರ್ಕಾರ ವಿಶ್ವ ಮುಕ್ತ ವಿಶ್ವವಿದ್ಯಾಲಯ ಶಿಕ್ಷಣ ಸೊಸೈಟಿ ನಕಲಿ ಎಂದು ಯುಜಿಸಿ ಘೋಷಣೆ ಮಾಡಿದೆ.