Ad Widget .

ಹವಾಮಾನ‌ ವರದಿ|ಕರಾವಳಿಯಲ್ಲಿ ಇಂದಿನಿಂದ ಮತ್ತೆ ಮಳೆ ಮುನ್ಸೂಚನೆ | ಎಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

Ad Widget . Ad Widget .

ಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Ad Widget . Ad Widget .

ಕ್ಯಾಸಲ್​ರಾಕ್, ಯಲ್ಲಾಪುರ, ಲೋಂಡಾ, ಕೊಲ್ಲೂರು, ಕದ್ರಾ, ಜೋಯ್ಡಾ, ಮುಂಡಗೋಡ, ಗುಂಜಿ, ಕಮ್ಮರಡಿ, ತಾಳಗುಪ್ಪ, ಸಕಲೇಶಪುರದಲ್ಲಿ ಮಳೆಯಾಗಿದೆ. ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ನೈಋತ್ಯ ಮುಂಗಾರು ರಾಜ್ಯಾದ್ಯಂತ ದುರ್ಬಲವಾಗಿತ್ತು.

Leave a Comment

Your email address will not be published. Required fields are marked *