Ad Widget .

ಮೋದಿ ಉಪನಾಮ ಪ್ರಕರಣ| ರಾಹುಲ್ ಗಾಂಧಿಗೆ ಮತ್ತೆ ಮರಳಿದ ಸಂಸದ ಸ್ಥಾನ| ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ

ಸಮಗ್ರ ನ್ಯೂಸ್: ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೀಡಾಗಿದ್ದ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿಧಿಸಿದ ಎರಡು ವರ್ಷ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ.

Ad Widget . Ad Widget .

ಸುಪ್ರೀಂಕೋರ್ಟ್ ತಡೆಯಾಜ್ಞೆಯಿಂದಾಗಿ ಲೋಕಸಭೆ ಸದಸ್ಯತ್ವದಿಂದಲೇ ಅನರ್ಹಗೊಂಡಿದ್ದ ರಾಹುಲ್ ಗಾಂಧಿ ನಿರಾಳರಾಗಿದ್ದಾರೆ. ಹಾಗೆಯೇ, ಸಂಸತ್ ಸದಸ್ಯತ್ವ ಸ್ಥಾನವೀಗ ಮರಳಿದೆ.

Ad Widget . Ad Widget .

ರಾಹುಲ್ ಗಾಂಧಿ ಲೋಕಸಭೆ ಸದಸ್ವತ್ವದಿಂದ ಅನರ್ಹವಾಗಲು ಕಾರಣವಾಗಿರುವ ಗರಿಷ್ಠ ಎರಡು ವರ್ಷಗಳ ಶಿಕ್ಷೆಯನ್ನು ಸಮರ್ಥಿಸಲು ವಿಚಾರಣಾ ನ್ಯಾಯಾಲಯವು ಕಾರಣವನ್ನು ನೀಡಲಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವಿಚಾರಣಾ ನ್ಯಾಯಾಲಯದ ಆದೇಶದ ಪರಿಣಾಮಗಳು ವ್ಯಾಪಕವಾಗಿವೆ. ರಾಹುಲ್ ಗಾಂಧಿ ಅವರು ಸಾರ್ವಜನಿಕ ಜೀವನದಲ್ಲಿ ಮುಂದುವರಿಯುವ ಹಕ್ಕು ಮಾತ್ರವಲ್ಲದೆ ಅವರನ್ನು ಆಯ್ಕೆ ಮಾಡಿದ ಮತದಾರರ ಮೇಲೂ ಪರಿಣಾಮ ಬೀರಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ಬಳಿಕ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

Leave a Comment

Your email address will not be published. Required fields are marked *