ಸೌಜನ್ಯ ತಾಯಿ, ತಮ್ಮನ ಮೇಲೆ ಹಲ್ಲೆಗೆ ಯತ್ನಿಸಿದವನ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್:‌ ಸೌಜನ್ಯ ತಾಯಿ ಮತ್ತು ತಮ್ಮ ನ ಮೇಲೆ ಹಲ್ಲೆ ನಡೆಸುವುದಕ್ಕೆ ಮುಂದಾದ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

Ad Widget ... ..

ಉಜಿರೆಯ ಜನಾರ್ದನ ಸ್ವಾಮಿ ದೇವಾಲಯ ವಠಾರದಲ್ಲಿ ಅಖಿಲ ಕರ್ನಾಟಕ ಮಂಜುನಾಥ ಸ್ವಾಮಿ ಭಕ್ತ ವೃಂದದಿಂದ ಭಾರಿ ಪ್ರತಿಭಟನೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ಸೌಜನ್ಯ ತಾಯಿ, ತಮ್ಮ, ಸಹೋದರಿಯರು ನ್ಯಾಯ ಕೇಳುವುದಕ್ಕಾಗಿ ಅಲ್ಲಿನ ಸಭೆಗೆ ತೆರಳುತ್ತಾರೆ. ಆಗ ಅಲ್ಲಿದ್ದ ವ್ಯಕ್ತಿಯೊಬ್ಬ ಸೌಜನ್ಯ ತಾಯಿ ಹಾಗೂ ತಮ್ಮನ ಮೇಲೆ ಹಲ್ಲೆ ನಡೆಸುವುದಕ್ಕೆ ಮುಂದಾಗಿದ್ದಾನೆ. ಈ ಕಾರಣ ಸೌಜನ್ಯ ತಾಯಿ ಕುಸುಮಾವತಿ ಮತ್ತು ಸಹೋದರ ಜಯರಾಂ ದೂರಿನ ಹಿನ್ನೆಲೆ ಎಫ್ಐಆರ್ ದಾಖಲಿಸಲಾಗಿದೆ.

Ad Widget

ವ್ಯಕ್ತಿಯೊಬ್ಬ ತಡೆದು ನಿಲ್ಲಿಸಿ ಮೈಗೆ ಕೈ ಹಾಕಿ ಚೂಡಿದಾರದ ಶಾಲು ಎಳೆದು ಮಾನಕ್ಕೆ ಕುಂದುಂಟು ಮಾಡಿದ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದೆ. ಅಲ್ಲದೇ ಮಗ ಜಯರಾಮನಿಗೂ ಹಲ್ಲೆ ಮಾಡಿದ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Leave a Comment

Your email address will not be published. Required fields are marked *