ಸಮಗ್ರ ನ್ಯೂಸ್: ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಿಂದ ನಾಪತ್ತೆಯಾಗಿದ್ದ ಭಾರತೀಯ ಸೇನಾ ಯೋಧನನ್ನು ಪತ್ತೆಹಚ್ಚಿದ್ದಾರೆ. ನಿಗೂಢವಾಗಿ ನಾಪತ್ತೆಯಾಗಿದ್ದ ಯೋಧನನ್ನು ಪತ್ತೆ ಹಚ್ಚಿ, ಒಂದು ವಾರದ ಬಳಿಕ ಪೊಲೀಸರು ಪ್ರಕರಣಕ್ಕೆ ಅಂತ್ಯ ಹಾಡಿದ್ದಾರೆ.
ಲಡಾಖ್‍ನಲ್ಲಿ ನಿಯೋಜನೆಗೊಂಡಿದ್ದ ಜಾವೆದ್ ಅಹ್ಮದ್ ವಾನಿ (25) ಅವರು ರಜೆ ಮೇಲೆ ಮನೆಗೆ ತೆರಳಿದ್ದರು. ಜು.29 ರಂದು ಸಂಜೆ ಮನೆಯಿಂದ ಅಂಗಡಿಯೊಂದಕ್ಕೆ ತೆರಳಿದ್ದವರು, ಬಳಿಕ ನಿಗೂಢವಾಗಿ ಕುಲ್ಗಾಮ್‍ನಿಂದ ಅವರು ನಾಪತ್ತೆಯಾಗಿದ್ದರು. ಅಲ್ಲದೇ ಕಾರಿನಲ್ಲಿ ಅವರ ಚಪ್ಪಲಿ ಹಾಗೂ ರಕ್ತದ ಕಲೆಗಳು ಪತ್ತೆಯು ಆತಂಕ ಸೃಷ್ಟಿ ಮಾಡಿತ್ತು. ಅವರನ್ನು ಉಗ್ರಗಾಮಿಗಳು ಅಪಹರಿಸಿರಬಹುದು ಎಂದು ಶಂಕಿಸಲಾಗಿತ್ತು.
ನಾಪತ್ತೆಯಾಗಿದ್ದ ಸೇನಾ ಯೋಧನನ್ನು ಕುಲ್ಗಾಮ್ ಪೊಲೀಸರು ವಶಪಡಿಸಿಕೊಂಡಿದ್ದು, ವೈದ್ಯಕೀಯ ತಪಾಸಣೆಯ ನಂತರ ವಿಚಾರಣೆ ಆರಂಭವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯೋಧನ ನಾಪತ್ತೆ ಪ್ರಕರಣದ ಬಗ್ಗೆ ಪೊಲೀಸರು ಈ ಹಿಂದೆ ಯಾವುದೇ ವಿವರಗಳನ್ನು ಬಹಿರಂಗಪಡಿಸಿರಲಿಲ್ಲ. ಆದರೆ ಯಾವುದೇ ಉಗ್ರಗಾಮಿ ಸಂಘಟನೆಗಳು ಅವರ ಅಪಹರಣದ ಹೊಣೆಯನ್ನು ಹೊತ್ತುಕೊಂಡಿರಲಿಲ್ಲ.