ಸಮಗ್ರ ನ್ಯೂಸ್: ಅನ್ನಭಾಗ್ಯ ಯೋಜನೆಗೆ ಚಾಲನೆ ದೊರೆತು 25 ದಿನಗಳ ಅವಧಿಯಲ್ಲಿ 1 ಕೋಟಿ ಕುಟುಂಬಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ. ಹೊಸ ಪಡಿತರ ಚೀಟಿ ವಿತರಣೆಗೆ ಅಗತ್ಯ ಕ್ರಮ ಕೈಗೊಂಡಿದ್ದೇವೆ. ರೇಷನ್ ಕಾರ್ಡ್ ತಿದ್ದುಪಡಿ/ರದ್ದತಿ/ ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ. ಆದಷ್ಟು ಬೇಗ ಹಣದ ಬದಲಿಗೆ ಅಕ್ಕಿ ಕೊಡಲಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಕೆ.ಎಚ್. ಮುನಿಯಪ್ಪ ಅವರು ಎಲ್ಲೊ ಬೋರ್ಡ್ ಕಾರು ಹೊಂದಿರುವವರಿಗೆ ಕಾರ್ಡ್ ರದ್ದು ಆಗಿದ್ದರೆ, ಪರಿಶೀಲಿಸಿ ವಾಪಸ್ ನೀಡುವ ಬಗ್ಗೆ ನಿರ್ಧಾರ ಮಾಡುತ್ತೇವೆ. ಎಲ್ಲೋ ಬೋರ್ಡ್ ಹೊಂದಿರುವವರು ಜೀವನಕ್ಕಾಗಿ ದುಡಿಯಲು ಕಾರ್ ತೆಗೆದುಕೊಂಡಿರುತ್ತಾರೆ. ಹೀಗಾಗಿ ಅವರ ಕಾರ್ಡ್ ರದ್ದು ಮಾಡೋದಿಲ್ಲ. ಆದರೆ ವೈಟ್ ಬೋರ್ಡ್ ಕಾರು ಹೊಂದಿರುವವರ ಕಾರ್ಡ್ ರದ್ದು ಆದೇಶವನ್ನು ವಾಪಸ್ ಪಡೆಯುವುದಿಲ್ಲ ಎಂದು ಹೇಳಿದರು.