Ad Widget .

ಎಂಟನೇ ತರಗತಿ ವಿದ್ಯಾರ್ಥಿನಿ ಈಗ ಐದು ತಿಂಗಳ ಗರ್ಭಿಣಿ| ಶಿಕ್ಷಕನೇ ಭಕ್ಷಕನಾದ ಕಥೆ!!

ಸಮಗ್ರ ನ್ಯೂಸ್: ಶಿಕ್ಷಕನಾಗಿ ಖಾಸಗಿ ಶಾಲೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿ ತನ್ನ ವಿದ್ಯಾರ್ಥಿನಿಗೆ ನಿರಂತರ ಲೈಂಗಿಕ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ. ಶಿಕ್ಷಕ ಶಿವಕುಮಾರ್‌ (33) ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

Ad Widget . Ad Widget .

ಸಂತ್ರಸ್ತೆಯು ಈತ ಬೋಧಿಸುತ್ತಿದ್ದ ಶಾಲೆಯಲ್ಲೇ ಎಂಟನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಈಗ ಆಕೆ ಐದು ತಿಂಗಳ ಗರ್ಭಿಣಿಯಾಗಿದ್ದು, ಇತ್ತೀಚಿಗಷ್ಟೇ ಶಿಕ್ಷಕನ ಕೃತ್ಯ ಬಯಲಾಗಿದೆ.

Ad Widget . Ad Widget .

ಪ್ರಕರಣ ಬೆಳಕಿಗೆ ಬಂದ ಬಳಿಕ ಪೋಷಕರು ಗೌನಿಪಲ್ಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಶಿಕ್ಷಕನ ವಿರುದ್ಧ ಪೋಕ್ಸೋ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Leave a Comment

Your email address will not be published. Required fields are marked *