ನಾಳೆ ಸ್ಪಂದನಾ ಪಾರ್ಥಿವ ಶರೀರ ತಾಯ್ನಾಡಿಗೆ

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿದ್ದು , ಬ್ಯಾಂಕಾಕ್ ನಿಂದ ನಾಳೆ ಬೆಂಗಳೂರಿಗೆ ಪಾರ್ಥಿವ ಶರೀರ ಆಗಮಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Ad Widget ... ..

ಬ್ಯಾಂಕಾಕ್ ಪ್ರವಾಸದಲ್ಲಿದ್ದ ಸ್ಪಂದನಾಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರುವ ಸಂಬಂಧ ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡಿ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

Ad Widget

ನಿವೃತ್ತ ಎಸಿಪಿ ಬಿ.ಕೆ. ಶಿವರಾಂ ಪುತ್ರಿ ಸ್ಪಂದನಾರನ್ನು ವಿಜಯ್ ರಾಘವೇಂದ್ರ ಮದುವೆಯಾಗಿದ್ದರು. ಸಹಾಯಕ ಪೊಲೀಸ್ ಆಯುಕ್ತರಾದ ಬಿ.ಕೆ.ಶಿವರಾಂ ಅವರ ಪುತ್ರಿ ಸ್ಪಂದನಾ ಅವರನ್ನು ಅವರು 26 ಆಗಸ್ಟ್ 2007 ರಂದು ಪ್ರೀತಿಸಿ ಮದುವೆಯಾಗಿದ್ದರು.

Leave a Comment

Your email address will not be published. Required fields are marked *