Ad Widget .

ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ ನಡೆಯಲ್ಲ ಎಸ್ಎಸ್ಎಲ್ ಸಿ ಎಕ್ಸಾಂ

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇನ್ಮುಂದೆ ಗ್ರಾಮೀಣ ಪ್ರದೇಶದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸದಂತೆ ಮಹತ್ವದ ಸೂಚನೆ ನೀಡಿದೆ.

Ad Widget . Ad Widget .

ಎಸ್‌ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಪ್ರಕರಣಗಳಿಗೆ ಪೋಷಕರು ವ್ಯಾಪಕ ಟೀಕೆ ವ್ಯಕ್ತಪಡಿಸಿದ್ದು, ಹೀಗಾಗಿ ನಕಲು ತಡೆಗಟ್ಟಲು 2024 ರ ಮಾರ್ಚ್/ಏಪ್ರಿಲ್ ನಲ್ಲಿ ಎಸ್‌ಎಸ್ ಎಲ್ ಸಿ ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ನಡೆಸದಂತೆ ಸೂಚನೆ ನೀಡಿದೆ.

Ad Widget . Ad Widget .

ಕಳೆದ ವರ್ಷ ರಾಜ್ಯದ 724 ಜಿಲ್ಲಾ, 755 ತಾಲೂಕು, 604 ಹೋಬಳಿ ಮತ್ತು 1,222 ಗ್ರಾಮೀಣ ಪ್ರದೇಶದ ಕೇಂದ್ರಗಳು ಸೇರಿ ರಾಜ್ಯಾದ್ಯಂತ ಒಟ್ಟಾರೆ 3,305 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಗ್ರಾಮೀಣ ಪ್ರದೇಶಗಳಿಗೆ ಕೊಕ್ ನೀಡಿ, ಹೋಬಳಿ, ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೆ ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ.

Leave a Comment

Your email address will not be published. Required fields are marked *