ಸಮಗ್ರ ನ್ಯೂಸ್: ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಇದೀಗ ಮತ್ತಷ್ಟು ಸರಳಗೊಂಡಿದ್ದು, ನೀವು ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾನುಭವಿಗಳು ನೇರವಾಗಿ ತಮ್ಮ ಹತ್ತಿರದ ನೋಂದಣಿ ಕೇಂದ್ರಗಳಿಗೆ ತಮ್ಮ ದಾಖಲೆಗಳೊಂದಿಗೆ ತೆರಳಿ ಹೆಸರು ನೋಂದಾಯಿಸಿಕೊಳ್ಳಬಹುದು.
ಮುಖ್ಯವಾದ ವಿಚಾರ ಅಂದ್ರೆ ಗೃಹಲಕ್ಷ್ಮಿಗೆ’ ಅರ್ಜಿ ಸಲ್ಲಿಸದ ಮಾತ್ರಕ್ಕೆ ಹಣ ಜಮೆ ಆಗಲ್ಲ, ತಪ್ಪದೇ ನೀವು ಈ ಕೆಲಸ ಮಾಡಬೇಕು .ಅರ್ಜಿ ಸಲ್ಲಿಕೆ ಪೂರ್ತಿಯಾದ ಮೇಲೂ ಈ ಕೆಲಸ ಮಾಡದಿದ್ದರೆ ಅವರು ಯೋಜನೆಯಿಂದ ವಂಚಿತರಾಗಬಹುದು. ಯಾಕೆಂದರೆ ಯಜಮಾನಿಯರು ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡದೇ ಇರುವುದು. ತಪ್ಪದೇ ನೀವು ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು. ಹಣವನ್ನು ನಿಮ್ಮ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಲಾಗಿದ್ದು. ಆದ್ದರಿಂದ ತಪ್ಪದೇ ನೀವು ಆಧಾರ್ ಕಾರ್ಡ್ ನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಬೇಕು.ಅರ್ಜಿ ಸಲ್ಲಿಸಿದ್ದರು ಕೂಡ ನಿಮ್ಮ ಬ್ಯಾಂಕ್ ಶಾಖೆಗೆ ಹೋಗಿ ಆಧಾರ್ ಸೀಡಿಂಗ್ ಗಾಗಿ ಅರ್ಜಿ ಸಲ್ಲಿಸಿ, ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮತ್ತು NPCI ಮ್ಯಾಪಿಂಗ್ ಮಾಡಿಸಬೇಕು.
ಆಧಾರ್ ಕಾರ್ಡ್ ಲಿಂಕ್ ಆಗಿರುವ ಖಾತೆಗೆ ಈಗಾಗಲೇ ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಹಣ ಕೂಡ ಬಂದಿದೆ. ಅದೇ ರೀತಿ ಅದೇ ಖಾತೆಗೆ ಗೃಹಲಕ್ಷ್ಮೀ ಯೋಜನೆ ಹಣ ಕೂಡ ಬರುತ್ತದೆ ಎಂದು ಹೇಳಲಾಗುತ್ತಿದೆ.
ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಹರಿದ್ದೀರಾ ಎನ್ನುವುದನ್ನು ತಿಳಿಯುವುದು ಹೇಗೆ..? ಇಲ್ಲಿದೆ ಮಾಹಿತಿ
ಮೊದಲು ನೀವು https://ahara.kar.nic.in/Home/EServices ವೆಬ್ಸೈಟ್ ಗೆ ಭೇಟಿ ನೀಡಿ.
ನಂತರ ಮುಖಪುಟದ ಎಡಭಾಗದಲ್ಲಿ ಮೂರು ಕೆರೆಗಳು ಕಾಣುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ ನಂತರ ಕೆಳಗಡೆ e-Ration card ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ show village list ಎಂಬ ಆಯ್ಕೆ ಸಿಗುತ್ತದೆ, ಅದರ ಮೇಲೆ ಕ್ಲಿಕ್ ಮಾಡಿ.
ನಂತರ ನಿಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯಿತಿ ಸೆಲೆಕ್ಟ್ ಮಾಡಿ ಗೋ ಮೇಲೆ ಕ್ಲಿಕ್ ಮಾಡಿದ್ರೆ ನಿಮ್ಮ ಗ್ರಾಮದ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರ ಯಜಮಾನಿಯರ ಸಂಪೂರ್ಣ ಮಾಹಿತಿ ಕಾಣಿಸುತ್ತದೆ. ಪಟ್ಟಿಯಲ್ಲಿರುವ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಹರಿರುತ್ತಾರೆ. ಅವರಿಗೆ ಸರ್ಕಾರ 2000 ರೂ ಹಣ ಹಾಕಲಿದೆ.