Ad Widget .

ಮಂಗಳೂರು:ಪತಿಯಿಂದ ಕಳ್ಳತನ |ಠಾಣಾ ಮೆಟ್ಟಿಲೇರಿದ ಪತ್ನಿ

ಸಮಗ್ರ ನ್ಯೂಸ್: ಕಪಾಟಿನಲ್ಲಿರಿಸಿದ ಪತ್ನಿಯ ಚಿನ್ನಾಭರಣವನ್ನು ಪತಿಯೇ ಕಳ್ಳತನ ಮಾಡಿದ ಘಟನೆ ಮಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget .

ಕೆ.ಪಿ.ಟಿ. ವ್ಯಾಸ ನಗರದ ಶಾಂತಲಾ ಆಶಿಯಾನ ಫ್ಲ್ಯಾಟ್‌ನ ಕಪಾಟಿನಲ್ಲಿರಿಸಿದ ಚಿನ್ನಾಭರಣವನ್ನು ಕಳ್ಳತನ ಮಾಡಿದ್ದು, ಪ್ರಮುಖ ಆರೋಪಿಗಳಾದ ಇಲಿಯಾಸ್‌ ಮತ್ತು ಪ್ರಭಾಕರ್‌ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ. ತಾಯಿ ಮನೆಯಿಂದ ಮತ್ತು ಪತಿ ಮನೆಯಿಂದ ಮದುವೆ ಸಂದರ್ಭದಲ್ಲಿ ನೀಡಿದ್ದ ಚಿನ್ನ ಸೇರಿದಂತೆ ಒಟ್ಟು 75 ಪವನ್‌ ಚಿನ್ನವಿತ್ತು. ಅದನ್ನು ತಾವು ವಾಸಿಸುತ್ತಿದ್ದ ಕೆ.ಪಿ.ಟಿ. ವ್ಯಾಸ ನಗರದ ಶಾಂತಲಾ ಆಶಿಯಾನ ಫ್ಲಾಟ್‌ನ ಕಪಾಟಿನಲ್ಲಿ ಭದ್ರವಾಗಿ ಇರಿಸಲಾಗಿತ್ತು. ಈ ವಿಷಯ ಪತಿ ಇಲಿಯಾಸ್‌ನಿಗೆ ಮಾತ್ರ ಗೊತ್ತಿತ್ತು.

Ad Widget . Ad Widget .

ದಂಪತಿಗಳ ನಡುವೆ ಜಗಳವಾಗಿ 2023 ರ ಏಪ್ರಿಲ್‌ ತಿಂಗಳಿನಲ್ಲಿ ಮಹಿಳೆ ಮನೆಯಿಂದ ಹೊರ ಬಂದು ತಾಯಿ ಮನೆಯಲ್ಲಿ ವಾಸವಿರುತ್ತಿದ್ದರು ಎನ್ನಲಾಗಿದೆ. ವಾರಕ್ಕೊಮ್ಮೆ ಫ್ಲಾಟ್‌ಗೆ ಹೋಗಿ ಬರುತ್ತಿದ್ದರು. ಸುಮಾರು ಒಂದು ತಿಂಗಳ ನಂತರ ಫ್ಲ್ಯಾಟ್‌ಗೆ ಹೋಗಿ ವಾಚ್‌ಮ್ಯಾನ್‌ ಬಳಿ ವಿಚಾರಿಸಿದಾಗ ಅವರ ಗಂಡ ಒಂದು ವಾರದಿಂದ ಫ್ಲ್ಯಾಟ್‌ಗೆ ಬಂದಿಲ್ಲ ಎಂದು ಮಾಹಿತಿ ಸಿಕ್ಕಿದೆ.

ಈ ಸಂದರ್ಭ ಮಹಿಳೆ ಅನುಮಾನಗೊಂಡು ಮನೆಯ ಬಂಗಾರವಿಟ್ಟ ಲಾಕರ್‌ ಕಪಾಟಿನಲ್ಲಿ ನೋಡಿದಾಗ ಲಾಕರ್‌ ಸಮೇತ ಚಿನ್ನವಿರಲಿಲ್ಲ. ತಕ್ಷಣ ಗಂಡನಿಗೆ ಕರೆ ಮಾಡಿದಾಗ ‘ನಾನು ಲಾಕರ್‌ ಸಮೇತ ಚಿನ್ನವನ್ನು ಕದ್ದುಕೊಂಡು ಹೋಗಿರುತ್ತೇನೆ. ನಿನಗೆ ಏನು ಮಾಡಲಾಗುತ್ತದೆ’ ಎಂದು ಹೇಳಿದ್ದಾರೆ.

ಅಲ್ಲದೆ ಚಿನ್ನವನ್ನು ಬ್ಯಾಂಕಿನಲ್ಲಿ ಸುಮಾರು 28.5 ಲಕ್ಷಕ್ಕೆ ಅಡವಿಟ್ಟು ಹಣ ಪಡೆದುಕೊಂಡಿರುವುದಾಗಿ ಹಾಗೂ ಅದಕ್ಕೆ ಬಡ್ಡಿ ಕಟ್ಟಲು ಆಗದೇ ಪ್ರಭಾಕರ್‌ ಎಂಬವರಿಗೆ 3 ತಿಂಗಳ ಮಟ್ಟಿಗೆ ಬಡ್ಡಿಯನ್ನು ಕಟ್ಟಲು ಅನುಮತಿ ನೀಡಿರುವುದಾಗಿ ತಿಳಿಸಿದ್ದಾನೆ. ಅಡವಿಟ್ಟ ಚಿನ್ನದಲ್ಲಿ ಪ್ರಭಾಕರನು ಮೂರು ತಿಂಗಳಾಗುವ ಮೊದಲು ಸುಮಾರು 12 ಲಕ್ಷದಷ್ಟು ಚಿನ್ನವನ್ನು ಬಿಡಿಸಿ ಕರಗಿಸಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾನೆ. ಈ ಕುರಿತು ಮಹಿಳೆಯು ಕದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *