ಸಮಗ್ರ ನ್ಯೂಸ್: ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ 2023-24 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅನುಷ್ಠಾನಗೊಳಿಸಲು ಅಧಿಸೂಚನೆ ಆಗಿರುತ್ತದೆ. ಯೋಜನೆಯಡಿಯಲ್ಲಿ ಭತ್ತದ ಬೆಳೆಗೆ ವಿಮೆ ನೋಂದಣಿ ಆರಂಭಗೊಂಡಿದೆ.
ಆಸಕ್ತ ಭತ್ತ ಬೆಳೆಗಾರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಜುಲೈ ತಿಂಗಳಿನಲ್ಲಿ ವಾಡಿಕೆ ಗಿಂತ ಕಡಿಮೆ ಮಳೆ ಬೀಳುತ್ತಿದ್ದು ಹಾಗೂ ಈಗಿನ ಪ್ರಕೃತಿ ವಿಕೋಪಗಳು ಹೆಚ್ಚಾಗಿದ್ದು, ಭತ್ತದ ಬೆಳೆಗೆ ವಿಮೆ ಮಾಡಿಸುವುದು ಅನಿವಾರ್ಯವಾಗಿರುತ್ತದೆ.
ಆದ್ದರಿಂದ ರೈತರು ಈ ಕೂಡಲೇ ಹತ್ತಿರದ ಸಹಕಾರಿ ಬ್ಯಾಂಕ್ ಅಥವಾ ಸಾಮಾನ್ಯ ಸೇವಾಕೇಂದ್ರಗಳನ್ನು ಸಂಪರ್ಕಿಸಿ ಅಗತ್ಯ ದಾಖಲಾತಿಗಳನ್ನು ನೀಡಿ ಬೆಳೆ ವಿಮೆಗೆ ನೋಂದಾವಣೆ ಮಾಡಿಕೊಳ್ಳಬಹುದು. ನೊಂದಣಿಗೆ ಆಗಸ್ಟ್ 16 ಕೊನೆ ದಿನವಾಗಿದೆ ಎಂದು ಮೂಡಿಗೆರೆ ಕೃಷಿ ಅಧಿಕಾರಿ ವೆಂಕಟೇಶ್ ಎಂ ಆರ್, ಬಣಕಲ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.