ಮಕ್ಕಳಿಗೆ ಜಾಮೂನಿನಲ್ಲಿ ವಿಷ ಹಾಕಿದ ತಂದೆ..!

ಸಮಗ್ರ ನ್ಯೂಸ್: ಮಕ್ಕಳಿಬ್ಬರಿಗೆ ವಿಷವುಣಿಸಿದ ತಂದೆ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಮನಗರ ತಾಲೂಕಿನ ಕ್ಯಾಸಾಪುರ ಗ್ರಾಮದಲ್ಲಿ ನಡೆದಿದೆ.

Ad Widget ... ..

ಗ್ರಾಮದ ಕುಮಾರ್ (38) ತನ್ನ ಇಬ್ಬರು ಹೆಣ್ಣುಮಕ್ಕಳಿಗೆ ಜಾಮೂನಿನಲ್ಲಿ ವಿಷ ಬೆರಸಿ ತಿನ್ನಿಸಿ ತಾನೂ ವಿಷ ಸೇವಿಸಿದ್ದಾರೆ. ಸದ್ಯ ಮೂವರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

Ad Widget

ಕೌಟುಂಬಿಕ ಕಲಹದಿಂದ ಕೆಲ ತಿಂಗಳ ಹಿಂದೆ ಪತ್ನಿ ತವರು ಮನೆ ಸೇರಿದ್ದರು. ಎರಡು ಮಕ್ಕಳನ್ನು ನೋಡಿಕೊಳ್ಳುತ್ತಿದ್ದ ಕುಮಾರ್ ಹೆಂಡತಿ ವಾಪಸ್ ಬಾರದಿದ್ದಕ್ಕೆ ಮನನೊಂದು ಮಕ್ಕಳಿಗೂ ವಿಷವುಣಿಸಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಕುರಿತು ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *