ಮೂಡಿಗೆರೆ: ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ| ತಾಯಿ – ಮಗ ಸಾವು

ಸಮಗ್ರ ನ್ಯೂಸ್: ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ತಾಯಿ ಮಗ ಸಾವನ್ನಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಬಳಿ ನಡೆದಿದೆ.

Ad Widget ... ..

ಪೂಜಾ ಹಿರೇಮಠ್, ರಾಜಶೇಖರ್ ಹಿರೇಮಠ್ ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿ ಶಿವಯಾಗಯ್ಯ ಹಿರೇಮಠ್ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Ad Widget

ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರಿನ ಕೋಣನಕುಂಟೆ ಮೂಲದವರು ಎಂದು ತಿಳಿದುಬಂದಿದೆ. ಧರ್ಮಸ್ಥಳದಿಂದ ಮೂಡಿಗೆರೆ ಮಾರ್ಗವಾಗಿ ಕಾರು ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಸಕಲೇಶಪುರದಿಂದ ಮೂಡಿಗೆರೆ ಕಡೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಅಪಘಾತವಾಗಿದೆ.

ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದವರ ದೇಹಗಳು ಕೂಡಾ ಸಂಪೂರ್ಣ ‌ಜಖಂಗೊಂಡಿದೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಭೀಕರ ಅಪಘಾತ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave a Comment

Your email address will not be published. Required fields are marked *