ಸಮಗ್ರ ನ್ಯೂಸ್: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದ ಬಗ್ಗೆ ಜನರಿಗೆ ಸಂಶಯ ಮತ್ತು ಗೊಂದಲ ಇದೆ. ಈ ಕಾರಣದಿಂದ ಪ್ರಕರಣದ ಮರು ತನಿಖೆಯಾಗಬೇಕಿದ್ದು, ಈ ನಿಟ್ಟಿನಲ್ಲಿ ಪ್ರಕರಣದ ಮರು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗುವುದು ಎಂದು ಶಾಸಕ ಅಶೋಕ್ಕುಮಾರ್ ರೈ ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ನೈಜ ಆರೋಪಿಗಳ ಬಂಧನ ಆಗಬೇಕು. ಆ ಮೂಲಕ ಸೌಜನ್ಯಾ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸಬಾರದು. ನಿಷ್ಪಕ್ಷಪಾತ ತನಿಖೆ ನಡೆಸಿ ಜನರಿಗೆ ಸತ್ಯ ತಿಳಿಸುವ ಕೆಲಸವನ್ನು ಸರ್ಕಾರ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.