ಬೆಳ್ತಂಗಡಿ: ಲೋ ಬಿಪಿಯಿಂದ ಹೃದಯಾಘಾತ; ಯುವತಿ ಸಾವು

ಸಮಗ್ರ ನ್ಯೂಸ್: ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ಯುವತಿ ಲೋ ಬಿಪಿ ಆಗಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಆ 13 ರಂದು ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ನಡೆದಿದೆ. ಇಲ್ಲಿನ ಜಾತಿಮಾರು ನಿವಾಸಿ ರಾಜು ದೇವಾಡಿಗ ಮತ್ತು ಸರೋಜ ದಂಪತಿಗಳ ಮಗಳು ಸುಮಾ (19) ಮೃತ ಯುವತಿ.

Ad Widget ... ..

ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಸುಮಾ ಮನೆಗೆ ಬಂದಿದ್ದಳು. ಆಗಸ್ಟ್ 9 ರಂದು ಅನಾರೋಗ್ಯದ ಕಾರಣದಿಂದ ಸ್ಥಳೀಯ ಆಸ್ಪತ್ರೆಗೆ ತೆರಳಿ ಮಾತ್ರೆಗಳನ್ನು ಪಡೆದು ಮನೆಗೆ ತೆರಳಿದ್ದಳು. ನಂತರ ಆಗಸ್ಟ್11 ರಂದು ಮತ್ತೆ ಅನಾರೋಗ್ಯ ಜಾಸ್ತಿಯಾದ ಕಾರಣ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ಹೋಗಿದ್ದು ಗುಣಮುಖವಾಗಿರುವ ಕಾರಣ ತನ್ನ ಅಕ್ಕನ ಮನೆ ಬಳ್ಳಮಂಜಕ್ಕೆ ತೆರಳಿದ್ದಳು.

Ad Widget

ಆಗಸ್ಟ್ 13 ರಂದು ಸಂಜೆ ಮತ್ತೆ ಅಸ್ವಸ್ಥಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಲೋ ಬಿಪಿ ಉಂಟಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.

Leave a Comment

Your email address will not be published. Required fields are marked *