ಸಮಗ್ರ ನ್ಯೂಸ್: ರಾಜ್ಯದಾದ್ಯಂತ ಮತ್ತೆ ಮುಂಗಾರು ಚುರುಕು ಪಡೆದಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗಿದೆ. ಆ.20ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಭಾನುವಾರ ಕನಕಪುರ, ಮಂಕಿ, ಉಡುಪಿಯಲ್ಲಿ ಮಳೆಯಾಗಿದೆ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಭಾನುವಾರ ಸಾಧಾರಣ ಮಳೆಯಾಗಿದೆ, ಇಂದು ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತನ್ನ ವರದಿಯಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಇವುಗಳಲ್ಲಿ ಹಿಮಾಚಲ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ ಮತ್ತು ಉತ್ತರಾಖಂಡದ ಹೆಸರುಗಳೂ ಸೇರಿವೆ.
ಸದ್ಯ, ಕಳೆದ ಹಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆ ಉತ್ತರಾಖಂಡದಲ್ಲಿ ಸಂಕಷ್ಟದ ಪರಿಸ್ಥಿತಿ ನಿರ್ಮಾಣ ಮಾಡಿದೆ. ಅದೇ ಸಮಯದಲ್ಲಿ, ಹವಾಮಾನ ಇಲಾಖೆ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.