Ad Widget .

ಬಂಟ್ವಾಳ:ಪರವಾನಗಿ ಇಲ್ಲದೆ ಹಿಂಸಾತ್ಮಕ ರೀತಿಯಲ್ಲಿ ಗೋ ಸಾಗಾಟ| ಪ್ರಕರಣ ದಾಖಲು

ಸಮಗ್ರ ನ್ಯೂಸ್:ಯಾವುದೇ ಪರವಾನಿಗೆ ಇಲ್ಲದೇ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಿ ಗೋಕಳ್ಳ ಜಿಹಾದಿಗಳನ್ನು ಬೆಂಡೆತ್ತಿದ ಘಟನೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮುಳಿಯದಲ್ಲಿ ನಡೆದಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪಾತೂರು ಗ್ರಾಮದ ಮಂಜೇಶ್ವರ ನಿವಾಸಿ ಮೂಸಾ ಎಂಬವರು ಮೂವರ ಜೊತೆ ಗೂಡ್ಸ್ ವಾಹನದಲ್ಲಿ ಮುಳಿಯ ಎಂಬಲ್ಲಿಂದ 5 ಜಾನುವಾರುಗಳನ್ನು ಖರೀದಿ ಮಾಡಿಕೊಂಡು ಗೂಡ್ಸ್ ವಾಹನದಲ್ಲಿ ಕಜೆ ಎಂಬಲ್ಲಿಗೆ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಜಯ ಪ್ರಶಾಂತ, ಲಕ್ಷೀಶ ಹಾಗೂ ಇತರ ಮೂರು ಮೋಟಾರು ಸೈಕಲ್ ಮತ್ತು ಒಂದು ಕಾರನ್ನು ರಸ್ತೆಗೆ ಅಡ್ಡವಾಗಿರಿಸಿ ಗೋ ಸಾಗಾಟದ ವಾಹನವನ್ನು ತಡೆದಿದ್ದಾರೆ. ಈ ವೇಳೆ ಗೂಡ್ಸ್ ವಾಹನದಲ್ಲಿದ್ದ ನಾಲ್ಕು ಜನರನ್ನು ಎಳೆದು ಹಾಕಿ ಬೇಸ್ಬಾಲ್ ಬ್ಯಾಟ್ ಹಾಗೂ ಕತ್ತಿಯಿಂದ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Ad Widget . Ad Widget . Ad Widget .

ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು, 5 ಜಾನುವಾರುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದುಕೊಂಡು, ಅಕ್ರಮ ಗೋ ಸಾಗಟದ ಆರೋಪಿಗಳಾದ ಮಂಜೇಶ್ವರ ಬಾಕ್ರಬೈಲು ನಿವಾಸಿ ಇಬ್ರಾಹಿಂ ಯಾನೆ ಮೋನು, ಮಂಜೇಶ್ವರ ಬಾಕ್ರಬೈಲು ನಿವಾಸಿ ಮೂಸಾ, ಬಂಟ್ವಾಳ ಕನ್ಯಾನ ಗ್ರಾಮದ ನಿವಾಸಿ ಹಮೀದ್ ಯಾನೆ ಜಲಾಲ್, ಹಾಗೂ ಸಾಲೆತ್ತೂರಿನ ಹಮೀದ್ ಎಂಬವರ ವಿರುದ್ಧ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆ-2020 ಹಾಗೂ 11(1)(ಎ),11(1)(ಡಿ) ಪ್ರಾಣಿ ಹಿಂಸೆ ನಿಷೇಧ ಕಾಯ್ದೆ 1960ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಈ ಬಗ್ಗೆ ಮಂಜೇಶ್ವರ ಬಾಕ್ರಬೈಲು ನಿವಾಸಿ ಮೂಸಾ ಎಂಬವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದು ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ಜಯ ಪ್ರಶಾಂತ, ಲಕ್ಷೀಶ ಹಾಗೂ ಇತರ ಮೂವರು ನಮ್ಮ ಮೇಲೆ ಹಲ್ಲೆ ಮಾಡಿ, ಜೀವ ಬೆದರಿಕೆ ಒಡ್ಡಿದ್ದಾರೆ ಎಂಬುದಾಗಿ ದೂರು ನೀಡಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅ.ಕ್ರ. 143/2023 ಕಲಂ:341,307,324,323,506,143,147,148 ರ ಜೊತೆಗೆ 149 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Leave a Comment

Your email address will not be published. Required fields are marked *