ಮುಂದಿನ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ NEP ರದ್ದು ಸಿಎಂ ಹೇಳಿಕೆ

ಸಮಗ್ರ ನ್ಯೂಸ್: ಬಿಜೆಪಿ ಸರ್ಕಾರ ದೇಶದೆಲ್ಲೆಡೆ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(ಎನ್‌ಇಪಿ) ಮುಂದಿನ ಶೈಕ್ಷಣಿಕ ವರ್ಷದಿಂದ ಕರ್ನಾಟಕದಲ್ಲಿ ರದ್ದುಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

Ad Widget ... ..

ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ವಿಷಯ ಪ್ರಕಟಿಸಿದರು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಎನ್‌ಇಪಿಯನ್ನು ರದ್ದುಪಡಿಸಲಾಗುವುದು ಹೇಳಿದ್ದಾರೆ.

Ad Widget

“NEP” ಅನ್ನು ರದ್ದುಗೊಳಿಸುವ ಮೊದಲು ಕೆಲವು ಅಗತ್ಯ ಸಿದ್ಧತೆಗಳನ್ನು ಮಾಡಬೇಕಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಇದಕ್ಕೆ ಸಮಯಾವಕಾಶ ಸಿಕ್ಕಿರಲಿಲ್ಲ. ಚುನಾವಣೆಯ ನಂತರ ಸರ್ಕಾರ ರಚನೆಯಾದಾಗ, ಶೈಕ್ಷಣಿಕ ವರ್ಷ ಪ್ರಾರಂಭವಾಗಿತ್ತು ಎಂದು ಸಭೆಯಲ್ಲಿ ಮಾತನಾಡಿದ್ದಾರೆ.

Leave a Comment

Your email address will not be published. Required fields are marked *