ಹವಾಮಾನ ವರದಿ: ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ| ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಂಭವ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Ad Widget

ಮಾಹಿತಿಯಂತೆ ಮುಂಡರಗಿ, ಕೆಂಭಾವಿ, ಲಿಂಗನಮಕ್ಕಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸೆಕೆ ವಿಪರೀತವಾಗಿದೆ. ಎಚ್​ಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂಗಾರು ದುರ್ಬಲವಾಗಿರುವ ಮಧ್ಯಪ್ರದೇಶ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಆಗಸ್ಟ್​ 17ರಿಂದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Comment

Your email address will not be published. Required fields are marked *