ಸಮಗ್ರ ನ್ಯೂಸ್: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತ ಪಟ್ಟ ಘಟನೆ ಸಕಲೇಶಪುರ ತಾಲ್ಲೂಕಿನ ಕುನಿಗನಹಳ್ಳಿಯ ವಡೂರು ಬಳಿ ನಡೆದಿದೆ.

ಕಾಡಾನೆ ದಾಳಿಗೆ ಕವಿತಾ (40) ಎಂಬವರು ಬಲಿಯಾಗಿದ್ದು, ಅವರು ವಡೂರಿನಲ್ಲಿರುವ ತನ್ನ ಅಮ್ಮನನ್ನು ನೋಡಲೆಂದು ಬಂದಿದ್ದ ಅವರು ಮನೆಯ ಬಳಿ ಇದ್ದಾಗಲೇ ಕಾಡಾನೆ ಅಟ್ಟಿಸಿಕೊಂಡು ಬಂದಿದೆ. ಈ ವೇಳೆ ಕೆಳಗೆ ಬಿದ್ದ ಕವಿತಾ ಅವರ ಮೇಲೆ ಆನೆ ದಾಳಿ ಮಾಡಿ ಸೊಂಟದ ಭಾಗವನ್ನು ತುಳಿದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾದರು ಚಿಕಿತ್ಸೆ ಫಲಕಾರಿಯಾಗದೇ ಕೊನೆ ಉಸಿರೆಳೆದಿದ್ದಾರೆ.
ಸಕಲೇಶಪುರ ತಾಲ್ಲೂಕಿನಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಸತತವಾಗಿ ಜೀವಹಾನಿ ಸಂಭವಿಸುತ್ತಲೇ ಇದೆ. ಕಾಡಾನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಬೆಳೆಗಾರರ ಸಂಘಟನೆ ಮತ್ತು ರೈತಸಂಘಟನೆಗಳು ಆಗ್ರಹಿಸಿವೆ.