Ad Widget .

ಸೌಜನ್ಯ ಪರ ಹೋರಾಟಗಾರ ತಿಮರೋಡಿಗೆ ಗನ್ ಮ್ಯಾನ್| ಅಧಿಕೃತ ಆದೇಶ ಹೊರಡಿಸಿದ ಹೋಮ್ ಮಿನಿಸ್ಟರ್

ಸಮಗ್ರ ನ್ಯೂಸ್: ಕಳೆದ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಸೌಜನ್ಯ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದ ಮುಂದಾಳತ್ವವನ್ನು ವಹಿಸಿಕೊಂಡಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಜೀವಕ್ಕೆ ಅಪಾಯ ಅಗುವ ಸಾಧ್ಯತೆ ಇರುವ ಕಾರಣ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರಾರ ಮನವಿ ಮೇರೆಗೆ ಕರ್ನಾಟಕ ರಾಜ್ಯ ಸರಕಾರವು ಇಬ್ಬರು ಗನ್ ಮ್ಯಾನ್ ಒದಗಿಸಲು ಮುಂದಾಗಿದೆ.

Ad Widget . Ad Widget .

ಕರ್ನಾಟಕದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಆಗಸ್ಟ್ 17 ರಂದು ಸಂಜೆ ಬೆಂಗಳೂರಿನಲ್ಲಿ ಭೇಟಿ ಮಾಡಿ ಹೋರಾಟಗಾರ ಮಹೇಶ್ ಶೆಟ್ಟಿಗೆ ಹೋರಾಟ ಮಾಡುವ ಉದ್ದೇಶದಿಂದ ರಕ್ಷಣೆಗಾಗಿ ಇಬ್ಬರು ಗನ್ ಮ್ಯಾನ್ ನೀಡಲು ಮನವಿ ನೀಡಿದ್ದರು.

Ad Widget . Ad Widget .

ಮನವಿ ಸ್ವೀಕರಿಸಿದ ಗೃಹ ಸಚಿವ ಪರಮೇಶ್ವರ್ ದಕ್ಷಿಣ ಕನ್ನಡ ಎಸ್ಪಿ ರೀಷ್ಯಂತ್ ಅವರಿಗೆ ಗನ್ ಮ್ಯಾನ್ ನೀಡಲು ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.

ಕಳೆದ ಒಂದು ತಿಂಗಳ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಗನ್ ಮ್ಯಾನ್ ಪಡೆಯಲು ಮನವಿ ಪತ್ರ ನೀಡಿದ್ದರು. ಇದರ ಬಗ್ಗೆ ಎಸ್ಪಿ ಗುಪ್ತಚರ ಇಲಾಖೆಗೆ ವರದಿ ನೀಡಲು ಆದೇಶ ನೀಡಿದ್ದರು. ಗುಪ್ತಚರ ಇಲಾಖೆಯ ವರದಿಯಲ್ಲಿ ಯಾವುದೇ ಜೀವ ಬೆದರಿಕೆಗಳು ಮಹೇಶ್ ಶೆಟ್ಟಿ ತಿಮರೋಡಿಗೆ ಇಲ್ಲವೆಂದು ಎಸ್ಪಿಗೆ ಗುಪ್ತಚರ ಇಲಾಖೆ ವರದಿ ನೀಡಿದ್ದರು. ಅದ್ದರಿಂದ ಗನ್‌ಮ್ಯಾನ್ ನೀಡಲು ಪೊಲೀಸ್ ಇಲಾಖೆ ಮುಂದಾಗಿರಲಿಲ್ಲ.

Leave a Comment

Your email address will not be published. Required fields are marked *