Ad Widget .

ಮಂಗಳೂರು: ಈರುಳ್ಳಿ ದರದಲ್ಲಿ ದಿಢೀರ್ ಏರಿಕೆ| ಗ್ರಾಹಕರ ಕಣ್ಣಲ್ಲಿ ಕಣ್ಣೀರು

ಸಮಗ್ರ ನ್ಯೂಸ್: ಟೊಮೆಟೊ ದರ ಕ್ರಮೇಣ ಇಳಿಮುಖವಾಗುತ್ತಿದ್ದಂತೆ ಇದೀಗ ಈರುಳ್ಳಿ ದರ ಗಗನಮುಖಿಯಾಗತೊಡಗಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈರುಳ್ಳಿ ಬೆಲೆ ಗಣನೀಯವಾಗಿ ಹೆಚ್ಚಳವಾಗಿದೆ. ದೇಶದಲ್ಲಿ ಅತಿ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರದಿಂದ ಪೂರೈಕೆ ಕಳೆದ ಎರಡು ವಾರಗಳಿಂದ ಕಡಿಮೆಯಾಗಿದೆ. ಹೀಗಾಗಿ ಈರುಳ್ಳಿ ಬೆಲೆ ಏರುಗತಿಯಲ್ಲಿ ಸಾಗಿದೆ ಎಂದು ಮೂಲಗಳು ತಿಳಿಸಿವೆ.

Ad Widget . Ad Widget .

ಮಂಗಳೂರಿನಲ್ಲಿ ಕಳೆದ ಎರಡು ವಾರಗಳಿಂದ ಈರುಳ್ಳಿ ಬೆಲೆ ನಿರಂತರವಾಗಿ ಏರಿಕೆಯಾಗಿದೆ. ಕಳೆದ ವಾರ ಕ್ವಿಂಟಲ್‌ಗೆ 2000 ರೂ.ಗೆ ತಲುಪಿತ್ತು. ಇದೀಗ 2900 ರೂ. ದಾಟಿದೆ. ಕಳೆದ ವಾರ 26 ರೂ.ಗೆ ಮಾರಾಟವಾಗುತ್ತಿದ್ದ ಒಂದು ಕಿಲೋ ಈರುಳ್ಳಿ ಇದೀಗ 34 ರಿಂದ 35 ರೂ.ಗೆ ಮಾರಾಟವಾಗುತ್ತಿದೆ.

Ad Widget . Ad Widget .

ಲಭ್ಯವಿರುವ ಪೂರೈಕೆಗೆ ಹೋಲಿಸಿದರೆ ಸ್ಥಳೀಯ ಮಾರುಕಟ್ಟೆಯಲ್ಲಿ ಈರುಳ್ಳಿಗೆ ಬೇಡಿಕೆ ಹೆಚ್ಚಿದೆ. ಮಳೆಯಿಂದಾಗಿ ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಈರುಳ್ಳಿ ಕೊಯ್ಲು ಒಂದು ತಿಂಗಳು ವಿಳಂಬವಾಗಿದೆ. ಮಹಾರಾಷ್ಟ್ರದ ಅಹಮದ್ ನಗರದಲ್ಲಿಯೂ ಪೂರೈಕೆ ಕಡಿಮೆಯಾಗಿದೆ. ಬಾಂಗ್ಲಾದೇಶದಿಂದ ಈರುಳ್ಳಿಗೆ ಹೆಚ್ಚಿನ ಬೇಡಿಕೆ ಇದೆ, ಇದರ ಪರಿಣಾಮವಾಗಿ ಈರುಳ್ಳಿ ಬೆಲೆ ಏರುತ್ತಿದೆ ಎಂದು ಮಾರುಕಟ್ಟೆ ಮೂಲಗಳು ಹೇಳಿವೆ.

Leave a Comment

Your email address will not be published. Required fields are marked *