Ad Widget .

ಲಂಡನ್: ಒಂದೇ ವರ್ಷದಲ್ಲಿ 7 ಶಿಶುಗಳನ್ನ ಹತ್ಯೆ ಮಾಡಿದ ಬ್ರಿಟಿಷ್‌ ನರ್ಸ್| ಭಾರತೀಯ ಮೂಲದ ವೈದ್ಯನಿಂದ ಬಲೆಗೆ

ಸಮಗ್ರ ನ್ಯೂಸ್: ಕಳೆದ ಒಂದು ವರ್ಷದಲ್ಲಿ 7 ನವಜಾತ ಶಿಶುಗಳನ್ನ ಹತ್ಯೆ ಮಾಡಿ, ಇನ್ನೂ 6 ಶಿಶುಗಳನ್ನು ಕೊಲ್ಲಲು ಪ್ರಯತ್ನಿಸಿದ್ದ ಬ್ರಿಟಿಷ್ ನರ್ಸ್ ಒಬ್ಬಳನ್ನು ತಪ್ಪಿತಸ್ಥೆ ಎಂದು ನ್ಯಾಯಾಲಯ ಪರಿಗಣಿಸಿದ್ದು, ಆರೋಪಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಕ್ರೌನ್ ಪ್ರಾಸಿಕ್ಯೂಷನ್ ಸೇವೆ ತಿಳಿಸಿದೆ.

Ad Widget . Ad Widget .

ಹಂತಕಿ ಲೂಸಿ ಲೆಟ್ಬಿ ಎಂದು ಗುರುತಿಸಲಾಗಿದ್ದು, 2015ರ ಜೂನ್ ರಿಂದ 2016ರ ಜೂನ್ ನಡುವೆ ವಾಯವ್ಯ ಇಂಗ್ಲೆಂಡ್‌ನ ಕೌಂಟೆಸ್ ಆಫ್ ಚೆಸ್ಟರ್ ಆಸ್ಪತ್ರೆಯಲ್ಲಿ ಈ ಸರಣಿ ಕೊಲೆಗಳನ್ನ ಮಾಡಿದ್ದಾಳು. ಕಳೆದ ಅಕ್ಟೋಬರ್‌ನಿಂದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು ಆ. 18ರಂದು ಈ ಕುರಿತು ವಿಚಾರಣೆ ನಡೆಸಿದ ಇಂಗ್ಲೆಂಡ್‌ನ ಕೋರ್ಟ್ ಶಿಶುಹತ್ಯೆಯ ಆರೋಪಿ ನರ್ಸ್ ಗೆ ಶಿಕ್ಷೆ ವಿಧಿಸಲು ಮುಂದಾಗಿದೆ. ಈಕೆಗೆ ಶಿಕ್ಷೆ ವಿಧಿಸಲು ಭಾರತೀಯ ಮೂಲದ ಮಕ್ಕಳ ವೈದ್ಯರ ಸಲಹೆಗಾರ ಡಾ.ರವಿ ಜಯರಾಮ್ ಸಹಕರಿಸಿದ್ದಾರೆ.

Ad Widget . Ad Widget .

ಈಕೆ ಕೊಲೆ ಮಾಡುತ್ತಿದ್ದದ್ದು ಹೇಗೆ?
ಚಾಲಾಕಿ ಮಹಿಳೆಯಿಂದ ಕೊಲೆಯಾದ ಹೆಚ್ಚಿನ ಮಕ್ಕಳು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಏಕೆಂದರೆ ಲೂಸಿ ಲೆಟ್ಬಿ (33) ತನ್ನ ಆರೈಕೆಯಲ್ಲಿದ್ದ ಶಿಶುಗಳಿಗೆ ವಿಷಪೂರಿತ ಚುಚ್ಚುಮದ್ದು ನೀಡುತ್ತಿದ್ದಳು. ಜೊತೆಗೆ ಹಾಲಿನೊಂದಿಗೆ ವಿಷಪೂರಿತ ಲಿಕ್ವಿಡ್ ಬೆರಸಿ ಕೊಡುತ್ತಿದ್ದಳು. ಜೊತೆಗೆ ಮಕ್ಕಳನ್ನು ಉಸಿರುಗಟ್ಟಿಸಿ, ದೈಹಿಕವಾಗಿ ಹಲ್ಲೆ ನಡೆಸಿ ಕೊಂದಿದ್ದಾಳೆ ಎಂದು ಪ್ರಾಸಿಕ್ಯೂಟರ್‌ಗಳು ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್ ಗೆ ತಿಳಿಸಿದ್ದಾರೆ.

ಈ ಹಿಂದೆ ಆಕೆಯ ನಿವಾಸದಲ್ಲಿ ತನಿಖೆ ನಡೆಸಿದಾಗ ಕೆಲ ಪತ್ರಗಳು ಪತ್ತೆಯಾಗಿದ್ದು, ಅದರಲ್ಲಿ ನಾನು ದೆವ್ವ, ಅವಳನ್ನು ನೋಡಿಕೊಳ್ಳಲು ನಾನು ಯೋಗ್ಯವಲ್ಲದ ಕಾರಣ ಉದ್ದೇಶಪರ‍್ವಕವಾಗಿ ಕೊಂದಿದ್ದೇನೆ. ನಾನು ಕೆಟ್ಟವಳು, ಅದಕ್ಕಾಗಿಯೇ ಹಾಗೆ ಮಾಡಿದ್ದೇನೆ ಮತ್ತು ಇಂದು ನಿಮ್ಮ ಜನ್ಮದಿನ ಆದರೆ ನೀವೇ ಇಲ್ಲ, ಅದಕ್ಕಾಗಿ ನಾನು ತುಂಬಾ ವಿಷಾದಿಸುತ್ತೇನೆ ಎಂದು ಆಕೆ ಬರೆದಿದ್ದ ಪತ್ರಗಳು ಪತ್ತೆಯಾಗಿದ್ದವು.

ಮೊದಲಬಾರಿಗೆ 2015 ರಲ್ಲಿ ಆಕೆಯ ಈ ಕೃತ್ಯ ಬೆಳಕಿಗೆ ಬಂದಿತ್ತು. ಅದೇ ವರ್ಷ ಮೂವರು ಮಕ್ಕಳು ಸಾವನ್ನಪ್ಪಿದ್ದವು. ಕೊನೆಗೆ ಏಪ್ರಿಲ್ 2017 ರಲ್ಲಿ ರಾಷ್ಟ್ರೀಯ ಆರೋಗ್ಯ ಸೇವೆ ಟ್ರಸ್ಟ್, ಪೊಲೀಸರು ವೈದ್ಯರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಟ್ಟಿತ್ತು. ನಂತರ ಪ್ರಕರಣದ ತನಿಖೆ ಮುಂದುವರಿದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 2018 ಮತ್ತು ನವೆಂಬರ್ 2020ರ ನಡುವೆ ಆಕೆಯನ್ನು ಮೂರು ಬಾರಿ ಬಂಧಿಸಿ ಬಿಡುಗಡೆಗೊಳಿಸಲಾಗಿತ್ತು. ಘಟನೆ ಬೆಳಕಿಗೆ ಬಂದ ನಂತರ ಆಕೆಯನ್ನು ದೇಶದ ಅತ್ಯಂತ ಕೆಟ್ಟ ಬೇಬಿ ಸೀರಿಯಲ್ ಕಿಲ್ಲರ್ ಎಂದು ಸಹ ಪರಿಗಣಿಸಲಾಗಿತ್ತು.

ಹಿಂದೆಯೂ ನಡೆದಿತ್ತು ಮಾರಣಹೋಮ:
ಬ್ರಿಟನ್‌ನಲ್ಲಿ ಈ ಬೆಚ್ಚಿ ಬೀಳಿಸುವ ಪ್ರಕರಣ ಇದು ಮೊದಲನೆಯದಲ್ಲ ಈ ಹಿಂದೆಯೂ ಡಾಕ್ಟರ್ ಹೆರಾಲ್ಡ್ ಶಿಪ್‌ಮನ್ ಮತ್ತು ನರ್ಸ್ ಬೆರ‍್ಲಿ ಅಲಿಟ್ ಎಂಬವರು ಇಂತಹದ್ದೇ ಕುಕೃತ್ಯ ಎಸಗಿದ್ದರು.

ಶಿಪ್‌ಮನ್ 2004ರಲ್ಲಿ 15 ರೋಗಿಗಳನ್ನು ಕೊಂದಿದ್ದು. ಆಗ, ಆತನಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಆದ್ರೆ ಅವನು ಜೈಲಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಇದಕ್ಕೂ ಮುನ್ನ 1971 ಮತ್ತು 1998ರ ಅವಧಿಯಲ್ಲಿ ವೈದ್ಯ ಮರ‍್ಫಿನ್ ಎಂಬಾತ ವಿಷಪೂರಿತ ಚುಚ್ಚುಮದ್ದು ನೀಡಿ ಸುಮಾರು 250 ರೋಗಿಗಳನ್ನು ಮಾರಣಹೋಮ ಮಾಡಿದ್ದರು.

Leave a Comment

Your email address will not be published. Required fields are marked *