Ad Widget .

ವಿಧಾನ ಪರಿಷತ್ ಗೆ ಮೂವರು ನಾಮನಿರ್ದೇಶನ

ಸಮಗ್ರ ನ್ಯೂಸ್: ವಿಧಾನ ಪರಿಷತ್‌ಗೆ ಕೊನೆಗೂ ಮೂವರು ಹೆಸರು ಫೈನಲ್ ಆಗಿದೆ. ಉಮಾಶ್ರೀ, ಸುಧಾಮ್ ದಾಸ್ ಹಾಗೂ ಮಾಜಿ ಸಚಿವ ಎಂ.ಆರ್.ಸೀತಾರಾಮ್ ಅವರನ್ನು ಪರಿಷತ್ ಸ್ಥಾನಕ್ಕೆ ನಾಮನಿರ್ದೇಶನ ಮಾಡಲಾಗಿದೆ. ಮೂವರು ಹೆಸರನ್ನು ರಾಜ್ಯಪಾಲರು ಅನುಮೋದಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ವಿಧಾನ ಪರಿಷತ್‌ಗೆ ನಟಿ ಉಮಾಶ್ರೀ, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಹಾಗೂ ನಿವೃತ್ತ ಇ.ಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮ್ಯಯ ಅಂತಿಮಗೊಳಿಸಿ ರಾಜ್ಯಪಾಲರಿಗೆ ರವಾನಿಸಿದ್ದರು. ಆದರೆ ಸುಧಾಮ್ ದಾಸ್ ಹೆಸರು ಶಿಫಾರಸ್ಸು ಮಾಡಿದ್ದಕ್ಕೆ ಸ್ವಪಕ್ಷೀಯರಿಂದಲೇ ಆಕ್ಷೇಪ ಕೇಳಿಬಂದಿತ್ತು.

Ad Widget . Ad Widget . Ad Widget .

ಈ ಮೂವರಿಗೆ ಟ್ವೀಟ್ ಮಾಡಿ ಸಿಎಂ ಸಿದ್ದರಾಮಯ್ಯ ಶುಭಕೋರಿದ್ದಾರೆ. ‘ವಿಧಾನ ಪರಿಷತ್‌ನ ನೂತನ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಎಂ.ಆರ್ ಸೀತಾರಾಂ, ಶ್ರೀಮತಿ ಉಮಾಶ್ರೀ ಹಾಗೂ ಸುಧಾಮ್ ದಾಸ್ ಅವರಿಗೆ ಅಭಿನಂದನೆಗಳು. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವ ಕೆಲಸ ನಿಮ್ಮಿಂದಾಗಲಿ ಎಂದು ಆಶಿಸುತ್ತೇನೆ’ ಎಂದಿದ್ದಾರೆ.

Leave a Comment

Your email address will not be published. Required fields are marked *