Ad Widget .

ಡಿಕೆ ಶಿವಕುಮಾರ್ ರಿಂದ ಅನಧಿಕೃತ ಬ್ಯಾನರ್| ನಿಯಮ ಮೀರಿದ ಸಚಿವರಿಗೇ ದಂಡ ವಿಧಿಸಿದ ಬಿಬಿಎಂಪಿ|

ಸಮಗ್ರ ನ್ಯೂಸ್: ಬೆಂಗಳೂರು ನಗರದಲ್ಲಿ ಅಳವಡಿಸಿರುವ ಅನಧಿಕೃತ ಬ್ಯಾನರ್​​ಗಳಿಗೆ ದಂಡ ವಿಧಿಸುವ ಕಾರ್ಯವನ್ನು ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ (BBMP) ಮುಂದುವರಿಸಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಳವಡಿಸಿದ್ದ ಅನಧಿಕೃತ ಬ್ಯಾನರ್ ಮೇಲೆ ದಂಡ 50,000 ರೂ. ದಂಡ ವಿಧಿಸಿದೆ.

Ad Widget . Ad Widget .

ಬೆಂಗಳೂರಿನ ವಸಂತನಗರದ ಮಿಲ್ಲರ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಎದುರು ಬ್ಯಾನರ್ ಹಾಕಲಾಗಿತ್ತು. ಇದಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ದಂಡ ವಿಧಿಸಲಾಗಿದೆ.

Ad Widget . Ad Widget .

ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ಹಾಗೂ ರಾಜ್ಯದ ಎಲ್ಲಾ ಪದಾಧಿಕಾರಿಗಳು ಒಳಗೊಂಡ ಬ್ಯಾನರ್​​​ಗೆ ದಂಡ ಹಾಕಲಾಗಿದೆ. ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಅನಧಿಕೃತವಾಗಿ ಬ್ಯಾನರ್ ಅಳವಡಿಸಲಾಗಿತ್ತು.

ಬೆಂಗಳೂರು ನಗರದಲ್ಲಿ ಅಳವಡಿಸಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್​ಗಳನ್ನು ತೆರವುಗೊಳಿಸುವ ವಿಚಾರವಾಗಿ ಇತ್ತೀಚೆಗಷ್ಟೇ ಬಿಬಿಎಂಪಿಯನ್ನು ಹೈಕೋರ್ಟ್​ ತರಾಟೆಗೆ ತೆಗೆದುಕೊಂಡಿತ್ತು. ಅದರ ಬೆನ್ನಲ್ಲೇ, ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್​ ಅಳವಡಿಸುವಂತಿಲ್ಲ ಎಂದು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದರು. ಇದಾದ ನಂತರವೂ ಹೇಳಿಕೊಳ್ಳುವ ಮಟ್ಟಿನ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಸಿಟ್ಟಿಗೆದ್ದಿದ್ದ ಹೈಕೋರ್ಟ್​, ಸರ್ಕಾರಕ್ಕೆ ಛೀಮಾರಿ ಹಾಕಿತ್ತು.

Leave a Comment

Your email address will not be published. Required fields are marked *