ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ವರ್ಗಾವಣೆ| ನೂತನ ಎಸ್ಪಿಯಾಗಿ ಅಮಾಟೆ ವಿಕ್ರಮ್ ನೇಮಕ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಉಮಾ ಪ್ರಶಾಂತ್ ಅವರನ್ನು ವರ್ಗಾವಣೆ ಮಾಡುವಂತೆ ಆ. 23 ರಂದು ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಜಿಲ್ಲೆಯ ನೂತನ ಎಸ್ಪಿಯನ್ನಾಗಿ ಅಮಾಟೆ ವಿಕ್ರಮ್ ಅವರನ್ನು ನೇಮಿಸಲಾಗಿದೆ.

. Ad Widget . Ad Widget

2021ನೇ ಸಾಲಿನ ಬ್ಯಾಚ್‍ನ ಐಪಿಎಸ್ ಅಧಿಕಾರಿ ಅಮಟೆ ವಿಕ್ರಮ್ ಅವರನ್ನು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಯುಕ್ತಿಗೊಳಿಸಿ ರಾಜ್ಯ ಸರಕಾರದ ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ನಾಗಪ್ ಎಸ್. ಪರೀತ್ ಅವರು ಹೊರಡಿಸಿದ ಆದೇಶ ಮೇಲೆ ದ.ಕ. ಜಿಲ್ಲೆಯಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಉಮಾ ಪ್ರಶಾಂತ್ ಅವರನ್ನು ದಾವಣಗೆರೆ ಜಿಲ್ಲೆಯ ಎಸ್ಪಿಯನ್ನಾಗಿ ನೇಮಿಸಲಾಗಿದೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *