ಸಮಗ್ರ ನ್ಯೂಸ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸುಳ್ಯದ ಶಿಕ್ಷಣ ಕ್ರಾಂತಿಯ ಹರಿಕಾರ ದಿ. ಡಾ ಕುರುಂಜಿ ವೆಂಕಟರಮಣ ಗೌಡರ ಧರ್ಮಪತ್ನಿ ದಿ. ಶ್ರೀಮತಿ ಜಾವಕಿ ವೆಂಕಟರಮಣ ಗೌಡರ 11 ನೇ ಪುಣ್ಯಸ್ಮರಣೆ ಪ್ರಯುಕ್ತ ನುಡಿನಮನ ಕಾರ್ಯಕ್ರಮ ಆಗಸ್ಟ್ 22 ರಂದು ನಡೆಯಿತು.

ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ.ಎಂ. ದಿ.ಜಾವಕಿ ವೆಂಕಟರಮಣ ಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ನುಡಿನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.