Ad Widget .

ಹವಾಮಾನ ವರದಿ| ಮತ್ತೆ ಮುಂಗಾರು ಚುರುಕಾಗುವ ಮುನ್ಸೂಚನೆ| ಕರಾವಳಿಯಲ್ಲಿ ಉತ್ತಮ ಮಳೆ ಸಾಧ್ಯತೆ ಎಂದ ಐಎಂಡಿ

ಸಮಗ್ರ ನ್ಯೂಸ್: ಈ ಬಾರಿ ರಾಜ್ಯಕ್ಕೆ ಮುಂಗಾರು ಆಗಮನ ಕೊಟ್ಟಿದ್ದೇ ವಿಳಂಬವಾಗಿ. ಜುಲೈ ತಿಂಗಳ ಮಧ್ಯದಲ್ಲಿ ಆರ್ಭಟಿಸಿದ ಮಳೆರಾಯ ಹಲವೆಡೆ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದ್ದ. ಆದರೆ ಆಗಸ್ಟ್ ತಿಂಗಳಲ್ಲಿ ಒಂದೆರಡು ದಿನ ಮಾತ್ರ ಮಳೆ ಬಂದಹಾಗೆ ಮಾಡಿ ಇದೀಗ ಸಂಪೂರ್ಣವಾಗಿ ನಿಂತು ಹೋಗಿದೆ. ನಿನ್ನೆ (ಆಗಸ್ಟ್‌ 22) ಹಲವೆಡೆ ಮಾತ್ರ ಜಿನುಗು ಮಳೆಯಾದರೆ, ಇನ್ನು ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾರವಣವೇ ಮುಂದುವರೆದಿತ್ತು.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಇಂದು (ಆಗಸ್ಟ್‌ 22) ರಾಜ್ಯದ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲೂ ಅಬ್ಬರದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಿದೆ ಅಂತಲೂ ತಿಳಿಸಿದೆ.

Ad Widget . Ad Widget . Ad Widget .

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ರವಾನಿಸಿದೆ.

ಒಟ್ಟಿನಲ್ಲಿ ಹವಾಮಾನ ಇಲಾಖೆಯು ಆಗಸ್ಟ್‌ ತಿಂಗಳ ಅಂತ್ಯದಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಅಬ್ಬರದ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಈಗಾಗಲೇ ನೀಡಿದೆ. ಈ ಪ್ರಕಾರ ಮಳೆಯಾದರೆ ಜಲಾಶಯಗಳು ಸೇರಿದಂತೆ ನೀರಿನ ಮೂಲಗಳಿಗೆ ಮತ್ತೆ ಜೀವಕಳೆ ಬಂದಂತಾಗುತ್ತದೆ

Leave a Comment

Your email address will not be published. Required fields are marked *