ಸಮಗ್ರ ನ್ಯೂಸ್: ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವತಿಯೊಬ್ಬಳಿಗೆ ಚೂರಿ ಇರಿದು ಪರಾರಿಯಾದ ಘಟನೆ ಆ.24 ರಂದು ನಡೆದಿದೆ.
ಗಾಯಗೊಂಡ ಯುವತಿಯನ್ನು ವಿಟ್ಲದ ಕುದ್ದುಪದವು ಮೂಲದವಳು ಎಂದು ಗುರುತಿಸಲಾಗಿದೆ. ಈಕೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಹಿಂಬದಿ ಹಾಗೂ ಮಹಿಳಾ ಪೊಲೀಸ್ ಠಾಣೆಯ ಬಳಿ ನಿಂತಿದ್ದ ವೇಳೆ ಬೈಕಿನಲ್ಲಿ ಬಂದ ಆರೋಪಿ ಪದ್ಮರಾಜ್ ಚೂರಿ ಇರಿದು ಪರಾರಿಯಾಗಿದ್ದಾನೆ. ಘಟನೆಯಲ್ಲಿ ಯುವತಿ ರಕ್ತದ ಮಡುವಿನಲ್ಲಿ ಬಿದ್ದಿದ್ದು ಬಳಿಕ ಪೋಲೀಸರು ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.
ಮೇಲ್ನೋಟಕ್ಕೆ ಯುವಕ ಕೊಲೆಯತ್ನ ನಡೆಸಿರುವುದು ಕಂಡುಬರುತ್ತಿದ್ದು ಪುತ್ತೂರು ನಗರ ಪೊಲೀಸರು ಆರೋಪಿಯನ್ನು ಬಂಧಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.