ಸಮಗ್ರ ನ್ಯೂಸ್: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿಯಲ್ಲಿ ನಡೆಯುವ ಭಾರತೀಯ ಜನತಾ ಪಾರ್ಟಿ ಪ್ರತಿಭಟನಾ ಹೋರಾಟದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಭಾಗಿಯಾಗುವಂತೆ ಶಾಸಕ ಹರೀಶ್ ಪೂಂಜ ಹಾಗೂ ತಂಡ ಆ.24 ರಂದು ಅವರ ಮನೆಗೆ ಭೇಟಿ ನೀಡಿ ಆಹ್ವಾನಿಸಿದೆ.
ನೈಜ ಆರೋಪಿಗಳ ಪತ್ತೆಗಾಗಿ ಆಗಸ್ಟ್ 27 ರಂದು ಬೆಳ್ತಂಗಡಿಯಲ್ಲಿ ನಡೆಯುವ ಭಾರತೀಯ ಜನತಾ ಪಾರ್ಟಿ ಪ್ರತಿಭಟನಾ ಹೋರಾಟದಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಭಾಗಿಯಾಗುವಂತೆ ಶಾಸಕ ಹರೀಶ್ ಪೂಂಜ ಹಾಗೂ ಅವರ ಸೌಜನ್ಯಳ ಮನೆಗೆ ತೆರಳಿ ಆಹ್ವಾನಿಸಿದ್ದಾರೆ. ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಆ.27ರಂದು ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಸೇರಿ ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ಬೃಹತ್ ಹೋರಾಟ ನಡೆಯಲಿದೆ.
ಪ್ರತಿಭಟನೆಯಲ್ಲಿ ಎರಡೂ ಜಿಲ್ಲೆಗಳ ಶಾಸಕರು, ನಾಯಕರು ಭಾಗಿಯಾಗಲಿದ್ದಾರೆ. ಮರುದಿನ ಶಾಸಕರ ನಿಯೋಗ ಸಿಎಂಗೆ ಹಾಗೂ ರಾಜ್ಯಪಾಲರಿಗೆ ಮನವಿ ನೀಡಿ ಮರುತನಿಖೆಗೆ ಒತ್ತಾಯಿಸಲಿದೆ.